ಅಂತಾರಾಷ್ಟ್ರೀಯ ಮುಕ್ತ ವ್ಯಾಪಾರ ಒಪ್ಪಂದದಲ್ಲಿ ಹಾಲು ಆಮದು ಸಲ್ಲ
ಮೈಸೂರು

ಅಂತಾರಾಷ್ಟ್ರೀಯ ಮುಕ್ತ ವ್ಯಾಪಾರ ಒಪ್ಪಂದದಲ್ಲಿ ಹಾಲು ಆಮದು ಸಲ್ಲ

October 12, 2019

ಮೈಸೂರು,ಅ.11(ಎಂಟಿವೈ)- ಕೇಂದ್ರ ಸರ್ಕಾರ ಏಷ್ಯಾ-ಫೆಸಿಫಿಕ್ ರಾಷ್ಟ್ರಗಳೊಂ ದಿಗೆ ಮಾಡಿಕೊಳ್ಳಲು ಮುಂದಾಗಿರುವ ಅಂತಾರಾಷ್ಟ್ರೀಯ ಮುಕ್ತ ವ್ಯಾಪಾರ ಒಪ್ಪಂದ ದಲ್ಲಿ ಹಾಲಿನ ಆಮದು ಸೇರಿಸದಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ನೇತೃತ್ವದಲ್ಲಿ ಹಾಲು ಉತ್ಪಾದಕರ ಸಂಘಗಳ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲೆಯಾದ್ಯಂತ ಇರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಹಾಲು ಉತ್ಪಾದಕರು ನಡೆಸಿದ ಪ್ರತಿಭಟನೆಯಲ್ಲಿ ಹಾಲು ಒಕ್ಕೂ ಟದ ಅಧಿಕಾರಿಗಳು, ಪದಾಧಿಕಾರಿಗಳು ಪಾಲ್ಗೊಂಡು, ಅಂತಾರಾಷ್ಟ್ರೀಯ ಮುಕ್ತ ಒಪ್ಪಂದದಲ್ಲಿ ವಿದೇಶಗಳಿಂದ ಹಾಲಿನ ಆಮದು ಮಾಡಿಕೊಳ್ಳಲು ಅವಕಾಶ ನೀಡಿದರೆ, ಭಾರ ತೀಯರ ಹೈನುಗಾರಿಕೆ ಮೇಲೆ ದುಷ್ಪರಿ ಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಒಪ್ಪಂದದಲ್ಲಿ ಹಾಲಿನ ಆಮದಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ಪರಸ್ಪರ ಲಾಭ ಹಾಗೂ ಪ್ರಬಲ ಮಾರು ಕಟ್ಟೆ ಸೃಷ್ಟಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಎಂಬ ಅಂತಾರಾಷ್ಟ್ರೀಯ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಏಷ್ಯಾ-ಫೆಸಿಫಿಕ್ ರಾಷ್ಟ್ರಗಳಾದ ಭಾರತ, ಆಸ್ಟ್ರೇಲಿಯಾ, ಬ್ರುನೈ, ಕಾಂಬೋ ಡಿಯಾ, ಚೀನಾ, ಇಂಡೋನೇಷಿಯಾ, ಜಪಾನ್, ಲಾವೋಸ್, ಮಲೇಷಿಯಾ, ಮಯನ್ಮಾರ್, ನ್ಯೂಜಿಲೆಂಡ್, ಫಿಲಿಪೈನ್ಸ್, ಸಿಂಗಾಪುರ, ಥೈಲ್ಯಾಂಡ್, ವಿಯೆಟ್ನಾಂ ಹಾಗೂ ದಕ್ಷಿಣ ಕೊರಿಯಾ ಸಹಿ ಮಾಡು ತ್ತಿವೆ. ಈಗಾಗಲೇ ರಾಷ್ಟ್ರೀಯ ಹೈನು ಅಭಿ ವೃದ್ಧಿ ಯೋಜನೆಯಡಿ ದೇಶದಲ್ಲಿ ಹಾಲು ಉತ್ಪಾದನೆ ಹೆಚ್ಚಿಸಲು ಹಲವು ಯೋಜನೆ ಜಾರಿಗೊಳಿಸಲಾಗಿದೆ. ಪ್ರಸ್ತುತ ದೇಶದ ಹಾಲು ಉತ್ಪಾದನೆ 180 ಮಿಲಿಯನ್ ಟನ್ ಇದ್ದು, ಅದನ್ನು 2033ರ ವೇಳೆಗೆ 330 ಮಿಲಿಯನ್ ಟನ್‍ಗೆ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಹೀಗಿರುವಾಗ ಅಂತಾ ರಾಷ್ಟ್ರೀಯ ಮುಕ್ತ ವ್ಯಾಪಾರ ಒಪ್ಪಂದದಲ್ಲಿ ಹಾಲಿಗೂ ಅವಕಾಶ ನಿಡಿದರೆ ಹಾಲು ಉತ್ಪಾದಕರ ಬೆನ್ನೆಲುಬು ಮುರಿದಂತಾ ಗುತ್ತದೆ ಎಂದು ಪ್ರತಿಭಟನಾಕಾರರು ಕಳವಳ ವ್ಯಕ್ತಪಡಿಸಿದರು.

ಮೈಮುಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್.ವಿಜಯ್ ಕುಮಾರ್ ಮಾತ ನಾಡಿ, ದೇಶದ 130 ಕೋಟಿ ಜನಸಂಖ್ಯೆ ಯಲ್ಲಿ 10 ಕೋಟಿಗೂ ಹೆಚ್ಚು ಮಂದಿ ಹೈನು ಗಾರಿಕೆಯನ್ನು ಅವಲಂಬಿಸಿದ್ದಾರೆ. ಮೈಸೂರು ಜಿಲ್ಲಾ ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ 1081 ಸಂಘಗಳಿದ್ದು, 90 ಸಾವಿರ ಕುಟುಂಬಗಳು ಹೈನುಗಾರಿಕೆಯಲ್ಲಿ ನಿರತವಾಗಿವೆ. ಪ್ರತಿದಿನ 6 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಹಾಲು ಆಮದು ಸೇರಿ ಸದಂತೆ ಹಾಲು ಒಕ್ಕೂಟಗಳು ದೇಶದಾ ದ್ಯಂತ ಪ್ರತಿಭಟನೆ ಮಾಡುತ್ತಿವೆ. ಮೈಸೂರಿ ನಲ್ಲಿಯೂ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ಮೈಮುಲ್ ಅಧ್ಯಕ್ಷ ಎಸ್.ಸಿದ್ದೇಗೌಡ, ನಿರ್ದೇಶಕರಾದ ಕೆ.ಜಿ. ಮಹೇಶ್, ಎ.ಟಿ.ಸೋಮಶೇಖರ್, ಈರೇ ಗೌಡ, ದಾಕ್ಷಾಯಿಣಿ, ಲೀಲಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Translate »