ಮೈಸೂರು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ಸೋಮಶೇಖರ್ ಪ್ರವಾಸ
ಮೈಸೂರು

ಮೈಸೂರು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ಸೋಮಶೇಖರ್ ಪ್ರವಾಸ

August 14, 2020

ಮೈಸೂರು, ಆ.13- ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಆ.14ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸುವ ಅವರು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಮತ್ತು ಪ್ರವಾಹ ದಿಂದ ಉಂಟಾಗಿರುವ ಹಾನಿಗಳು ಮತ್ತು ಕೈಗೊಂಡಿರುವ ಕ್ರಮಗಳು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕುರಿತಂತೆ ಸಭೆ ನಡೆಸುವರು. ಮಧ್ಯಾಹ್ನ 1 ಗಂಟೆಗೆ ಬೆಡಗಲುಪುರದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ ಮಾಡುವರು. ಮಧ್ಯಾಹ್ನ 2:30ಕ್ಕೆ ಹೆಚ್.ಡಿ. ಕೋಟೆ ತಾಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಪೆÇ್ರೀತ್ಸಾಹಧನ ವಿತರಣೆ ಮಾಡುವರು. ಸಂಜೆ 4:30ಕ್ಕೆ ಕೆ.ಆರ್.ನಗರದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಆಶಾ ಕಾರ್ಯ ಕರ್ತೆಯರಿಗೆ ಸಹಕಾರ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಪೆÇ್ರೀತ್ಸಾಹಧನ ವಿತರಣೆ ಮಾಡುವರು. ಆ.15ರಂದು ಶನಿವಾರ ಬೆಳಗ್ಗೆ 9ಕ್ಕೆ ಮೈಸೂರಿನ ಬನ್ನಿಮಂಟಪ ಪಂಜಿನ ಕವಾಯಿತು ಮೈದಾನದಲ್ಲಿ ನಡೆಯಲಿರುವ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸುವರು.

Translate »