ಅಂಗನವಾಡಿ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಿಸಿದ ಸಚಿವ
ಮೈಸೂರು

ಅಂಗನವಾಡಿ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಿಸಿದ ಸಚಿವ

June 6, 2020

ಮೈಸೂರು, ಜೂ.5(ಆರ್‍ಕೆಬಿ)- ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಜಿಲ್ಲೆಯ 2860 ಅಂಗನವಾಡಿ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಿಸುವ ಕಾರ್ಯಕ್ಕೆ ಮೈಸೂರಿನ ಕಲಾಮಂದಿರದಲ್ಲಿ ಚಾಲನೆ ನೀಡಿದರು. ಸಾಂಕೇತಿಕವಾಗಿ 125 ಮಂದಿಗೆ ಕಿಟ್ ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಮಾತನಾಡಿ, ಅಂಗನವಾಡಿ ಕಾರ್ಯ ಕರ್ತೆಯರ ಸೇವೆ ಪರಿಗಣಿಸಿ ದಿನಸಿ ಕಿಟ್ ವಿತರಣೆಗೆ ಸಚಿವರು ತೆಗೆದುಕೊಂಡ ಕ್ರಮ ಅವರಿಗಿರುವ ಕಾಳಜಿ ತೋರಿಸುತ್ತದೆ. ಮೈಸೂರು ಮೃಗಾಲಯದ ನಿರ್ವಹಣೆಗೆ ತಮ್ಮ ಆಪ್ತರು, ಕ್ಷೇತ್ರದ ಜನರು, ಜನಪ್ರತಿನಿಧಿಗಳಿಂದ ಒಟ್ಟು 2.85 ಕೋಟಿ ರೂ. ದೇಣಿಗೆ ಸಂಗ್ರಹಿಸಿ ಕೊಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು ಮಾದರಿ ಎನಿಸಿಕೊಂಡಿದ್ದಾರೆ ಎಂದರು.

ಅಂಗನವಾಡಿ ಕಾರ್ಯಕರ್ತೆ ಭಾಗ್ಯ ಮಾತನಾಡಿ, ನಾವು ಸುಡು ಬಿಸಿಲಿನಲ್ಲೂ ಮನೆ ಮನೆಗೆ ಹೋಗಿ ಮಾಹಿತಿ ಸಂಗ್ರ ಹಿಸಿದ್ದಲ್ಲದೆ, ಆಹಾರ ಧಾನ್ಯ, ಇನ್ನಿತರೆ ವಸ್ತುಗಳನ್ನು ತಲುಪಿಸುವ ಕಾರ್ಯ ಮಾಡಿದ್ದೇವೆ. ಇದನ್ನು ಗುರುತಿಸಿ ಗೌರವಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು. ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಜಿಪಂ ಸಿಇಓ ಪ್ರಶಾಂತಕುಮಾರ್ ಮಿಶ್ರ, ಹಸಿರು ಮೈಸೂರು ಅಧ್ಯಕ್ಷ ಹೆಚ್.ವಿ.ರಾಜೀವ್, ಮೈಸೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್.ಡಿ.ಮಹೇಂದ್ರ ಇನ್ನಿತರÀರು ಉಪಸ್ಥಿತರಿದ್ದರು.

Translate »