ಮೇಕೆದಾಟು: ತಮಿಳುನಾಡಿಗೆ ಕರ್ನಾಟಕ ತಿರುಗೇಟು
News

ಮೇಕೆದಾಟು: ತಮಿಳುನಾಡಿಗೆ ಕರ್ನಾಟಕ ತಿರುಗೇಟು

March 25, 2022

ತಮಿಳುನಾಡು ರಾಜ್ಯಕ್ಕೆ ಯಾವುದೇ ಹಾನಿಯಾಗದ ಯೋಜನೆಯನ್ನು ವಿರೋ ಧಿಸಿ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯವನ್ನು ಖಂಡಿಸುತ್ತದೆ.

ಮೇಕೆದಾಟು ಯೋಜನೆಗೆ ಈ ಕೂಡಲೇ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗ ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯವನ್ನು ಒತ್ತಾಯಿಸುತ್ತದೆ.

ಕಣಿವೆ ರಾಜ್ಯಗಳ ನ್ಯಾಯಸಮ್ಮತ ಪಾಲನ್ನು ನಿರ್ಧರಿಸುವವರೆಗೆ ಗೋದಾವರಿ ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೆ-ಗುಂಡಾರ್ ಜೋಡಣೆ ಯೋಜನೆಯ ಅನ್ನು ಅಂತಿಮಗೊಳಿಸದಂತೆ ಹಾಗೂ ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳಿಗೆ ಅನುಮೋದನೆ ನೀಡದಂತೆ ಮತ್ತು ಯೋಜನೆಗಳನ್ನು ಮುಂದುವರೆಸದಂತೆ ನಿರ್ದೇಶಿಸಲು ಸಂಬಂಧಪಟ್ಟ ಕೇಂದ್ರದ ಸಂಸ್ಥೆಗಳನ್ನು ಒತ್ತಾಯಿಸುತ್ತದೆ.
ಬಜೆಟ್‍ನಲ್ಲಿ 1000 ಕೋಟಿ ರೂ. ಮೀಸಲು!

ತಮ್ಮ ಚೊಚ್ಚಲ ಬಜೆಟ್‍ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಾರಿ ಮೇಕೆದಾಟು ಯೋಜನೆಗಾಗಿ 1000 ಕೋಟಿ ರೂ. ಅನುದಾನ ಮೀಸಲಿರಿಸಿದ್ದರು. ಅಲ್ಲದೇ ಕಾಂಗ್ರೆಸ್ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಎರಡು ಹಂತದಲ್ಲಿ ಪಾದಯಾತ್ರೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಿತ್ತು.

ಬೆಂಗಳೂರು,ಮಾ.24-ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕಟಿ ಬದ್ಧವಾಗಿದ್ದು, ಇದನ್ನು ಪ್ರಶ್ನಿಸಿದ ತಮಿಳುನಾಡಿಗೆ ತಿರುಗೇಟು ನೀಡಿದೆ. ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಕೈಗೊಂಡಿದ್ದ ನಿರ್ಣಯವನ್ನು ಬಲವಾಗಿ ಖಂಡಿಸಿರುವ ಕರ್ನಾಟಕ ಸರ್ಕಾರ, ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಖಂಡನಾ ನಿರ್ಣಯ ವನ್ನು ಮಂಡಿಸಿದರು. ಬಳಿಕ ಸದನ ಸರ್ವಾ ನುಮತದಿಂದ ಇದನ್ನು ಅಂಗೀಕರಿಸಿತು. ನದಿ ಜೋಡಣೆಯ ಡಿಪಿಆರ್ ಅನ್ನು ಕರ್ನಾ ಟಕ ಸರ್ಕಾರ ಒಪ್ಪುವವರೆಗೆ ಅನುಮೋ ದಿಸದಂತೆ ತಿದ್ದುಪಡಿಯೊಂದಿಗೆ ನಿರ್ಣ ಯವು ಸರ್ವಾನುಮತದಿಂದ ಅಂಗೀ ಕರಿಸಲಾಯಿತು.

