ನಾಡು ಕಟ್ಟಿದವರಲ್ಲಿ ಕೆಂಪೇಗೌಡ ಪ್ರಮುಖರು: ಸಚಿವ ಹೆಚ್.ಡಿ.ರೇವಣ್ಣ
ಹಾಸನ

ನಾಡು ಕಟ್ಟಿದವರಲ್ಲಿ ಕೆಂಪೇಗೌಡ ಪ್ರಮುಖರು: ಸಚಿವ ಹೆಚ್.ಡಿ.ರೇವಣ್ಣ

June 28, 2018

ಹಾಸನ: ನಾಡು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ ಕೆಂಪೇಗೌಡರ ಸಾಮಾಜಿಕ ಸೇವೆಯನ್ನು ಎಲ್ಲರೂ ಸ್ಮರಿಸ ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿ ವರೂ ಆದ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಕೆಂಪೇಗೌಡ ಜಯಂತಿ ಉದ್ಘಾಟಿಸಿ ಮಾತನಾಡಿದ ಸಚಿವರು, ದೇಶಕ್ಕಾಗಿ ಕೊಡುಗೆ ನೀಡಿದವರನ್ನು ಗುರುತಿಸುವುದು, ಸ್ಮರಿಸುವುದು ಎಲ್ಲರ ಕರ್ತವ್ಯ ಎಂದರು.

ಕೆಂಪೇಗೌಡರು ಬೆಂಗಳೂರು ನಗರ ನಿರ್ಮಾಣದ ಮೂಲಕ ರಾಜ್ಯದ ಸರ್ವ ತೋಮುಖ ಅಭಿವೃದ್ಧಿಗೆ ಕೊಡುಗೆ ನೀಡಿ ದ್ದಾರೆ. ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಸರ್ಕಾರ ಕೂಡ ಎಲ್ಲಾ ಜನ ವರ್ಗದವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಸಚಿವ ರೇವಣ್ಣ ಹೇಳಿದರು.

ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ಮಾತನಾಡಿ, ಪ್ರತಿಯೊಬ್ಬರೂ ಇತಿಹಾಸ ನೆನಪಿಸಿಕೊಳ್ಳಬೇಕು. ಹಿರಿಯರ ಕೊಡುಗೆ ಗಳನ್ನು ಅರಿಯಬೇಕು. ಕೆಂಪೇಗೌಡರು ಬೆಂಗಳೂರು ಕಟ್ಟುವ ಮೂಲಕ ರಾಜ್ಯಕ್ಕೆ ಕೊಡುಗೆ ನೀಡಿದ್ದಾರೆ. ಕೃಷಿ, ಸಾಮಾಜಿಕ, ಆರ್ಥಿಕ ಪ್ರಗತಿಗೆ ಕಾರಣರಾಗಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಪ್ರೀತಂ ಜೆ.ಗೌಡ ಮಾತನಾಡಿ, ಕೆಂಪೇಗೌಡರು ದಕ್ಷ ದೂರ ದೃಷ್ಟಿಯುಳ್ಳ ಆಡಳಿತಗಾರನಾಗಿದ್ದು, ಕೆರೆಗಳ ನಿರ್ಮಾಣಗಳ ಮೂಲಕ ಕೃಷಿ ಅಭಿವೃದ್ಧಿ ಹಾಗೂ ಅಂತರ್ಜಲದ ವೃದ್ಧಿಗೆ ಶ್ರಮಿಸಿದವರು. ಪ್ರಕೃತಿ ಸಮತೋಲನ, ನಿಸರ್ಗ ಸಂರಕ್ಷಣೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಕೆಂಪೇಗೌಡರು, ಅನೇಕ ಸಾಮಾ ಜಿಕ ಕಾರ್ಯಗಳನ್ನು ಮಾಡಿದ್ದಾರೆ. ಇಂತಹ ವ್ಯಕ್ತಿಗಳ ಜಯಂತಿಯು ಇತಿ ಹಾಸ ಅರಿಯಲು ಸಹಕಾರಿ ಎಂದರು.

ಕಾರ್ಯಕ್ರಮದಲ್ಲಿ ಪ್ರೊ.ಹೆಚ್.ಸುಂದ ರೇಶ್, ಕೆಂಪೇಗೌಡರ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ `ನಾಡ ಪ್ರಭುವಿಗೆ ನಾಡಿನ ನಮನ’ ಕಿರುಹೊತ್ತಿಗೆ ಬಿಡುಗಡೆಗೊಳಿಸಲಾಯಿತು. ಡಿಸಿ ರೋಹಿಣಿ ಸಿಂಧೂರಿ, ಎಸ್ಪಿ ರಾಹುಲ್ ಕುಮಾರ್ ಶಹಪುರವಾಡ್, ಸಿಇಓ ಜಿ.ಜಗದೀಶ್, ಎಡಿಸಿ ಬಿ.ಆರ್. ಪೂರ್ಣಿಮಾ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮುದ್ದೇ ಗೌಡ, ಕಸಾಪ ಜಿಲ್ಲಾ ಅಧ್ಯಕ್ಷ ನಾ.ಮಂಜೇ ಗೌಡ, ಜಿಲ್ಲಾ ಮಾಜಿ ಅಧ್ಯಕ್ಷ ಬಿ.ಎನ್. ರಾಮಸ್ವಾಮಿ, ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಂ.ಶಿವಣ್ಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಇತರರಿದ್ದರು.

Translate »