ಜಿಲ್ಲೆಯ ವೈದ್ಯಕೀಯ ಕ್ಷೇತ್ರ ಮತ್ತಷ್ಟು ಪ್ರಗತಿ ಅಗತ್ಯ
ಕೊಡಗು

ಜಿಲ್ಲೆಯ ವೈದ್ಯಕೀಯ ಕ್ಷೇತ್ರ ಮತ್ತಷ್ಟು ಪ್ರಗತಿ ಅಗತ್ಯ

June 4, 2018

ಮಡಿಕೇರಿ:  ಅಪಘಾತಗಳು ಸಂಭವಿಸಿದಾಗ ಹೆಚ್ಚಿನ ಚಿಕಿತ್ಸೆಗಾಗಿ ಹೊರ ಜಿಲ್ಲೆಗಳ ಆಸ್ಪತ್ರೆಗಳನ್ನೇ ಅವಲಂಬಿಸಬೇಕಾದ ಅನಿವಾರ್ಯ ಪರಿಸ್ಥಿತಿ ಇದ್ದು, ಕೊಡಗು ಜಿಲ್ಲೆ ವೈದ್ಯಕೀಯ ಕ್ಷೇತ್ರದಲ್ಲಿ ಮತ್ತಷ್ಟು ಪ್ರಗತಿಯನ್ನು ಕಾಣುವ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತರಾದ ಜಿ.ರಾಜೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಜವಾಹರ್ ನವೋದಯ ವಿದ್ಯಾಲಯದ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೊಡಗಿನಂತಹ ಮಲೆನಾಡು ಪ್ರದೇಶದಲ್ಲಿ ರಕ್ತದ ಕೊರತೆ ಹೆಚ್ಚಾಗಿ ಕಂಡು ಬರುತ್ತದೆ. ಜಿಲ್ಲಾಸ್ಪತ್ರೆಯಲ್ಲಿ ರಕ್ತ ನಿಧಿ ಕೇಂದ್ರ ವಿದ್ದರೂ ತುರ್ತು ಸಂದರ್ಭಗಳಲ್ಲಿ ರಕ್ತ ದೊರೆಯುವುದಿಲ್ಲ. ಹೀಗಾಗಿ ರಕ್ತ ದಾನಿಗಳ ಸಂಖ್ಯೆ ಹೆಚ್ಚಾಗಬೇಕು ಎಂದ ಅವರು ವೈದ್ಯಕೀಯ ಕ್ಷೇತ್ರದ ಬೆಳವಣ ಗೆಯ ಅಗತ್ಯವಿದೆ ಎಂದರು. ಕೊಡಗಿನಲ್ಲಿ ಅಪಘಾತ ಸಂಭವಿಸಿದರೆ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೊರ ಜಿಲ್ಲೆಯ ಆಸ್ಪತ್ರೆಗಳಿಗೆ ಕರೆದೊಯ್ಯ ಬೇಕಾದ ಪರಿಸ್ಥಿತಿ ಇದ್ದು, ಇದನ್ನು ತಪ್ಪಿಸಲು ಗಾಯಾಳುವಿನ ಪ್ರಾಣ ಉಳಿಸುವ ವೈದ್ಯಕೀಯ ವ್ಯವಸ್ಥೆ ಜಿಲ್ಲೆಯಲ್ಲೇ ಆಗ ಬೇಕಾಗಿದೆ ಎಂದರು.

ನವೋದಯ ವಿದ್ಯಾಲಯದ ಪ್ರಾಂಶುಪಾಲ ಪಿ.ಎಂ. ಇಸಾಕ್ ಮಾತ ನಾಡಿ, ರಕ್ತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶ ದಿಂದ ನವೋದಯ ವಿದ್ಯಾಲಯದ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ರಾಜ್ಯಾದ್ಯಂತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು. 1987ರಲ್ಲಿ ಆರಂಭಗೊಂಡ ಕೊಡಗಿನ ನವೋದಯ ವಿದ್ಯಾಲಯದಿಂದ ಇಲ್ಲಿಯವರೆಗೆ 24 ತಂಡಗಳು ಶಿಕ್ಷಣ ಪಡೆದು ಹೊರ ಬಂದಿದ್ದು, 1400 ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದಾರೆ. ಹಳೇ ವಿದ್ಯಾರ್ಥಿ ಸಂಘವು ಅನೇಕ ಸಮಾಜ ಸೇವೆಗಳನ್ನು ಮಾಡುತ್ತಾ ಬಂದಿದ್ದು, ಇನ್ನು ಮುಂದೆಯೂ ಸಮಾಜಮುಖಿ ಕಾರ್ಯಗಳು ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೀಗ ಅಶ್ವಿನಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಿರು ವುದು ಶ್ಲಾಘನಾರ್ಹ ಕಾರ್ಯವಾಗಿದ್ದು, ಹಳೇ ವಿದ್ಯಾರ್ಥಿ ಸಂಘ ದಲ್ಲಿರುವ ಎಲ್ಲಾ ಬ್ಯಾಚ್‍ಗಳ ವಿದ್ಯಾರ್ಥಿಗಳು ಅಭಿನಂದÀನಾರ್ಹರು ಎಂದು ಪಿ.ಎಂ.ಇಸಾಕ್ ತಿಳಿಸಿದರು.

ಅಶ್ವಿನಿ ಆಸ್ಪತ್ರೆಯ ಕಾರ್ಯದರ್ಶಿ ಸಂಪತ್ ಕುಮಾರ್, ಡಾ. ರವಿ ಕರುಂಬಯ್ಯ, ಸಂಘದ ಕಾರ್ಯದರ್ಶಿ ಪಿ.ಆರ್.ನವೀನ್, ಸುಬ್ರಹ್ಮಣ್ಯ ಹೆಚ್.ಎ., ಸದಸ್ಯರಾದ ಕೆ.ಎಸ್. ರಮೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Translate »