ಮೈಸೂರಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣೆ
ಮೈಸೂರು

ಮೈಸೂರಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣೆ

January 2, 2022

ಮೈಸೂರು, ಜ. 1(ಆರ್‍ಕೆ)-ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗಾಗಿ ತಮ್ಮ ಅನುದಾನದಲ್ಲಿ ನೆರವು ನೀಡುವುದಾಗಿ ಶಾಸಕ ಎಲ್.ನಾಗೇಂದ್ರ ಅವರು ಇಂದಿಲ್ಲಿ ತಿಳಿಸಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿಶ್ವಕರ್ಮ ಶ್ರೀ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಸಮಿತಿ ಸಂಯುಕ್ತಾಶ್ರಯ ದಲ್ಲಿ ಮೈಸೂರಿನ ಕಲಾಮಂದಿರದಲ್ಲಿ ಇಂದು ಏರ್ಪಡಿಸಿದ್ದ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ತಮ್ಮ ವಿಶಿಷ್ಠ ಕಲೆಯಿಂದ ಬೇಲೂರಿನ ಚೆನ್ನಕೇಶವ ದೇವಾಲಯವನ್ನು ಕೆತ್ತುವ ಮೂಲಕ ಇಡೀ ದೇಶಕ್ಕೇ ಶಿಲ್ಪ ಕಲೆಯ ಹೆಗ್ಗುರುತು ಮೂಡಿಸಿರುವ ಜಕಣಾಚಾರಿ ಯವರು, ನಾಡಿನ ಎತ್ತರದ ಸಾಧಕರಾ ದರು. ಮುಂದೆಯೂ ಈ ಅಪರೂಪದ ಕಲಾ ಪರಂಪರೆಯನ್ನು ಮುಂದುವರಿಸಿ ವಿಶ್ವಕರ್ಮ ಸಮಾಜಕ್ಕೆ ಪ್ರೋತ್ಸಾಹ ನೀಡ ಬೇಕಾಗಿದೆ ಎಂದು ಅವರು ತಿಳಿಸಿದರು.

ಮೈಸೂರಲ್ಲಿ ವಿಶ್ವಕರ್ಮ ಸಮುದಾಯದ ದೇವಸ್ಥಾನಕ್ಕೆ ತಮ್ಮ ಸ್ಥಳೀಯ ಅಭಿವೃದ್ಧಿ ಅನುದಾನದಲ್ಲಿ 10 ಲಕ್ಷ ಹಾಗೂ ವಿದ್ಯಾರ್ಥಿನಿಲಯಕ್ಕೆ ಈಗಾಗಲೇ 5 ಲಕ್ಷ ರೂ. ನೀಡಿದ್ದೇನೆ. ಇನ್ನೂ 5 ಲಕ್ಷ ರೂ. ಅನುದಾನ ನೀಡುತ್ತೇನೆ ಎಂದ ಶಾಸಕರು, ಎಲ್ಲರೂ ಒಗ್ಗಟ್ಟಾಗಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಎ.ಹೇಮಂತ ಕುಮಾರ್‍ಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಎಸ್‍ಡಿಎಂ ಕಾಲೇಜು ಕನ್ನಡ ಪ್ರಾಧ್ಯಾಪಕಿ ಡಾ. ವಿನೋದ, ಕಾರ್ಪೋರೇಟರ್ ರಮೇಶ್(ರಮಣಿ), ರಂಗಾಯಣ ಜಂಟಿ ನಿರ್ದೇಶಕ ಮಲ್ಲಿ ಕಾರ್ಜುನಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಚೆನ್ನಪ್ಪ, ಶಿಲ್ಪಿ ಅರುಣ್ ಯೋಗಿ, ವಿಶ್ವಕರ್ಮ ಸಮುದಾಯದ ಮುಖಂಡ ರಾದ ಹುಚ್ಚಪ್ಪಾಚಾರ್, ಸಿದ್ದಾಚಾರ್, ಛಾಯಾ ದೇವಿ, ವಸಂತಕುಮಾರ್ ಹಾಗೂ ಇತ ರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Translate »