ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಜಿಟಿಡಿ ಚಾಲನೆ
ಮೈಸೂರು

ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಜಿಟಿಡಿ ಚಾಲನೆ

June 24, 2019

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ ಭಾನುವಾರ ಚಾಲನೆ ನೀಡಿದರು.

ಜಯಪುರ ಹೋಬಳಿ ಮರಟಿ ಕ್ಯಾತನಹಳ್ಳಿ ಗ್ರಾಮದಲ್ಲಿ 48 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ರಾಜೀವ್‍ಗಾಂಧಿ ಸೇವಾ ಕೇಂದ್ರ ಕಟ್ಟಡಕ್ಕೆ ಗುದ್ದಲಿಪೂಜೆ ನೆರವೇರಿಸಿದರು. ಗ್ರಾಮದಲ್ಲಿ 46 ಲಕ್ಷ ರೂ. ಅಂದಾಜು ವೆಚ್ಚದ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಗೂ ಶಂಕು ಸ್ಥಾಪನೆ ನೆರವೇರಿಸಿದರು. ಗ್ರಾಮದ ಸಿಸಿ ರಸ್ತೆ, ಒಳಚರಂಡಿ ಕಾಮಗಾರಿ, ಕುಡಿಯುವ ನೀರಿನ ಘಟಕಗಳಿಗೂ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಕ್ಷೇತ್ರದ ಅಭಿ ವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದು, ರಸ್ತೆ, ಚರಂಡಿ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಹೆಚ್ಚು ಒತ್ತು ನೀಡಲಾಗಿದೆ. ಕ್ಷೇತ್ರದ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗುವುದು ಎಂದರು.

ಗ್ರಾಮದ ಪರಿಶಿಷ್ಟ ಜಾತಿಯವರ ಬೀದಿ ಗಳಲ್ಲಿ ಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿ ಪರಿಶೀಲನೆ ಮಾಡಿ ಶೀಘ್ರ ವಾಗಿ ಕೆಲಸ ಪೂರ್ಣಗೊಳಿಸಲು ಲೋಕೋಪಯೋಗಿ ಇಲಾಖೆ ಇಂಜಿ ನಿಯರ್‍ಗೆ ಸೂಚನೆ ನೀಡಿದರು.

ಬಳಿಕ ಅವರು ಜಯಪುರ ಹೋಬ ಳಿಯ ಮದ್ದೂರು ಗ್ರಾಮದಲ್ಲಿ ನೂತನ ವಾಗಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಯನ್ನು ಅನಾ ವರಣಗೊಳಿಸಿದರು. ಸೋಲಾರ್ ಕುಡಿ ಯುವ ನೀರಿನ ಸರಬರಾಜು ಯೋಜನೆಯನ್ನೂ ಉದ್ಘಾಟಿಸಿದರು.
ಮತ ದಾರರು ನೀಡಿದ ಜನಾದೇಶವನ್ನು ಗೌರ ವಿಸಿ ರಾಜ್ಯದಲ್ಲಿ ಅನಿವಾರ್ಯ ಪರಿಸ್ಥಿತಿ ಯಲ್ಲಿ ನಾವು ಅಣ್ಣ-ತಮ್ಮರಂತೆ ಜಾತ್ಯತೀತ ವಾದ ಮೈತ್ರಿ ಸರ್ಕಾರ ರಚಿಸಿದ್ದೇವೆ. ವಿವಾ ದಾತ್ಮಕ ಹೇಳಿಕೆ ಕೊಡುವುದನ್ನು ಬಿಟ್ಟು, ಅಭಿವೃದ್ಧಿ ಬಗ್ಗೆ ಚಿಂತಿಸುವುದು ಅಗತ್ಯ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅವರು ಕಾಂಗ್ರೆಸ್-ಜೆಡಿಎಸ್ ಮುಖಂಡರಿಗೆ ಸಲಹೆ ನೀಡಿದ್ದಾರೆ.

ಮೈಸೂರು ತಾಲೂಕಿನ ಮರಟಿಕ್ಯಾತನ ಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಜೆಡಿಎಸ್ ಜೊತೆಗಿನ ಮೈತ್ರಿಯಿಂದಾ ಗಿಯೇ ಕಾಂಗ್ರೆಸ್‍ಗೆ ನಷ್ಟವಾಗುತ್ತಿದೆ ಎಂಬ ಮಾಜಿ ಸಚಿವ ವೀರಪ್ಪ ಮೊಯ್ಲಿ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿ ಸಿದ ಅವರು, ಲೋಕಸಭಾ ಚುನಾವಣೆ ಗಳು ಮುಗಿದಿವೆ. ನಾವ್ಯಾರೂ ವಿವಾದಾ ತ್ಮಕ ಹೇಳಿಕೆ ಕೊಡಬಾರದು. ಏನೇ ಮಾತಿ ದ್ದರೂ ನಾಲ್ಕು ಗೋಡೆ ಮಧ್ಯೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಅಭಿವೃದ್ಧಿ ಚಿಂತನೆ ಒಂದೇ ನಮ್ಮ ಗುರಿಯಾಗಬೇಕು. ವಿವಾದಾತ್ಮಕ ಹೇಳಿಕೆಗಳಿಂದ ಎರಡೂ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ನರೇಂದ್ರ ಮೋದಿ ಅವರು ಪ್ರಧಾನಿ ಯಾದ ಬಳಿಕ ಬರೀ ಅಭಿವೃದ್ಧಿ ಬಗ್ಗೆ ಮಾತ್ರ ಗಮನ ಹರಿಸಿದ್ದಾರೆ. ಅಣ್ಣ-ತಮ್ಮಂದಿರಂತೆ ಒಟ್ಟಾಗಿ ಸರ್ಕಾರ ಮಾಡಿ ರುವ ನಾವ್ಯಾಕೆ ವಿವಾದ ಮಾಡಿಕೊಳ್ಳ ಬೇಕು. ಬರೀ ಅಭಿವೃದ್ಧಿ ಬಗ್ಗೆ ಮಾತ್ರ ಗಮನ ಹರಿಸುವುದು ಇಬ್ಬರಿಗೂ ಶ್ರೇಯ ಸ್ಕರ ಎಂದರು. ಜೆಡಿಎಸ್ ರಾಜ್ಯಾಧ್ಯಕ್ಷ, ಶಾಸಕ ಅಡಗೂರು ವಿಶ್ವನಾಥ್ ಅವರ ಹೇಳಿಕೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿ ಕ್ರಿಯಿಸಿದ ಅವರು, ಹೆಚ್.ಡಿ.ಕುಮಾರ ಸ್ವಾಮಿಯವರೇ ಇನ್ನೂ ನಾಲ್ಕು ವರ್ಷ ಮುಖ್ಯಮಂತ್ರಿ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರೇ ಹೇಳಿ ದ್ದಾರೆ. ಆದರೆ ಮಾಧ್ಯಮಗಳೇ ಅನಗತ್ಯ ವಾಗಿ ವಿಶ್ವನಾಥ್ ಅವರನ್ನು ಪ್ರಶ್ನೆ ಕೇಳುತ್ತವೆ ಎಂದರು.

Translate »