ನಿರ್ಣಯದ ಪ್ರಮುಖ ಅಂಶಗಳು: ಕರ್ನಾ ಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋ ಧಿಸಿ, ಮಾ.21ರಂದು ತಮಿಳುನಾಡು ವಿಧಾನ ಸಭೆ ಸಭ್ಯವಲ್ಲದ ಭಾಷೆಯಲ್ಲಿ ಅಂಗೀಕರಿ ಸಿದ ಒಕ್ಕೂಟ ವಿರೋಧಿ ಮತ್ತು ಸಮ ರ್ಥನೀಯವಲ್ಲದ ನಿರ್ಣಯವನ್ನು ಮತ್ತು ತಮಿಳುನಾಡು ರಾಜ್ಯವು ತನ್ನ ಪ್ರಾದೇಶಿಕ ವ್ಯಾಪ್ತಿಯಲ್ಲಿ ಏಕಪಕ್ಷೀಯವಾಗಿ ಯೋಜಿಸಿ ರುವ ಕಾನೂನುಬಾಹಿರ ಯೋಜನೆಗಳನ್ನು ಸಹ ಈ ಸದನವು ಗಣನೆಗೆ ತೆಗೆದು ಕೊಂಡಿರುತ್ತದೆ.

ಸರ್ವೋಚ್ಛ ನ್ಯಾಯಾಲಯವು ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ಮಾರ್ಪಡಿಸಿ ಸಾಮಾನ್ಯ ಜಲ ವರ್ಷದಲ್ಲಿ ಬಿಳಿಗುಂಡ್ಲುವಿನಲ್ಲಿ 177.25 ಟಿಎಂಸಿ ನೀರಿನ ಪ್ರಮಾಣವನ್ನು ಖಚಿತಪಡಿಸುವಂತೆ ನಿಗದಿಪಡಿಸಿದೆ. ಸರ್ವೋಚ್ಛ ನ್ಯಾಯಾಲಯವು ಹಂಚಿಕೆ ಮಾಡಿರುವಂತೆ ಬೆಂಗಳೂರು ಮೆಟ್ರೋಪಾಲಿಟನ್ ನಗರದ ಕುಡಿಯುವ ನೀರಿನ ಅಗತ್ಯತೆಗೆ 24 ಟಿಎಂಸಿ (4.75 ಛಿoಟಿsumಠಿಣive use) ನೀರನ್ನು ಸುಸ್ಥಿರಗೊಳಿ ಸಲು ಹಾಗೂ ತತ್ಪರಿಮಾಣವಾಗಿ ಜಲವಿದ್ಯುತ್ ಉತ್ಪಾದನೆಗೆ ಅಂತಾರಾಜ್ಯ ನದಿ ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ಯೋಜಿಸಲಾಗಿದೆ. ಯೋಜನೆಯಿಂದ ತಮಿಳುನಾಡು ರಾಜ್ಯಕ್ಕೆ ಯಾವುದೇ ಬಾಧಕ ಅಥವಾ ಹಾನಿಯಾಗುವುದಿಲ್ಲ. ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆ ಜಾರಿಗೆ ಕರ್ನಾಟಕ ರಾಜ್ಯವು ತನ್ನ ಸಾಂವಿ ಧಾನಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿದೆ. ರಾಷ್ಟ್ರೀಯ ಜಲನೀತಿಯೂ ಸಹ ಕುಡಿಯುವ ನೀರಿಗೆ ಪ್ರಥಮ ಆದ್ಯತೆಯನ್ನು ನೀಡುತ್ತದೆ. ಈ ಕುಡಿಯುವ ನೀರಿನ ಯೋಜನೆಯಿಂದ ನ್ಯಾಯಾಧೀಕರಣದ ಆದೇಶವನ್ನು ಯಾವುದೇ ರೀತಿಯಲ್ಲಿ ಉಲ್ಲಂಘಿಸುವುದಿಲ್ಲ.

