ಫೆ.6ಕ್ಕೆ ಜಂಟಿ ಶಾಸಕಾಂಗ ಪಕ್ಷದ ಸಭೆ
ಮೈಸೂರು

ಫೆ.6ಕ್ಕೆ ಜಂಟಿ ಶಾಸಕಾಂಗ ಪಕ್ಷದ ಸಭೆ

February 4, 2019

ಬೆಂಗಳೂರು: ಆಪರೇಷನ್ ಕಮಲ ಕರಿನೆರಳು ಹಾಗೂ ಸರ್ಕಾರದ ಪತನದ ಭೀತಿ ನಡುವೆ ತಮ್ಮ ಶಾಸಕ ರನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿ ಶಾಸಕಾಂಗ ಪಕ್ಷದ ಸಭೆ ಯನ್ನು ಫೆ.6ರಂದು ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಉಭಯ ಪಕ್ಷಗಳ ಮುಖಂ ಡರು ಕರೆದಿದ್ದಾರೆ. ಈ ನಡುವೆ ಕಾಂಗ್ರೆಸ್‍ನ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜ ರಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ, ಶಾಸಕರಾದ ಮಹೇಶ್, ಉಮೇಶ್ ಜಾದವ್ ಮತ್ತು ಬಿ.ನಾಗೇಂದ್ರ ಸೇರಿದಂತೆ ನಾಲ್ವರನ್ನು ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷರಿಗೆ ಅರ್ಜಿ ಸಲ್ಲಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶಾಸಕಾಂಗ ಪಕ್ಷದ ನಾಯಕರೂ ಆದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಅಂದಿನ ಸಭೆಗೆ ಮೈತ್ರಿ ಸರ್ಕಾರದ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಸಂಸದರು,ವಿಧಾನ ಪರಿಷತ್ ಸದಸ್ಯರು ಹಾಜರಾಗಲಿದ್ದಾರೆ. ಆ ಮೂಲಕ ಶಾಸಕರ ಆರೋಪಗಳು, ಅನುದಾನ ಹಂಚಿಕೆ ತಾರತಮ್ಯ, ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವಣ ದ್ವೇಷಮಯ ವಾತಾವರಣ, ಭಿನ್ನಾಭಿಪ್ರಾಯಗಳಿಗೆ ಸಿಎಂ ಕುಮಾರಸ್ವಾಮಿ ಉತ್ತರ ನೀಡಲಿದ್ದಾರೆ. ಅಲ್ಲದೆ ಸಮಸ್ಯೆಗಳಿದ್ದರೆ ತಕ್ಷಣ ಸಚಿವರಿಗೆ ಸೂಚನೆ ನೀಡುವ ಮೂಲಕ ವಿವಾದ ಇತ್ಯರ್ಥಗೊಳಿಸಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಮೈತ್ರಿ ಸರ್ಕಾರದ ಪತನಕ್ಕೆ ಬಿಜೆಪಿ ಮುಹೂರ್ತ ನಿಗದಿ ಮಾಡಿರುವ ಬೆನ್ನಲ್ಲೇ ಉಭಯ ಪಕ್ಷಗಳ ಮುಖಂಡರು ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ಒಟ್ಟಾಗಿ ಸರ್ಕಾರ ಮುನ್ನಡೆಸುವ ಮೂಲಕ ಆಪರೇಷನ್ ಕಮಲಕ್ಕೆ ತಡೆಯೊಡ್ಡುವ ತಂತ್ರ ರೂಪಿಸಿ ದ್ದಾರೆ. ವಿಚಿತ್ರವೆಂದರೆ ಫೆ.6ರಂದು ಮೈತ್ರಿ ಪಕ್ಷಗಳ ಶಾಸಕಾಂಗ ಸಭೆ ಕರೆಯಲಾಗಿದೆ. ಈ ಸಭೆಯ ನಂತರ ಉಪ ಮುಖ್ಯಮಂತ್ರಿ ಅವರು ಅಂದು ಔತಣಕೂಟ ಏರ್ಪಡಿಸಿದ್ದು ಇದರ ನೆಪದಲ್ಲಿ ಉಭಯ ಪಕ್ಷಗಳ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಆಗಮಿಸಬೇಕೆಂದು ಕರೆಯೋಲೆ ನೀಡಲಾಗಿದೆ. ಜಂಟಿ ಶಾಸಕಾಂಗ ಸಭೆಗೆ ಕಾಂಗ್ರೆಸ್ ಅತೃಪ್ತ 4 ಶಾಸಕರಿಗೂ ಆಹ್ವಾನ ನೀಡಲಾಗಿದ್ದು ಫೆ.6 ಸಭೆಗೂ ಎಷ್ಟು ಅಸಮಾಧಾನಿತ ಶಾಸಕರು ಹಾಜರಾಗುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

Translate »