ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸಚಿವ ಹೆಚ್.ಡಿ ರೇವಣ್ಣ ಸೂಚನೆ
ಹಾಸನ

ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸಚಿವ ಹೆಚ್.ಡಿ ರೇವಣ್ಣ ಸೂಚನೆ

September 15, 2018

ಹಾಸನ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೆ.21ರಂದು ಜಿಲ್ಲೆಗೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತು ವಾರಿ ಸಚಿವ ಹೆಚ್.ಡಿ.ರೇವಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿಂದು ವಿವಿಧ ಇಲಾಖಾಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಿ, ಜಿಲ್ಲೆಯಲ್ಲಿ ಶಂಕುಸ್ಥಾಪನೆ, ಉದ್ಘಾಟನೆಗೆ ಸಿದ್ಧವಿರುವ ಹಾಗೂ ಆಡಳಿತಾತ್ಮಕ ಅನುಮೋದನೆ ಪಡೆದಿರುವ ಕಾಮಗಾರಿಗಳ ಪಟ್ಟಿ ಮಾಡಿ, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿ ಕಾರಿಗಳಿಗೆ ನಿರ್ದೇಶನ ನೀಡಿದರು.

ಲೋಕೋಪಯೋಗಿ ರಸ್ತೆಗಳು, ರೈಲ್ವೆ ಮೇಲ್ಸೇತುವೆ, ಹಾಸನಾಂಬ ವೈದ್ಯಕೀಯ ಕಾಲೇಜು ಕಟ್ಟಡಗಳು, ಗೃಹ ನಿರ್ಮಾಣ ಮಂಡಳಿಯಿಂದ ಹೊಸದಾಗಿ ಬಡಾವಣೆ ನಿರ್ಮಾಣಕ್ಕೆ ಭೂಮಿ ಪಡೆಯುವುದು, ನೀರಾವರಿ ಯೋಜನೆಗಳು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಕಾಮಗಾರಿಗಳ ಬಗ್ಗೆ ಚರ್ಚಿಸಿದ ಸಚಿವರು, ಎಲ್ಲದಕ್ಕೂ ಅಗತ್ಯ ತಯಾರಿ ನಡೆಸುವಂತೆ ಸಂಬಂಧಿತ ಅಧಿ ಕಾರಿಗಳಿಗೆ ತಿಳಿಸಿದರು.

ಕೆಲವು ಕಾಮಗಾರಿಗಳನ್ನು ಸ್ಥಳದಲ್ಲೇ ಉದ್ಘಾಟಿಸಿ ಶಂಕುಸ್ಥಾಪನೆ ನೆರೆವೇರಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಂ ಗಣದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಅಲ್ಲಿ ವಿವಿಧ ಕಾಮಗಾರಿಗಳು ಉದ್ಘಾಟನೆ, ಶಿಲಾನ್ಯಾಸ ಕಾರ್ಯ ನಡೆಯಲಿದೆ ಎಂದು ಸಚಿವರು ಹೇಳಿದರು.

ಹಾಸನಾಂಬ ವೈದ್ಯಕೀಯ ಕಾಲೇಜಿ ನಲ್ಲಿ 173 ಲಕ್ಷ ರೂ. ವೆಚ್ಚದಲ್ಲಿ ವಿಆರ್ಡಿಎಲ್ ಪ್ರಯೋಗಾಲಯ, 81 ಲಕ್ಷ ರೂ. ವೆಚ್ಚದ ಎಕ್ಸ್‍ರೇ ಘಟಕ, 52 ಲಕ್ಷ ರೂ. ವೆಚ್ಚದ ದ್ರವ ಅಮ್ಲಜನಕ ಘಟಕ, 412 ಲಕ್ಷ ರೂ. ವೆಚ್ಚದ ಉಪನ್ಯಾಸಕರ ಕೊಠಡಿಗಳು, 870 ಲಕ್ಷ ರೂ. ವೆಚ್ಚದ ಎಂಆರ್‍ಐ ಸ್ಕ್ಯಾನಿಂಗ್ ಘಟಕ ಕಾಮಗಾರಿಗಳು ಪೂರ್ಣಗೊಂಡಿರುವ ಕುರಿತು ಮಾಹಿತಿ ಪಡೆದ ಸಚಿವರು, ಮುಖ್ಯ ಮಂತ್ರಿಯವರ ಜಿಲ್ಲಾ ಪ್ರವಾಸದ ವೇಳೆ ಇವುಗಳನ್ನು ಉದ್ಘಾ ಟಿಸಲು ಸಿದ್ಧತೆ ಕೈಗೊಳ್ಳುವಂತೆ ಹಿಮ್ಸ್‍ನ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಕೃಷಿ ಇಲಾಖೆಯ ಪಾಳ್ಯ, ಕುಂದೂರು ಚನ್ನಾಪುರ, ಬಿಕ್ಕೋಡು, ಹಾನುಬಾಳು ರೈತ ಸಂಪರ್ಕ ಕೇಂದ್ರಗಳು, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ಹಾಗೂ 759 ಲಕ್ಷ ರೂ. ವೆಚ್ಚದ ಹೊಳೆನರಸೀಪುರ ತಾಲೂಕು ಆಸ್ಪತ್ರೆ ಕಟ್ಟಡಗಳ ಉದ್ಘಾಟನೆ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾ ಟನೆ, ಶಂಕುಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ರೇವಣ್ಣ ನಿರ್ದೇಶನ ನೀಡಿದರು.

ಜಿಲಾಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್‍ವಾಡ್ ಹಾಗೂ ಜಿಪಂ ಉಪಕಾರ್ಯದರ್ಶಿ ಪುಟ್ಟ ಸ್ವಾಮಿ ಸೇರಿದಂತೆ ವಿವಿಧ ಇಲಾಖಾಧಿ ಕಾರಿಗಳು ಸಭೆಯಲ್ಲಿದ್ದರು.

Translate »