ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ  ಶ್ರಮಿಸಲು ಸಚಿವ ಸತೀಶ್ ಜಾರಕಿಹೊಳಿ ಮನವಿ
ಚಾಮರಾಜನಗರ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಲು ಸಚಿವ ಸತೀಶ್ ಜಾರಕಿಹೊಳಿ ಮನವಿ

February 26, 2019

ಗುಂಡ್ಲುಪೇಟೆ: ಜಿಲ್ಲೆಯು ಕಾಂಗ್ರೆಸ್‍ನ ಭದ್ರಕೋಟೆಯಾ ಗಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇನ್ನೂ ಹೆಚ್ಚಿನ ಮತ ಗಳ ಅಂತರದಿಂದ ಕಾಂಗ್ರೆಸ್ ಗೆಲುವು ಸಾಧಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಅರಣ್ಯ ಸಚಿವ ಸತೀಶ್ ಜಾರಕಿ ಹೋಳಿ ಕಾರ್ಯಕರ್ತರಿಗೆ ಮನವಿ ಮಾಡಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋ ಜಿಸಿದ್ದ ಜನಸಂಪರ್ಕ ಅಭಿಯಾನದ ಕರಪತ್ರ ವನ್ನು ಬಿಡುಗಡೆಗೊಳಿಸಿ ಅವರು ಮಾತ ನಾಡಿದರು. ಸಂಸದ ಆರ್. ಧ್ರುವನಾರಾಯಣ್ ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಹೆಚ್ಚು ಶ್ರಮಿಸಿ ದ್ದಾರೆ. ಆದ್ದರಿಂದ ಕಾರ್ಯಕರ್ತರು ಮತದಾರರ ಮನೆ ಮನೆಗಳಿಗೆ ತೆರಳಿ ಕಾಂಗ್ರೆಸ್ ಅಭಿವೃದ್ದಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿ ಹೆಚ್ಚಿನ ಮತಗಳಿಂದ ಅವರನ್ನು ಗೆಲ್ಲಿಸಲು ಶ್ರಮಿಸಿ ಎಂದರು. ಸಂಸದ ಆರ್.ಧ್ರುವನಾರಾಯಣ್ ಮಾತನಾಡಿ, ತಾನು ಕ್ಷೇತ್ರದ ಅಭಿವೃದ್ದಿಗೆ ಹಗಲಿರುಳೂ ಶ್ರಮಿಸಿದ್ದು ಈ ಬಾರಿ ಕಾರ್ಯಕರ್ತರು ನನ್ನ ಕೈಡಿದು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲು ಸಹಕಾರ ನೀಡಬೇಕೆಂದರು.

ಈ ಸಂದರ್ಭದಲ್ಲಿ ಹಾಲು ಒಕ್ಕೂಟದ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಯುವ ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿ ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಬಿ. ರಾಜಶೇಖರ್, ಬಿ.ಎಂ.ಮುನಿರಾಜು, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ತಾಪಂ ಅಧ್ಯಕ್ಷ ಜಗದೀಶಮೂರ್ತಿ, ಎಪಿಎಂಸಿ ಅಧ್ಯಕ್ಷ ಕರಕಲಮಾದಹಳ್ಳಿ ಪ್ರಭುಸ್ವಾಮಿ, ಮುಖಂಡರಾದ ಕುಮಾರಸ್ವಾಮಿ, ಡಿ.ಮಾದಪ್ಪ ಸೇರಿದಂತೆ ಹಲವರು ಇದ್ದರು.

Translate »