ಮೈಸೂರು ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ: ಹೈಕಮಾಂಡ್ ತೀರ್ಮಾನವೇ ಅಂತಿಮ
ಮೈಸೂರು

ಮೈಸೂರು ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ: ಹೈಕಮಾಂಡ್ ತೀರ್ಮಾನವೇ ಅಂತಿಮ

February 19, 2021

ಮೈಸೂರು,ಫೆ.18- ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ವಿಚಾರ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಶಾಸಕ ಸಾ.ರಾ.ಮಹೇಶ್ ತಿಳಿಸಿದರು. ಮೈಸೂರು ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಜೆಡಿಎಸ್ ಸದಸ್ಯರ ಸಭೆ ನಡೆಯಿತು. ಸದಸ್ಯರು ಅಂತಿಮ ನಿರ್ಧಾರವನ್ನು ಹೈಕಮಾಂಡ್‍ಗೆ ಬಿಟ್ಟಿದ್ದಾರೆ. ಯಾವುದೇ ಸ್ಪಷ್ಟ ತೀರ್ಮಾನವಿಲ್ಲದೆ ಸಭೆ ಮುಕ್ತಾಯವಾಗಿದೆ. ಕೆಲ ಸದಸ್ಯರು ಬಿಜೆಪಿ ಜೊತೆ ಮೈತ್ರಿ ಬೇಡ ಎಂದಿದ್ದಾರೆ. ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷ ದೊಂದಿಗೆ ಮೈತ್ರಿ ಮಾಡಿಕೊಂಡರೂ ನಮ್ಮ ಅಭ್ಯಂತರವಿಲ್ಲ ವೆಂದು ಬಹುತೇಕ ಸದಸ್ಯರು ಹೇಳಿದ್ದಾರೆ. ಶಾಸಕ ಸಾ.ರಾ. ಮಹೇಶ್ ಅಧ್ಯಕ್ಷತೆಯಲ್ಲಿ ಅಭಿಪ್ರಾಯ ಸಂಗ್ರಹವಾಗಿದ್ದು, ಮೇಯರ್ ವಸತಿ ಗೃಹದಲ್ಲಿ ಸಭೆ ನಡೆದಿದೆ. ಜೆಡಿಎಸ್ ಸಭೆ ಬಳಿಕ ಶಾಸಕ ಸಾ.ರಾ.ಮಹೇಶ್ ಸುದ್ದಿಗಾರ ರೊಂದಿಗೆ ಮಾತನಾಡಿ, ಹೈಕಮಾಂಡ್ ತೀರ್ಮಾನವೇ ಅಂತಿಮ. ಜೆಡಿಎಸ್ ಸದಸ್ಯರ ಎರಡನೇ ಸಭೆ ನಡೆಸಿದ್ದೇವೆ. ಎಲ್ಲಾ ಸದಸ್ಯರು ಅಂತಿಮ ತೀರ್ಮಾನವನ್ನು ಹೈಕಮಾಂ ಡ್‍ಗೆ ಬಿಟ್ಟಿದ್ದಾರೆ. ಹೈಕಮಾಂಡ್ ತೀರ್ಮಾನ ಪಾಲಿಸೋಕೆ ನಾವೆಲ್ಲ ಬದ್ದ. ಮೈಸೂರು ಜಿಲ್ಲೆಯೊಳಗೆ ಬಿಜೆಪಿ ಮತ್ತು ಕಾಂಗ್ರೆಸ್ ರಾಜ ಕೀಯವಾಗಿ ನಮಗೆ ಸಮಾನ ವೈರಿಗಳು. ಆದರೆ ಆಡಳಿತ ವ್ಯವಸ್ಥೆಯಲ್ಲಿ ಹೊಂದಾಣಿಕೆ ಅನಿವಾರ್ಯ. ಹೀಗಾಗಿ ಯಾವ ಪಕ್ಷದ ಜೊತೆ ಹೋಗಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ಆದರೆ ಅಂತಿಮ ತೀರ್ಮಾನವನ್ನು ಹೈಕಮಾಂಡ್‍ಗೆ ಬಿಡಲಾಗಿದೆ ಎಂದಿದ್ದಾರೆ.

 

 

Translate »