ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್‍ಕುಸಿದು ತಾಯಿ-ಮಗು ಸಾವು
News

ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್‍ಕುಸಿದು ತಾಯಿ-ಮಗು ಸಾವು

January 11, 2023

ಬೆಂಗಳೂರು, ಜ.10- ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ಮೃತಪಟ್ಟ ತಾಯಿ ಹಾಗೂ ಎರಡು ವರ್ಷದ ಮಗು ದುರಂತ ಸಾವಿಗೀಡಾಗಿದ್ದಾರೆ. ಇವರ ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಹಾಗೂ ಬಿಎಂಆರ್‍ಸಿಎಲ್‍ನಿಂದ 20 ಲಕ್ಷ ರೂ. ಪರಿಹಾರವನ್ನು ಪ್ರಕಟಿಸಲಾಗಿದೆ. ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ವೇಳೆ ಪಿಲ್ಲರ್‍ಗೆ ನಿಲ್ಲಿಸಿದ್ದ ಕಬ್ಬಿಣದ ರಾಡ್‍ಗಳು ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗುವಿನ ಮೇಲೆ ಬಿದ್ದವು. ಇದರಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ  ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಚಿಕಿತ್ಸೆ ಫಲಕಾರಿಯಾಗದೆ  ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತಂದೆ ಹಾಗೂ ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ0iÉುೀ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜುಂ ಪರ್ವೇಜ್, ಇದೊಂದು ದುರಾದೃಷ್ಟಕರ ಘಟನೆ ಯಾಗಿದ್ದು, ಮೃತರ ಕುಟುಂಬಸ್ಥರಿಗೆ 20 ಲಕ್ಷ ಪರಿಹಾರ ಒದಗಿ ಸಲಾಗುವುದು ಎಂದರು. ಮೆಟ್ರೋ ನಿರ್ಮಾಣದಲ್ಲಿ ಸಾಧ್ಯವಾದಷ್ಟು ಅತ್ಯಂತ ಹೆಚ್ಚಿನ ಗುಣಮಟ್ಟವನ್ನು ಅನುಸರಿಸುತ್ತಿದ್ದೇವೆ. ಘಟನೆ ಸಂಬಂಧ ವಿಸ್ತೃತವಾಗಿ ತನಿಖೆ ನಡೆಸಲಾಗುವುದು, ಒಂದು ವೇಳೆ ತಾಂತ್ರಿಕ ದೋಷ ಅಥವಾ ಕಾರ್ಮಿಕರ ತಪ್ಪಿನಿಂದಾದ ಅವಘಡ ಎಂದು ಕಂಡುಬಂದಲ್ಲಿ ಮುಂದೆ ಇಂತಹ ಘಟನೆ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಧಾರವಾಡ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮೃತರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಹಾಗೂ ಘಟನೆ ಸಂಬಂಧ ಸಮಗ್ರವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ಇದು 40% ಸರ್ಕಾರದ ಫಲಿತಾಂಶ: ಮೆಟ್ರೋ ಪಿಲ್ಲರ್ ದುರಂತ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು 40% ಕಮಿಷನ್ ಸರ್ಕಾರದ ಫಲಿತಾಂಶವಾಗಿದೆ. ಸರ್ಕಾರದ ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಗುಣಮಟ್ಟವಿಲ್ಲ. ಸರ್ಕಾರದ ಸಚಿವರು, ಶಾಸಕರು, ಅಧಿಕಾರಿಗಳು ತಾವು ದುಡ್ಡು ಮಾಡಿಕೊಂಡು ಜನರಿಗೆ ಕಳಪೆ ಮಟ್ಟದ ಕೆಲಸ ಮಾಡಿಕೊಡುತ್ತಾರೆ. ಇದು ಸರ್ಕಾರದ ದಿವ್ಯ ನಿರ್ಲಕ್ಷ್ಯವಲ್ಲದೆ ಇನ್ನೇನು, ಸಾಮಾನ್ಯ ಜನರ ಜೀವದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಐವರ ವಿರುದ್ಧ ಎಫ್‍ಐಆರ್: ಮೆಟ್ರೋ ಪಿಲ್ಲರ್‍ಕುಸಿದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಸಂಬಂಧ ಐವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಈ ಸಂಬಂಧ ಸೈಟ್ ಇಂಜಿನಿಯರ್ಸ್, ಕಂಟ್ರ್ಯಾಕ್ಟರ್ಸ್, ಃಒಖಅಐ ಆಫೀಸರ್ಸ್, ಸೈಟ್ ಇನ್‍ಚಾರ್ಜ್ ಆಫೀಸರ್ಸ್ ಸೇರಿದಂತೆ ಇತರರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

Translate »