ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣೆ
ಕೊಡಗು

ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣೆ

November 18, 2018

ವಿರಾಜಪೇಟೆ: ವಿಶೇಷ ಅಗತ್ಯತೆಯುಳ್ಳ ಮಕ್ಕಳ ಭವಿಷ್ಯವನ್ನು ರೂಪಿಸುವುದು ಶಿಕ್ಷಕರು ಮತ್ತು ಪೋಷಕರ ಆಧ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಹೇಳಿದರು.

ಕೊಡಗು ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನ ಇವರ ವತಿಯಿಂದ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತ ನಾಡಿ, ವಿಶೇಷ ಅಗತ್ಯತೆಯುಳ ಮಕ್ಕಳಿಗೆ ಸರಕಾರದಿಂದ ದೊರಕುವ ಸೌಲಭ್ಯಗಳನ್ನು ಪೋಷಕರು ಪಡೆದುಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇ ಶಕ ಮಚಾಡೊ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಈ ವರ್ಷ ವಿಶೇಷ ಅಗತ್ಯತೆಯುಳ್ಳ 170 ಮಕ್ಕಳನ್ನು ಗುರುತಿಸಲಾಗಿದೆ. ಕಳೆದ ವರ್ಷ ತಪಾಸಣೆ ನಡೆಸಿದ 63 ಮಕ್ಕಳಿಗೆ ಸಲಕರಣೆಗಳನ್ನು ನೀಡಿ ಸಹಾಯಧನ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಮುಕೊಂಡ ಶಶಿ ಸುಬ್ರಮಣಿ ಮಾತನಾಡಿ, ಎಲ್ಲಾ ಮಕ್ಕಳಂತೆ ವಿಶೇಷ ಅಗತ್ಯತೆಯುಳ್ಳ ಮಕ್ಕಳ ಪ್ರತಿಭೆಯನ್ನು ಶಿಕ್ಷಕರು ಮತ್ತು ಪೋಷಕರು ಗುರುತಿಸಿ ಪ್ರೋತ್ಸಾಹಿಸುವುದರೊಂದಿಗೆ ಅವರಿಗೆ ಸಿಗು ವಂತ ಸೌಲತ್ತುಗಳನ್ನು ಪಡೆದುಕೊಂಡು ಅವರನ್ನು ಉತ್ತಮ ಪ್ರಜೆಗಳಾಗುವಂತೆ ಮಾಡಬೇಕು ಎಂದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಭವ್ಯ ಚಿಟ್ಟಿ ಯಪ್ಪ, ತಾಲೂಕು ಪಂಚಾಯಿತಿ ಸದಸ್ಯ ಬಿ.ಎಂ.ಗಣೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಅಂಬುಜಾ, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವಿಶ್ವನಾಥ್ ಸಿಂಪಿ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಪಿ.ಡಿ.ರತಿ ಮುಂತಾದವರು ಉಪಸ್ಥಿತರಿದ್ದರು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಬಿರದಲ್ಲಿ ತಾಲೂಕಿನ 170 ಮಕ್ಕಳು ತಜ್ಞ ವೈದ್ಯರಿಂದ ತಪಾಸಣೆ ನಡೆಸಿದರಲ್ಲದೆ. ಸಾಧನ ಸಲಕರಣೆಗಳಿಗೆ ಶಿಪರಸ್ಸು ಮಾಡಲಾಯಿತು.

ತಜ್ಞ ವೈದ್ಯರುಗಳಾದ ಇ.ಎನ್.ಟಿ.ಗಿರಿಧರ್, ಡಾ.ಹೇಮ ಪ್ರಿಯಾ, ಡಾ,ಸುದರ್ಶನ್, ಸ್ಕಂದ ಸಂಸ್ಥೆಯಿಂದ 5 ವೈದ್ಯ ರುಗಳು, ಜಿಲ್ಲಾ ಆಸ್ಪತ್ರೆಯಿಂದ ನುರಿತ ವೈದ್ಯರುಗಳು ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು. ಶಿಕ್ಷಣ ಇಲಾ ಖೆಯ ಸಮನ್ವಾಯಧಿಕಾರಿ ಉತ್ತಪ್ಪ ಸ್ವಾಗತಿಸಿದರು. ಬಿ.ಐ.ಇ. ಆರ್.ಟಿ ಅಜಿತಾ ನಿರೂಪಿಸಿ ವಂದಿಸಿದರು. ಶಿಬಿರದಲ್ಲಿ ಮಕ್ಕಳ ಪೊಷಕರುಗಳು ಉಪಸ್ಥಿತರಿದ್ದರು.

Translate »