ಅರ್ಥಪೂರ್ಣವಾಗಿ ನಡೆದ ಅರಣ್ಯ ಹುತಾತ್ಮರ ದಿನಾಚರಣೆ
ಚಾಮರಾಜನಗರ

ಅರ್ಥಪೂರ್ಣವಾಗಿ ನಡೆದ ಅರಣ್ಯ ಹುತಾತ್ಮರ ದಿನಾಚರಣೆ

September 12, 2018

ಚಾಮರಾಜನಗರ:  ನಗರದ ಹೌಸಿಂಗ್ ಬೋರ್ಡ್ ಕಾಲೋನಿ ಯಲ್ಲಿ ಇರುವ ಅರಣ್ಯ ಹುತಾತ್ಮರ ಸ್ಮಾರಕ ಕೇಂದ್ರದಲ್ಲಿ ಮಂಗಳವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿಯೇ ಮುಖ್ಯ ಅತಿಥಿಗಳು ಹಾಗೂ ಆಹ್ವಾನಿತರಿಂದ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ನಮಿಸಿದರು. ನಂತರ ಅರಣ್ಯ ಹುತಾತ್ಮರ ಗೌರವಾರ್ಥ ಒಂದು ನಿಮಿಷ ಮೌನ ಆಚ ರಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಹುತಾತ್ಮ ರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ ಸೂಚಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ.ಬಸವ ರಾಜ ಮಾತನಾಡಿ, ಅರಣ್ಯದ ರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಕ್ತ ಶಸ್ತ್ರಾಸ್ತ್ರಗಳನ್ನು ನೀಡ ಬೇಕಾಗಿದೆ ಎಂದರು.

ಅರಣ್ಯ ಇಲಾಖೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೊರತೆ ಎಂಬುದು ತಿಳಿ ದಿದೆ. ಜಿಲ್ಲೆಯೂ ಬಹಳಷ್ಟು ಅರಣ್ಯ ಪ್ರದೇಶ ಹೊಂದಿದ್ದು, ಇದರ ಉಳಿವಿ ಗಾಗಿ ಎಲ್ಲರೂ ಶ್ರಮಿಸಬೇಕು ಎಂದು ನ್ಯಾಯಾಧೀಶರು ಕರೆ ನೀಡಿದರು.

ಭಾರತೀಯ ಅರಣ್ಯ ಸೇವೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ದಿ.ಪಿ. ಶ್ರೀನಿವಾಸ್ ಅವರು ನರಹಂತಕ ವೀರ ಪ್ಪನ್‍ನಿಂದ ಹತ್ಯೆಗೀಡಾದ ನ.10ರಂದು ಕರ್ನಾಟಕ ಅರಣ್ಯ ಇಲಾಖೆ ಹುತಾತ್ಮರ ದಿನದೆಂದು 1992ರಿಂದ 2012 ರವರೆಗೂ ಆಚರಿಸಲಾಗುತ್ತಿತ್ತು. ಭಾರತ ಸರ್ಕಾರದ ಪರಿಸರ ಮತ್ತು ಅರಣ್ಯ ಸಚಿವರ ನಿರ್ದೇ ಶನದ ಮೇರೆಗೆ ಸೆ.11ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದೆಂದು ಘೋಷಿಸ ಲಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾ ಖೆಯ ಸಿಬ್ಬಂದಿಗಳು ದೇಶದ ಅರಣ್ಯ ಮತ್ತು ವನ್ಯ ಜೀವಿಗಳ ಸಂರಕ್ಷಣೆಗಾಗಿ ಮಾಡಿದ ತ್ಯಾಗ ಮತ್ತು ಬಲಿದಾನಗಳ ಸ್ಮರಣೆಗಾಗಿ ರಾಷ್ಟ್ರೀಯ ಹುತಾತ್ಮರ ದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ ಎಂದರು.

ಬಿಆರ್‍ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶನ ಡಾ.ಪಿ.ಶಂಕರ್ ಹುತಾತ್ಮರ ಹೆಸರನ್ನು ವಾಚಿಸಿದರು. ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್, ಎಸಿಎಫ್ ನಾಗರಾಜು, ರಾಜ್ಯ ವನ್ಯ ಜೀವಿ ಮಂಡಳಿ ಸದಸ್ಯ ಮಲ್ಲೇಶಪ್ಪ, ವಲಯ ಅರಣ್ಯಾಧಿಕಾರಿ ಗಳಾದ ಮಹದೇವಯ್ಯ, ಧನು, ರಾಘವೇಂದ್ರ ಅಗಸೆ, ಶಿವರಾಮು, ನಾಗೇಂದ್ರನಾಯ್ಕ ಇತರರು ಉಪಸ್ಥಿತರಿದ್ದರು.

Translate »