ಇಂದಿನಿಂದ ವಿಧಾನಮಂಡಲ ಅಧಿವೇಶನ
News

ಇಂದಿನಿಂದ ವಿಧಾನಮಂಡಲ ಅಧಿವೇಶನ

September 13, 2021

ಬೆಂಗಳೂರು: ಸೋಮವಾರದಿಂದ ಹತ್ತು ದಿನಗಳ ಕಾಲ ಮಹತ್ವದ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಮಳೆಗಾಲದ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಈಗಾಗಲೇ ವಿರೋಧ ಪಕ್ಷಗಳು ತಯಾರಿ ಮಾಡಿಕೊಂಡಿವೆ.
ಕೊರೊನಾ ವೈರಸ್, ಲಾಕ್‍ಡೌನ್, ಬೆಲೆ ಏರಿಕೆ, ಪ್ರವಾಹ ಪರಿಸ್ಥಿತಿ, ಭ್ರಷ್ಟಾ ಚಾರ ಸೇರಿದಂತೆ ಹಲವು ವಿಚಾರಗಳನ್ನು ಉಭಯ ಸದನಗಳಲ್ಲಿ ಪ್ರಸ್ತಾಪ ಮಾಡಲು ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಈಗಾ ಗಲೇ ತಯಾರಿ ಮಾಡಿಕೊಂಡಿದ್ದು, ಶಾಸ ಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆಯೂ ಆಗಿದೆ. ಜೊತೆಗೆ ಯಾವ್ಯಾವ ವಿಚಾರಗಳ ಬಗ್ಗೆ ಸದಸ್ಯರು ಪ್ರಸ್ತಾಪ ಮಾಡಬೇಕು ಎಂಬು ದನ್ನು ಈಗಾಗಲೇ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಸೂಚಿಸಿದ್ದಾರೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಎದುರಿ ಸುತ್ತಿರುವ ಮೊದಲ
ಅಧಿವೇಶನ ಇದಾಗಿದೆ. ಜೊತೆಗೆ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರ ಕಳೆದು ಕೊಂಡ ಬಳಿಕ ನಡೆಯುತ್ತಿರುವ ಅಧಿವೇ ಶನವೂ ಇದಾಗಿದೆ. ಹೀಗಾಗಿ ಸಹಜ ವಾಗಿಯೇ ಆಡಳಿತ ಹಾಗೂ ವಿಪಕ್ಷಗಳ ಸದಸ್ಯರಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಬಳಿಕ ನಡೆಯು ತ್ತಿರುವ ಮೊದಲ ಅಧಿವೇಶನ ಕುತೂಹಲ ಮೂಡಿಸಿದೆ. ಜೊತೆಗೆ ವಿಧಾನ ಮಂಡಲ ಅಧಿವೇಶನ ಕೊನೆಯ ದಿನ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದು, ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಪ್ರಕಟಿಸಲಿರುವುದು ಈ ಬಾರಿಯ ಅಧಿವೇಶನ ವಿಶೇಷ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ: ಅಧಿವೇಶನ ಮುಕ್ತಾಯದ ದಿನ ಅಂದರೆ ಸೆ.24ರಂದು ಮಧ್ಯಾಹ್ನದ ಊಟದ ನಂತರ ಅರ್ಧ ದಿನ ಸಂಸದೀಯ ಮೌಲ್ಯಗಳ ಕುರಿತಂತೆ ಜಂಟಿ ಅಧಿವೇಶನ ಉದ್ದೇಶಿಸಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮಾತನಾಡಲಿರುವುದು ವಿಶೇಷ. ಈ ಬಗ್ಗೆ ಸದನದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ಅಂತಿಮ ರೂಪುರೇಷೆ ಸಿದ್ದಪಡಿಸಲು ಸ್ಪೀಕರ್ ಕಾಗೇರಿ ತೀರ್ಮಾ ನಿಸಿದ್ದಾರೆ. ಸದನದ ಗೌರವ ಹಾಗೂ ಸದಸ್ಯರ ಜವಾಬ್ದಾರಿಗಳನ್ನು ಹೆಚ್ಚಿಸಿಕೊಳ್ಳಲು ಈ ಸಮಾವೇಶ ಅವಕಾಶ ಕಲ್ಪಿಸಿ ಕೊಡಲಿದೆ ಎಂದು ಸ್ಪೀಕರ್ ಕಾಗೇರಿ ತಿಳಿಸಿದ್ದಾರೆ. ಅಧಿವೇಶನದಲ್ಲಿ ಒಬ್ಬರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡಲು ತೀರ್ಮಾನ ಮಾಡಲಾಗಿದೆ. ಈ ಅತ್ಯುತ್ತಮ ಶಾಸಕರನ್ನು ಆಯ್ಕೆ ಮಾಡಲು ಸಮಿತಿ ರಚಿಸಲಾಗಿದೆ.

ಸಾರ್ವಜನಿಕರಿಗೆ ಕಲಾಪ ವೀಕ್ಷಣೆ ಅವಕಾಶ: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕಳೆದ 2020ರ ಮಾರ್ಚ್‍ನಲ್ಲಿ ನಡೆದಿದ್ದ ಅಧಿವೇಶನದ ಬಳಿ ಸದನದ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಿರಲಿಲ್ಲ. ಆದರೆ ಈ ಬಾರಿ ಅಧಿವೇಶನದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಶಾಲಾ ಮಕ್ಕಳಿಗೆ ಪ್ರವಾಸ ಬೇಡ, ಹೀಗಾಗಿ ಶಾಲಾ ಮಕ್ಕಳನ್ನು ಕಲಾಪ ವೀಕ್ಷಣೆಗೆ ಕರೆತರಬೇಡಿ ಎಂದು ಸ್ಪೀಕರ್ ಕಾಗೇರಿ ಸೂಚಿಸಿದ್ದಾರೆ. ಜೊತೆಗೆ ಕೊರೊನಾ ಮಾರ್ಗಸೂಚಿ ಪ್ರಕಾರ ಸದಸ್ಯರ ನಡುವೆ ಸಾಮಾಜಿಕ ಅಂತರ ಕಾಪಾಡು ವುದು, ಮಾಸ್ಕ್, ಸ್ಯಾನಿಟೈಸರ್ ಬಳಕೆ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳ ಲಾಗುತ್ತಿದೆ. ಸದನದ ಅಂತಿಮ ದಿನ ಸೆ. 24 ಶುಕ್ರವಾರದಂದು ಪೂರ್ತಿದಿನ ಸದನ ನಡೆಸ ಲಾಗುತ್ತಿದೆ. ಅಂದು ಮಧ್ಯಾಹ್ನದ ನಂತರ ಜಂಟಿ ಅಧಿವೇಶನ ನಡೆಯಲಿದೆ. ಜೊತೆಗೆ ವಿಧಾನ ಪರಿಷತ್ ಕಲಾಪ ನಡೆಸಲು ಎಲ್ಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ.

Translate »