ಡಿಕೆಶಿ ವಿರುದ್ಧ ಎಂ.ಬಿ.ಪಾಟೀಲ್ ಸಿಡಿಮಿಡಿ
ಹಾಸನ

ಡಿಕೆಶಿ ವಿರುದ್ಧ ಎಂ.ಬಿ.ಪಾಟೀಲ್ ಸಿಡಿಮಿಡಿ

April 14, 2019

ಅರಸೀಕೆರೆ: ಲಿಂಗಾಯಿತ ಧರ್ಮದ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವ ಕುಮಾರ್ ಮೂಗು ತೂರಿಸುವ ಅಗತ್ಯವಿಲ್ಲ. ಮೊದಲು ಅವರು ತಮ್ಮ ಒಕ್ಕಲಿಗ ಸಮಾಜದ ಒಳ ಜಗಳವನ್ನು ಸರಿಪಡಿಸಲಿ ಎಂದು ಡಿಕೆಶಿ ವಿರುದ್ಧ ಗೃಹ ಸಚಿವ ಎಂ.ಬಿ.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ತಾಲೂಕು ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಮಲ್ಲೇನಹಳ್ಳಿ ಶಿವಶಂಕರ್ ಸ್ವಾಮಿ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ವೀರಶೈವ-ಲಿಂಗಾಯಿತ ಧರ್ಮದ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೂಗು ತೂರಿಸುವ ಅಗತ್ಯವಿಲ್ಲ. ಮೊದಲು ಅವರು ತಮ್ಮ ಮನೆಯನ್ನು ಸರಿಪಡಿಸಿಕೊಂಡು ನಂತರ ಇನ್ನಿತರೇ ಸಮುದಾಯ ಗಳನ್ನು ಸರಿಪಡಿಸಲು ಪ್ರಯತ್ನಿಸಲಿ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಅವರಿಗೆ ಅನ್ಯ ಧರ್ಮಗಳಲ್ಲಿ ಮೂಗು ತೂರಿಸುವ ಚಟಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಗಳಿಂದ ಮೈತ್ರಿ ಸರ್ಕಾರಕ್ಕೆ ಕೊಡಲಿ ಪೆಟ್ಟು ಬಿದ್ದರೂ ಆಶ್ಚರ್ಯವಿಲ್ಲ. ಇಂತಹ ಸೂಕ್ಷ್ಮ ವಿಚಾರಗಳಲ್ಲಿ ಡಿಕೆಶಿ ಮಧÀ್ಯ ಪ್ರವೇಶ ಮಾಡುವುದನ್ನು ನಿಲ್ಲಿಸಬೇಕು. ತಮ್ಮ ಸಮಾಜದ ಅಭ್ಯರ್ಥಿಗಳನ್ನು ಗೆಲ್ಲಿಸುವುದರ ಮೂಲಕ ಖಾತೆ ತೆರೆಯಬೇಕು ಎಂದು ಟಾಂಗ್ ನೀಡಿದರು.

ಜಿಲ್ಲೆಯಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಉತ್ತಮ ಕೆಲಸಗಳನ್ನು ಮಾಡುವ ಇಚ್ಛಾಶಕ್ತಿ ಹೊಂದಿ ದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ಕಾರ್ಯಕರ್ತರು ಒಗ್ಗೂಡಿ ಶ್ರಮಿಸಿ ಪ್ರಜ್ವಲ್ ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು ಎಂದರು.

ಹಳೇ ಮೈಸೂರು ಭಾಗದಲ್ಲಿ ಇಪ್ಪತ್ತು ಲಕ್ಷಕ್ಕೂ ಹೆಚ್ಚು ಲಿಂಗಾಯಿತ ಮತದಾರರಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಸ್ಥಾನಮಾನಗಳು ಸಿಕ್ಕಿಲ್ಲ. ಹೀಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ಬೆಂಬಲಿಸಿ ತಮ್ಮ ಬೇಡಿಕೆಗಳನ್ನು ಪಡೆಯಲು ಆಸಕ್ತರಾಗಿದ್ದಾರೆ. ಈ ಭಾಗದ ಲಿಂಗಾಯಿತ ಧರ್ಮಕ್ಕೆ ಯಾವುದೇ ನಿಗಮ ಮಂಡಳಿ ನೀಡದಿರುವುದರಿಂದ ಪಕ್ಷ ಸಂಘಟನೆಗೆ ತೊಂದರೆಯಾಗಬಹುದು ಎಂಬ ಕಾರಣಕ್ಕಾಗಿ ವೀರಶೈವ ಧರ್ಮಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಲು ಪಕ್ಷದ ವರಿಷ್ಠರೊಂದಿಗೆÉ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದರು.

ಇತ್ತೀಚೆಗೆ ಅರಸೀಕೆರೆ ತಾಲೂಕಿಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತಾಡುತ್ತಾ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆ ಗಳಲ್ಲಿ ರಾಜ್ಯ ಮೈತ್ರಿ ಸರ್ಕಾರ ಬಿದ್ದು ಹೋಗುತ್ತದೆ ಎಂಬ ಮಾತುಗಳನ್ನು ಹಾಡಿದ್ದಾರೆ. ಇದಕ್ಕೂ ಮುನ್ನ ಇಂತಹ ವಿಚಾರಗಳಿಗೆ ಅಂತಿಮ ದಿನಗಳನ್ನು ಪ್ರಕಟಿಸಿದ್ದ ಅಮಾ ವಾಸ್ಯೆ, ಹುಣ್ಣಿಮೆ, ಯುಗಾದಿ, ದೀಪಾವಳಿಗಳು ಸೇರಿದಂತೆ ಎಲ್ಲಾ ದಿನಗಳು ಬಂದು ಹೋದವು. ಆದರೆ ಯಾವುದು ನಿಜ ವಾಗಲಿಲ್ಲ. ಮುಂದೆಯೂ ಯಾವುದೇ ನಮ್ಮ ಮೈತ್ರಿ ಸರ್ಕಾ ರಕ್ಕೆ ತೊಂದರೆ ಆಗುವುದಿಲ್ಲ. ಇಂತಹ ಹೇಳಿಕೆಗಳನ್ನು ಮೊದಲು ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್, ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಣಾವರ ಶ್ರೀನಿವಾಸ್, ತಾಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಸಂಚಾಲಕ ಗಂಜಿಗೆರೆ ಚಂದ್ರಶೇಖರ್, ಮುಖಂಡ ರಾದ ನಿರಂಜನ್‍ಕುಮಾರ್, ರವಿ ಇನ್ನಿತರರಿದ್ದರು.

Translate »