ಕ್ರೀಡೆಯಿಂದ ಮಾನಸಿಕ, ದೈಹಿಕ ಒತ್ತಡ ನಿವಾರಣೆ
ಹಾಸನ

ಕ್ರೀಡೆಯಿಂದ ಮಾನಸಿಕ, ದೈಹಿಕ ಒತ್ತಡ ನಿವಾರಣೆ

August 3, 2018

ಬೇಲೂರು: ಮನುಷ್ಯನ ದೈಹಿಕ ಹಾಗೂ ಮಾನಸಿಕ ಒತ್ತಡಗಳ ನಿವಾರಣೆಯಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುವುದರಿಂದ, ಪ್ರತಿಯೊಬ್ಬರೂ ಕ್ರೀಡೆಯಲ್ಲಿ ತೊಡಗುವ ಮೂಲಕ ಆರೋಗ್ಯವನ್ನು ಕಾಪಾಡಿ ಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷೆ ಭಾರತಿ ಅರುಣ್‍ಕುಮಾರ್ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಿಂದ ನಡೆದ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಚಿಕ್ಕಂದಿನಿಂದಲೇ ಕ್ರೀಡೆ ಬಗ್ಗೆ ಆಸಕ್ತಿ ಬರು ವಂತೆ ಪೋಷಕರು ತೊಡಗಿಸಬೇಕು. ಇದರಿಂದ ಮಕ್ಕಳ ಮನಸ್ಸಿನಲ್ಲಿ ಉತ್ತಮ ಭಾವನೆ ಮೂಡುವುದಲ್ಲದೆ ಕ್ರೀಡೆಯಲ್ಲಿ ತನ್ನದೇ ಆದ ಚಟುವಟಿಕೆಯಲ್ಲಿ ತೊಡಗಿಕೊಂಡು ಉತ್ತಮ ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದರು.

ಕ್ರೀಡೆಯಲ್ಲಿ ಸೋಲು, ಗೆಲುವನ್ನು ಯೋಚಿಸದೆ ಉತ್ತಮ ಪ್ರದರ್ಶನ ನೀಡಬೇಕು. ಪೋಷಕರು ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸುವ ಮೂಲಕ ಉನ್ನತ ಸಾಧನೆಗೆ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ತಾಪಂ ಅಧ್ಯಕ್ಷ ಹರೀಶ್ ಮಾತನಾಡಿ, ದೇಶವು ಕ್ರೀಡೆಯಲ್ಲಿ ಪ್ರಮುಖವಾಗಿ ಹಿಂದುಳಿಯಲು ಕಾರಣ ಇಲ್ಲಿನ ಕ್ರೀಡಾಪಟುಗಳಿಗೆ ಸರಿಯಾದ ಸೌಲಭ್ಯಗಳಿಲ್ಲ. ಬೇಕಾದ ಸಲಕರಣೆಗಳಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಕ್ರೀಡಾಪಟುಗಳು ಕ್ರೀಡೆಯಲ್ಲಿ ಹಿಂದುಳಿಯಲು ಕಾರಣವಾಗಿದೆ. ಆದ್ದರಿಂದ ಸರ್ಕಾರಗಳು ದೇಶದ ಪ್ರತಿಯೊಂದು ತಾಲೂಕು ಕೇಂದ್ರ ಗಳಲೂ ಕ್ರೀಡಾ ಶಾಲೆಗಳನ್ನು ತೆರೆದು ಅಲ್ಲಿ ಕ್ರೀಡಾಪಟು ಗಳಿಗೆ ಉತ್ತಮ ತರಬೇತಿ ನೀಡುವುದಕ್ಕೆ ಮುಂದಾಗಬೇಕು. ಈ ಮೂಲಕ ಕ್ರೀಡಾಪಟುಗಳು ತಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಸದಸ್ಯರಾದ ಲತಾ ಮಂಜೇಶ್ವರಿ, ಸೈಯದ್‍ತೌಫಿಕ್, ತಾಪಂ ಉಪಾಧ್ಯಕ್ಷೆ ಕಮಲಚಿಕ್ಕಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಖೀರ್ ಆಲಿಕಾನ್, ಕಸಾಪ ಅಧ್ಯಕ್ಷ ದಯಾನಂದ್, ಕರವೇ ಚಂದ್ರು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೂರ್ಣೇಶ್, ಉಪ ಪ್ರಾಂಶುಪಾಲ ಶಿವಮರಿಯಪ್ಪ, ದೈಹಿಕ ಶಿಕ್ಷಕ ದೂಳಬ, ಚಂದ್ರೇಗೌಡ ಹಾಜರಿದ್ದರು.

Translate »