ಮೈಸೂರು: ಈ ತಿಂಗಳ 17ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ (ಂಏಃಒS)ನ 2019-22ರ ಅವಧಿಗೆ ಅಧ್ಯಕ್ಷರ ಆಯ್ಕೆಗೆ ನಡೆಯಲಿರುವ ಚುನಾವಣೆ ಸಂಬಂಧ ಚರ್ಚಿಸಲು ಫೆ.13ರಂದು ಸಂಜೆ 5 ಗಂಟೆಗೆ ಮೈಸೂರಿನ ಅಗ್ರಹಾರದ ಶಂಕರಮಠ ಆವರಣ ದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಸಭೆ ಕರೆಯಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಾಲಿ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಘದ ಮತ್ತು ಮೈಸೂರು ಕೇಂದ್ರದ ಎಲ್ಲಾ ಅಂಗ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಫೆ.17ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮೈಸೂರು ಕೇಂದ್ರದ ವ್ಯಾಪ್ತಿಯ 4 ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮೈಸೂರಿನ ಲಕ್ಷ್ಮೀಪುರಂನ ನಂಜುಮಳಿಗೆ ವೃತ್ತದ ಬಳಿಯ ಗೋಪಾಲಸ್ವಾಮಿ ಶಿಶು ವಿಹಾರದಲ್ಲಿ ಚುನಾವಣೆ ನಡೆಯಲಿದೆ ಎಂದರು. ಗೋಷ್ಠಿಯಲ್ಲಿ ವಂಗಿಪುರ ಮಠದ ಭಾಷ್ಯಂ ಸ್ವಾಮೀಜಿ, ಹಿರಿಯ ಬ್ರಾಹ್ಮಣ ಮುಖಂಡ ಕೆ.ರಘುರಾಂ ವಾಜಪೇಯಿ, ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷ ಜಿ.ಆರ್.ನಾಗರಾಜ್, ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಇದ್ದರು.