ಆಸ್ತಿ ವಿವರ ಘೋಷಿಸದ 26 ಗ್ರಾಪಂ ಸದಸ್ಯರ ಸದಸ್ಯತ್ವ ರದ್ದು
ಮೈಸೂರು

ಆಸ್ತಿ ವಿವರ ಘೋಷಿಸದ 26 ಗ್ರಾಪಂ ಸದಸ್ಯರ ಸದಸ್ಯತ್ವ ರದ್ದು

May 3, 2019

ಬೆಂಗಳೂರು: ಆಸ್ತಿ ವಿವರ ಘೋಷಣೆ ಮಾಡಿ ಕೊಳ್ಳದ 26 ಗ್ರಾಮ ಪಂಚಾಯತ್ ಸದಸ್ಯರ ಸದಸ್ಯತ್ವ ರದ್ದುಪಡಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಾಚಾರಿ ಇಂದಿಲ್ಲಿ ತಿಳಿಸಿದ್ದಾರೆ. ಪಂಚಾಯತ್ ರಾಜ್ ಕಾಯ್ದೆ ತಿದ್ದುಪಡಿ ಅನ್ವಯ ಪ್ರತಿ ವರ್ಷ ಚುನಾವಣಾ ಆಯೋಗಕ್ಕೆ ತಮ್ಮ ಆಸ್ತಿ ವಿವರ ಘೋಷಿಸಿಕೊಳ್ಳಬೇಕಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಕಾಸ್ ನೋಟೀಸ್ ನಂತರವೂ ಆಸ್ತಿ ವಿವರ ನೀಡದ 26 ಮಂದಿ ಸದಸ್ಯತ್ವವನ್ನು ಅನರ್ಹಗೊಳಿಸ ಲಾಗಿದೆ ಎಂದರು. ಕಳೆದ ವರ್ಷ ದಿಂದ ಆನ್‍ಲೈನ್‍ನಲ್ಲೂ ಆಸ್ತಿ ವಿವರ ಘೋಷಿಸಲು ಅವಕಾಶ ನೀಡಲಾ ಗಿದೆ, ನಗರ ಸ್ಥಳೀಯ ಸಂಸ್ಥೆಗಳ ಅಭ್ಯರ್ಥಿಗಳ ಆಸ್ತಿ ವಿವರವನ್ನು ಜಿಲ್ಲಾಧಿ ಕಾರಿ ಮತ್ತು ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಬೇಕಿದೆ. ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಜಿಲ್ಲಾಧಿಕಾರಿ ಮತ್ತು ಪ್ರಾದೇಶಿಕ ಆಯುಕ್ತರಿಗೆ ವಿಚಾರಣಾ ಅಧಿಕಾರ ಇರುತ್ತದೆ. ಸ್ಥಳೀಯ ಸಂಸ್ಥೆ ಗಳ ಚುನಾವಣೆಯಲ್ಲಿ ಈ ಬಾರಿ ವಿದ್ಯುನ್ಮಾನ ಮತಯಂತ್ರಗಳೊಂದಿಗೆ ವಿವಿಪ್ಯಾಟ್ ಬಳಕೆ ಮಾಡುತ್ತಿಲ್ಲ. ಗ್ರಾಮ ಪಂಚಾಯತ್ ಚುನಾವಣೆ ಯಲ್ಲಿ ಮತಯಂತ್ರಗಳ ಬದಲಿಗೆ ಮತಪತ್ರಗಳನ್ನು ಬಳಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

Translate »