ಹಾಸನ: ಲೋಕಸಭಾ ಸಾರ್ವತ್ರಿಕ ಚುನಾ ವಣೆ ಮತ ಎಣಿಕೆ ಕಾರ್ಯವು ಮೇ 23ರಂದು ಹಾಸನ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 6ರಿಂದ ಮೇ 24ರ ಮಧ್ಯರಾತ್ರಿ 12ಗಂಟೆವರೆಗೆ 2 ದಿನಗಳು ಮುಂಜಾಗ್ರತೆಗಾಗಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ವಿಜಯೋತ್ಸವ ಮತ್ತು ಕರಾಳ ದಿನಾ ಚರಣೆ ನಡೆಸುವುದು ನಿಷೇಧಿಸಿದೆ. ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಫೋಟಕಗಳ ಸಾಗಾಣಿಕೆ, ವಿಜಯೋತ್ಸವದ ನೆಪದಲ್ಲಿ ಹೂ ಬಾಣಗಳು ಪಟಾಕಿ ಸಿಡಿಸುವುದು, ಸಾರ್ವಜನಿಕರಿಗೆ ಭೌತಿಕ ವಾಗಿ ಹಿಂಸೆಯನ್ನು ಉಂಟು ಮಾಡಲು ಬಳಸಬಹುದಾದಂ ತಹ ಅಪಾಯಕಾರಿ ಆಯುಧಗಳನ್ನು ಒಯ್ಯುವುದು ನಿಷೇಧಿಸಿದೆ.
ಯಾವುದೇ ರೀತಿಯ ಬಂದ್, ಪ್ರತಿಭಟನೆ ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ ಹಾಗೂ ಪೂರಕ ಚಟುವಟಿಕೆಗಳನ್ನು ನಿಷೇಧಿಸಿದೆ. ಯಾವುದೇ ಖಾಸಗಿ-ಸಾರ್ವಜನಿಕ ಆಸ್ತಿಗಳನ್ನು ಹಾನಿಗೊಳಿಸುವ ಮತ್ತು ವಿರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿದೆ.
ಯಾವುದೇ ವ್ಯಕ್ತಿಯ ಜಾತಿ, ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆಗೆ ಬಾಧಕ ಉಂಟು ಮಾಡಬಹು ದಾದಂತಹ ಚಟುವಟಿಕೆಗಳನ್ನು ನಿಷೇಧಿಸಿದೆ. ಸರ್ಕಾರಿ ಸಂಸ್ಥೆ ಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ, ಸಿಬ್ಬಂದಿ ಗಳ ವಿರುದ್ಧ ನಿಂದಿಸುವಂತಹ, ಅವಹೇಳನಕಾರಿಯಾ ದಂತಹ ಯಾವುದೇ ಘೋಷಣೆಗಳು, ಭಾಷಣ ಪ್ರಕಟಣೆಗಳು ಅವಾಚ್ಯ ಶಬ್ದಗಳ ಬಳಕೆ, ಆವೇಶಕಾರಿ, ಪ್ರಚೋದನಾಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಚುನಾವಣೆ ಕರ್ತವ್ಯ ನಿರತ ಅಧಿಕಾರಿ, ಸಿಬ್ಬಂದಿ, ಚುನಾವಣಾ ಅಭ್ಯರ್ಥಿ, ಏಜೆಂಟ್, ಮಾಧ್ಯಮದವರನ್ನು ಒಳಗೊಂಡಂತೆ ಪೂರ್ವಾನುಮತಿ ಪಡೆದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶ ನಿಷೇಧಿಸಿದೆ.
ಈ ನಿಷೇಧಾಜ್ಞೆಯು ಶವಯಾತ್ರೆ ಹಾಗೂ ಪೂರ್ವಾ ನುಮತಿ ಪಡೆದ ಧಾರ್ಮಿಕ ಮೆರವಣಿಗೆಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.