ಕರ್ನಾಟಕದ ಪ್ರಾದೇಶಿಕ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಾವೇರಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವ ಮೂಲಕ ತಮಿಳುನಾಡು ರಾಜ್ಯವು ಏಕಪಕ್ಷೀಯವಾಗಿ ಹಲವಾರು ಕಾನೂನುಬಾಹಿರ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗಳಲ್ಲಿ ಕುಂದಾ PSP, ಸಿಲ್ಲಹಳ್ಳಿ PSP, ಹೊಗೇನಕಲ್ ಹಂತ-1, ಕಾವೇರಿ (ಹಟ್ಟಲೆ) ವೈದ್ಯ ಗುಂಡಾರ್ ಜೋಡಣೆ, ಇತ್ಯಾದಿಗಳು ಒಳಗೊಂಡಿವೆ. ಪೆನಿನ್ಸುಲರ್ ರಿವಲ್ ಡೆವಲಪ್‍ಮೆಂಟ್ (Peಟಿiಟಿsuಟಚಿಡಿ ಖiveಡಿ ಆeveಟoಠಿmeಟಿಣ) ಯೋಜನೆಯಡಿಯಲ್ಲಿ ಗೋದಾವರಿ ಹೆಚ್ಚುವರಿ ನೀರನ್ನು ಕೃಷ್ಣಾ-ಪೆನ್ನಾರ್-ಕಾವೇರಿ-ಮೈಗೆ ಗುಂಡಾರ್ ಯೋಜನೆಗೆ ತಿರುವುಗೊಳಿಸುವ ವಿಸ್ತೃತ ಯೋಜನಾ ವರದಿಯನ್ನು ಕರ್ನಾಟಕ ರಾಜ್ಯವು ಸೇರಿದಂತೆ ಕಣಿವ ರಾಜ್ಯಗಳ ನೀರಿನ ಪಾಲನ್ನು ನಿರ್ಧರಿಸುವವರೆಗೆ ಅನುಮೋದಿಸಕೂಡದು.

ತಮಿಳುನಾಡು ರಾಜ್ಯವು, ಕರ್ನಾಟಕ ರಾಜ್ಯದ ಮೇಕೆದಾಟು ಯೋಜನೆಗೆ ತನ್ನ ಒಪ್ಪಿಗೆಯನ್ನು ಪಡೆಯಬೇಕೆಂದು ಕೋರಿದೆ. ಅದರೆ ಅದೇ ಸಮಯದಲ್ಲಿ ತಮಿಳುನಾಡು ರಾಜ್ಯವು ಕರ್ನಾಟಕದ ರಾಜ್ಯದ ಒಪ್ಪಿಗೆ ಕೋರದೆ ಏಕಪಕ್ಷೀಯವಾಗಿ ಕಾನೂನುಬಾಹಿರ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ತನ್ನ ದ್ವಂದ್ವ ನಿಲುವನ್ನು ಪ್ರದರ್ಶಿಸುತ್ತಿದೆ. ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳನ್ನು ನಾವು ಬಲವಾಗಿ ಖಂಡಿಸುತ್ತಾ, ಎಲ್ಲಾ ವೇದಿಕೆಗಳಲ್ಲಿ ಅವುಗಳನ್ನು ವಿರೋಧಿಸುತ್ತೇವೆ. ಕೇಂದ್ರ ಜಲ ಆಯೋಗವು ಮೇಕೆದಾಟು ಯೋಜನೆಯ ವಿಸ್ತøತ ಯೋಜನಾ ವರದಿಯನ್ನು ಅನುಮೋದಿಸುವಂತೆ ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯವು ಯೋಜನೆಗೆ ಪರಿಸರ ಅನುಮತಿ ಪಡೆಯಲು ಖಿoಖ ಅನ್ನು ಅನುಮೋದಿಸುವಂತೆ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ.

Translate »