ಮಂಡ್ಯ, ಜ.10- ಬೇಬಿ ಬೆಟ್ಟದ ಸುತ್ತಮುತ್ತ ಅನಧಿಕೃತ ಗಣಿಗಾರಿಕೆ ನಡೆಯು ತ್ತಿರುವುದರಿಂದ ಅನುಮತಿಕೊಟ್ಟಂತಹ 22 ಸಿ ಫಾರಂ, 30 ಕ್ರಷರ್ ಹಾಗೂ 30 ಕ್ವಾರಿಗಳನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಅಕ್ರಮ ಗಣಿಗಾರಿಕೆ ಹಾಗೂ ಜಲ್ಲಿ ಕಲ್ಲುಪುಡಿ ಘಟಕಗಳ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಾಂಡವಪುರ ತಾಲೂಕು, ಬೇಬಿ ಬೆಟ್ಟ ಗ್ರಾಮ ವ್ಯಾಪ್ತಿಯ ಅನಧಿಕೃತ ಗಣಿಗಾರಿಕೆ ಹಾಗೂ ಸಾಗಾಣಿಕೆ ಸಂಬಂಧಿಸಿದಂತೆ ಗಣಿಗಾರಿಕೆ ನಿಯಂತ್ರಿಸಲು ಶಾಶ್ವತ ಚೆಕ್ ಪೋಸ್ಟ್‍ಗಳನ್ನು ನಿರ್ಮಾಣ ಮಾಡಲಾಗಿದ್ದು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ನಿಯಂತ್ರಿಸಲು ಪರಿಶೀಲನೆಗೆಂದು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಪಾಂಡವಪುರ ಎಸಿ ಶೈಲಜಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪುಷ್ಪಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.