ಮರ್ಚೆಂಟ್ಸ್ ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಮೈಸೂರು

ಮರ್ಚೆಂಟ್ಸ್ ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

July 18, 2018

ಮೈಸೂರು: ದಿ ಮೈಸೂರು ಮರ್ಚೆಂಟ್ಸ್ ಕೋ ಆಪರೇಟಿವ್ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಗರದ ಹೋಟೆಲ್ ಪೈ ವಿಸ್ಟಾದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾರತೀಯ ರಿಸರ್ವ್ ಬ್ಯಾಂಕಿನ ಸಹಕಾರ ಬ್ಯಾಂಕುಗಳ ಮೇಲ್ವಿಚಾರಣಾ ವಿಭಾಗದ ಪ್ರಧಾನ ವ್ಯವಸ್ಥಾಪಕ ತೊಟಂಗಂ ಜಮಂಗ್ ಹಾಗೂ ಜೆ.ಎಸ್.ಎಸ್.ವಿಜ್ಞಾನ ಮತ್ತು ತಂತ್ರ ಜ್ಞಾನ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಬಿ.ಜಿ.ಸಂಗಮೇಶ್ವರ ಆಗಮಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕೇವಲ ಓದಿನ ಕಡೆಗೆ ಮಾತ್ರ ಗಮನ ಕೊಡು ವುದಲ್ಲದೆ ತಂದೆ-ತಾಯಿಗಳ, ಕಲಿತ ಶಾಲಾ- ಕಾಲೇಜು ಹಾಗೂ ಹಿರಿಯರಿಗೂ ಗೌರವ ನೀಡಬೇಕೆಂದು ಸಲಹೆ ನೀಡಿದರು.

ಓದಿನ ಜೊತೆಗೆ ವಿದ್ಯಾರ್ಥಿಗಳು ಮುಂದಿನ ಆಯ್ಕೆ ಬಗ್ಗೆ ನಿಜ ಹೇಳುವಿಕೆ, ತಂತ್ರಾಂಶ ಅಳವಡಿಕೆ ಮತ್ತು ತಾಳ್ಮೆ ಇವುಗಳನ್ನು ಮೈ ಗೂಡಿಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಬ್ಯಾಂಕಿನ ಉಪಾಧ್ಯಕ್ಷ ಆರ್.ಆನಂದ್ ಸ್ವಾಗತ ಕೋರಿ, ಅತಿಥಿಗಳ ಪರಿಚಯ ಮಾಡಿಕೊಟ್ಟರು. ಪ್ರಧಾನ ವ್ಯವ ಸ್ಥಾಪಕ ಶ್ರೀಧರ್ ಬಿ ಕುಲಕರ್ಣಿ, ಬ್ಯಾಂಕಿನ ಕಿರುಪರಿಚಯ ಮಾಡಿಕೊಟ್ಟರು. ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆಗೊಂಡ ನಂತರ ಎಸ್‍ಎಸ್ ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ 4 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಅಧ್ಯಕ್ಷರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಓದಿನ ಜೊತೆಗೆ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ಕೊಡುವ ಉತ್ತಮ ಕೆಲಸ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂದು ವಿದ್ಯಾರ್ಥಿ ಗಳಿಗೆ ಸಲಹೆ ನೀಡಿದರು. ನಿರ್ದೇಶಕ ರಾದ ಬಿ.ಆರ್.ನಂದೀಶ್ ವಂದನಾ ರ್ಪಣೆ ಮಾಡಿದರೆ ಕಾರ್ಯಕ್ರಮವನ್ನು ಕು: ಪ್ರಿಯಾ ನಿರೂಪಿಸಿದರು.

Translate »