ಸಚಿವ ಎಸ್.ಟಿ.ಸೋಮಶೇಖರ್ ಕೊರೊನಾದಿಂದ ಮುಕ್ತ
ಮೈಸೂರು

ಸಚಿವ ಎಸ್.ಟಿ.ಸೋಮಶೇಖರ್ ಕೊರೊನಾದಿಂದ ಮುಕ್ತ

August 11, 2020

ಮೈಸೂರು,ಆ.10(ಆರ್‍ಕೆ)- ಕೊರೊನಾ ಸೋಂಕಿನಿಂದ ತಾವು ಮುಕ್ತರಾಗಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಈ ವಿಷಯ ತಿಳಿಸಿರುವ ಅವರು, ತಮಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆ ಯಲ್ಲಿ ಈಗಾಗಲೇ ತಾವು 14 ದಿನಗಳ ಹೋಂ ಕ್ವಾರಂಟೈನ್ ಅವಧಿ ಮುಗಿಸಿದ್ದು ಮತ್ತೆ ಸ್ವ್ಯಾಬ್ ಟೆಸ್ಟ್ ಮಾಡಲಾಗಿ ನೆಗೆಟಿವ್ ಬಂದಿದೆ. ಹಾಗಾಗಿ ತಾವು ಸಂಪೂರ್ಣ ಗುಣಮುಖರಾಗಿ ರುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ತಮ್ಮ ಪುತ್ರ ನಿಶಾಂತ್ ಸೋಮಶೇಖರ್‍ಗೂ ಕೊರೊನಾ ದೃಢ ಪಟ್ಟಿತ್ತು. ಈಗ ಇಬ್ಬರೂ ಗುಣಮುಖರಾಗಿ ರುವುದಾಗಿ ತಿಳಿಸಿರುವ ಸಚಿವರು, ತಮಗೆ ಗುಣಮುಖರಾಗಲೆಂದು ಹಾರೈಸಿದ ಹಿತೈಷಿ ಗಳೆಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಪ್ರವಾಹ ಪರಿಸ್ಥಿತಿಗೆ ಶಾಶ್ವತ ಪರಿಹಾರಕ್ಕೆ ಮಾಹಿತಿ ಸಿದ್ಧಪಡಿಸಿ
ಮೈಸೂರು, ಆ.10(ಆರ್‍ಕೆ)- ಮೈಸೂರು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ನಷ್ಟಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಮಾಹಿತಿ ಪಟ್ಟಿ ಯೊಂದಿಗೆ ಸಿದ್ಧರಾಗಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಶಾಸಕರಿಗೆ ಕರೆ ನೀಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ಕಳೆದ ಒಂದು ವಾರದಿಂದ ನಿರಂತರ ಮಳೆ ಕಾರಣ, ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಾರ್ಯನಿರ್ವಹಿಸುತ್ತಿದೆ. ಮುಂದಿನ ವಾರ ತಾವೇ ಕ್ಷೇತ್ರಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆಂದು ತಿಳಿಸಿದ್ದಾರೆ.

ಪ್ರವಾಹ ಸಂಬಂಧ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕೆಂಬುದರ ಬಗ್ಗೆ ಸೂಕ್ತ ಮಾಹಿತಿ ಪಟ್ಟಿ ಮಾಡಿಕೊಡಬೇಕು. ನಾವು/ನೀವು ಸೇರಿ ಪರಿಹಾರ ಕಂಡುಕೊಳ್ಳಬೇಕು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Translate »