ಮೈಸೂರು,ಸೆ.28-ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿ ಸಭೆ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಸಭೆ ಪ್ರಾರಂಭದಲ್ಲಿ ಇತ್ತೀಚೆಗೆ ನಿಧನರಾದ ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ, ರಾಜ್ಯಸಭಾ ಸದಸ್ಯರಾದ ಅಶೋಕ್ ಗಸ್ತಿ, ಶಾಸಕ ಬಿ.ನಾರಾಯಣ್ ಮತ್ತು ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರಿಗೆ ಸಂತಾಪ ಸೂಚಿಸಲಾಯಿತು.
ಸಭೆಯಲ್ಲಿ ಕಾಮನಕೆರೆಹುಂಡಿ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದವರಿಗೆ ಸ್ಮಶಾನ ಮಂಜೂರು ಮಾಡುವ ಬಗ್ಗೆ, ಏಕಲವ್ಯ ನಗರದ ಸ್ಲಂ ಬೋರ್ಡ್ ಮನೆಗಳಲ್ಲಿ ಕಾನೂನುಬಾಹಿರವಾಗಿ ವಾಸ ಮಾಡುತ್ತಿರುವವರನ್ನು ತೆರವುಗೊಳಿಸುವ ಬಗ್ಗೆ, ಅಂಬೇಡ್ಕರ್ ಮತ್ತು ವಾಲ್ಮೀಕಿ ಸಮುದಾಯ ಭವನಗಳ ದುರಸ್ತಿ ಬಗ್ಗೆ, ಗ್ರಾಮ ಪಂಚಾಯಿತಿಗಳಲ್ಲಿ ಶೇ.25ರ ಅನುದಾನವನ್ನು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವ ಬಗ್ಗೆ, ಕುಡಿಯುವ ನೀರಿನ ಘಟಕಗಳ ದುರಸ್ತಿ ಹಾಗೂ ಸ್ವಚ್ಛಗೊಳಿಸುವ ಬಗ್ಗೆ, ಚಿಲ್ಲರೆ ಅಂಗಡಿಗಳಲ್ಲಿ, ಮನೆಗಳಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡು ತ್ತಿರುವ ಬಗ್ಗೆ ಹಾಗೂ ಇತ್ಯಾದಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.
ನಂತರ ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ನೀಡಲಾಗುತ್ತಿರುವ ಸವಲತ್ತುಗಳನ್ನು ಕುರಿತು ಮಾಹಿತಿ ನೀಡಿ ಉಪಯೋಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಸಭೆಯಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ತಾಪಂ ಸದಸ್ಯರಾದ ಜವರನಾಯಕ, ಮಹೇಶ್ ಮತ್ತು ಕುಬೇರ, ಉಪವಿಭಾಗ ಹಿತರಕ್ಷಣಾ ಸಮಿತಿ ಮಟ್ಟದ ಸದಸ್ಯರಾದ ಬಸವಣ್ಣ ಹಾಗೂ ಶಿವನಂಜೇಗೌಡ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಸದಸ್ಯರಾದ ಮಲ್ಲೇಶ್ ಚುಂಚನಹಳ್ಳಿ, ಪುಟ್ಟಲಕ್ಷ್ಮಮ್ಮ, ಸಿದ್ಧಲಿಂಗಮೂರ್ತಿ, ಸುರೇಶ್, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯ ಬೆಲವತ್ತ ರಾಮಚಂದ್ರ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ನಿಗಮ-ಮಂಡಳಿಗಳ ಅಧಿಕಾರಿ ಗಳು, ಲೀಡ್ ಬ್ಯಾಂಕ್ ಮ್ಯಾನೇಜರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.