ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ರೇವಣ್ಣ ಭೇಟಿ, ಪರಿಶೀಲನೆ
ಹಾಸನ

ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ರೇವಣ್ಣ ಭೇಟಿ, ಪರಿಶೀಲನೆ

August 24, 2018

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ನೆರೆ ಪೀಡಿತ ಹಾಗೂ ಬಿಸಲೆ ಬಳಿ ಭೂ ಕುಸಿತಗೊಂಡಿರುವ ಪ್ರದೇಶಗಳಿಗೆ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ, ನಿರಾಶ್ರಿತ ಕೇಂದ್ರಕ್ಕೂ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದರು.

ತಾಲೂಕಿನ ಬಿಸಲೆ, ಮಾಗೇರಿ, ವಣ ಗೂರು, ಹಿಜ್ಜನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಈಗಾಗಲೇ ನೆರೆ ಪೀಡಿತ ಪ್ರದೇಶಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸೌಕರ್ಯ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ಯಾರೂ ಕೂಡ ಆತಂಕ ಪಡುವ ಅವಶ್ಯಕತೆಯಿಲ್ಲ ಎಂದರು.

ಮಳೆಯಿಂದಾಗಿರುವ ಹಾನಿಯನ್ನು ಕೃಷಿ, ತೋಟಗಾರಿಕೆ, ಕಂದಾಯ ಹಾಗೂ ಕಾಫಿ ಮಂಡಳಿ ಅಧಿಕಾರಿಗಳು ಸೇರಿ ಒಂದು ಜಂಟಿ ವರದಿಯನ್ನು ನೀಡಬೇಕು. ಕೇಂದ್ರ ಸರ್ಕಾರಕ್ಕೆ ನೆರವಿಗಾಗಿ ಮನವಿ ಮಾಡಲಾಗುವುದು ಇಂತಹ ಸನ್ನಿವೇಶ ದಲ್ಲಿ ಕೇಂದ್ರ ಸರ್ಕಾರವು ನೆರವು ನೀಡಲು ಮುಂದೆ ಬರಬೇಕು ಎಂದು ತಿಳಿಸಿದರು.

ಸಂತ್ರಸ್ತರಿಗೆ ಸಾರ್ವಜನಿಕರು ಸ್ಪಂದಿಸಿ ಸಹಾಯ ಮಾಡುತ್ತಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಅವರು ಸಕಲೇಶಪುರ ತಾಲೂಕಿನಲ್ಲಿ ನೆರೆಯಿಂದ 100ಕೋಟಿ ಅರ್ಥಿಕ ನಷ್ಟ ಸಂಭವಿಸಿದೆ. ರಸ್ತೆಗಳು ಬಾರಿ ಪ್ರಮಾಣದಲ್ಲಿ ಹಾನಿಗೀಡಾಗಿದೆ. ಅದನ್ನು ಸರಿಪಡಿಸಲು ಕಾಲಾವಕಾಶಬೇಕು ಎಂದರು.

ಶಿರಾಡಿಘಾಟ್ ರಸ್ತೆಯು ಬಾರಿ ಕುಸಿತ ದಿಂದ ಸಾಕಷ್ಟು ಹಾನಿಯಾಗಿದೆ. ಬಿಸಿಲೆ ಹಾಗೂ ಶಿರಾಡಿ ಘಾಟ್ ರಸ್ತೆಗಳ ಸಂಪೂರ್ಣ ದುರಸ್ತಿಗೆ 6 ತಿಂಗಳ ಕಾಲಾವಕಾಶ ಬೇಕಾಗಬಹುದು. ಸದ್ಯಕ್ಕೆ ಲಘು ವಾಹನಗಳ ಸಂಚಾರಕ್ಕೆ ಸಾಧ್ಯವಾಗುವಂತೆ ರಸ್ತೆ ಸರಿಪಡಿಸಿ ನಂತರ ಶಾಶ್ವತ ದುರಸ್ತಿ ಕೈಗೆತ್ತಿ ಕೊಳ್ಳಲಾಗುವುದು ಎಂದು ಹೇಳಿದರು.

ಕೊಡಗು, ಉಡುಪಿ, ಮೈಸೂರು, ಮಂಗಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆ ಸೇರಿದಂತೆ ಒಟ್ಟು 6 ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಹಾನಿ ಉಂಟಾಗಿದೆ. ಸದ್ಯ ನಿರಾಶ್ರಿತರ ಕೇಂದ್ರದಲ್ಲಿ ಇರುವ ಸಂತ್ರಸ್ತ ರಿಗೆ ಎಲ್ಲಾ ಸೌಕರ್ಯಗಳನ್ನು ನೀಡಲಾಗು ತ್ತಿದೆ. ಇಲ್ಲಿಂದ ಅವರು ತೆರಳಿದ ನಂತg 30 ದಿನದವರೆಗೆ ಆಹಾರ ಪದಾರ್ಥಗಳನ್ನು ನೀಡಲಾಗುವುದು ಎಂದು ತಿಳಿಸಿದರು.

Translate »