ಚಾಮುಂಡಿಬೆಟ್ಟದಲ್ಲಿ ಭದ್ರತೆ, ಸಿದ್ಧತೆ ಪರಿಶೀಲಿಸಿದ ಸಚಿವ ಎಸ್‍ಟಿಎಸ್
ಮೈಸೂರು

ಚಾಮುಂಡಿಬೆಟ್ಟದಲ್ಲಿ ಭದ್ರತೆ, ಸಿದ್ಧತೆ ಪರಿಶೀಲಿಸಿದ ಸಚಿವ ಎಸ್‍ಟಿಎಸ್

September 19, 2022

ಮೈಸೂರು, ಸೆ.18(ಎಂಟಿವೈ)- ನಾಡಹಬ್ಬ ದಸರಾ ಮಹೋ ತ್ಸವ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ದಸರಾ ಮಹೋ ತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಮುಂಡಿಬೆಟ್ಟಕ್ಕೆ ತೆರಳಿ ಭದ್ರತೆ ಹಾಗೂ ಸಿದ್ಧತಾ ಕಾರ್ಯವನ್ನು ಪರಿಶೀಲಿಸಿದರು.

ಪ್ರಸಕ್ತ ಸಾಲಿನ ದಸರಾ ಮಹೋತ್ಸವವನ್ನು ಸೆ.26ರಂದು ಬೆಳಗ್ಗೆ ಚಾಮುಂಡಿಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಿದ್ದು, ಅದಕ್ಕಾಗಿ ಬೆಟ್ಟದಲ್ಲಿ ಕೈಗೊಳ್ಳ ಬೇಕಾಗಿರುವ ಸಿದ್ಧತಾ ಕಾರ್ಯ ಹಾಗೂ ಭದ್ರತೆ ಬಗ್ಗೆ ಅವ ಲೋಕಿಸಿದರು. ಚಾಮುಂಡಿಬೆಟ್ಟದ ದೇವಾಲಯದ ಪಕ್ಕದ ಪ್ರಾಂಗಣದಲ್ಲಿ ದಸರಾ ಉದ್ಘಾಟನಾ ಕಾರ್ಯಕ್ರಮ ವಾಟರ್ ಪ್ರೂಫ್ ವೇದಿಕೆ ನಿರ್ಮಿಸಲಾಗುತ್ತಿದ್ದು, ಗಣ್ಯರು ಹಾಗೂ ಸಾರ್ವ ಜನಿಕರು ಆಸೀನರಾಗಲು ಆಸನದ ವ್ಯವಸ್ಥೆ ಮಾಡಬೇಕು. ರಾಷ್ಟ್ರಪತಿಗಳ ವಾಹನ ನಿಲುಗಡೆ, ಅವರ ವಾಹನ ಬರುವಾಗ ಸಾರ್ವಜನಿಕರ ವಾಹನ ಸಂಚಾರಕ್ಕೆ ಕೈಗೊಳ್ಳಬೇಕಾದ ಕ್ರಮ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಅವಲೋಕಿಸಿ, ಮಾಹಿತಿ ಪಡೆದರಲ್ಲದೆ ವೇದಿಕೆ ನಿರ್ಮಾಣದ ಸ್ಥಳವನ್ನು ಪರಿಶೀಲಿಸಿದರು. ಬಳಿಕ ಪತ್ರಕರ್ತರÀರೊಂದಿಗೆ ಸಚಿವ ಎಸ್.ಟಿ.ಸೋಮ ಶೇಖರ್ ಮಾತನಾಡಿ, ದಸರಾ ಮಹೋತ್ಸವಕ್ಕೆ ಸಿದ್ಧತೆ ತ್ವರಿತಗತಿಯಲ್ಲಿ ಸಾಗುತ್ತಿದೆ. ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸಲಾಗಿದ್ದು, ರಾಷ್ಟ್ರಪತಿಗಳೊಂದಿಗೆ ಎಷ್ಟು ಜನ ಬರುತ್ತಾರೆ ಎಂದು ರಾಷ್ಟ್ರಪತಿ ಕಚೇರಿಯಿಂದ ಮಾಹಿತಿ ಬಂದಿಲ್ಲ. ನಾಳೆಯೊಳಗೆ ರಾಷ್ಟ್ರಪತಿಗಳ ಕಚೇರಿಯಿಂದ ಸೂಚನೆ ಬರಲಿದ್ದು, ಅದರ ಆ ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ. ಅಂತಿಮ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದರು.

ರಾಷ್ಟ್ರಪತಿಗಳಿಗೆ ನೀಡುವ ಪ್ರೋಟೊಕಾಲ್‍ನಂತೆ ಸೂಕ್ತ ರೀತಿಯಲ್ಲಿ ಭದ್ರತೆ ಒದಗಿಸಲಾಗುತ್ತದೆ. ಗಣ್ಯರಿಗೆ ಭದ್ರತೆ ನೀಡುವಲ್ಲಿ ಕರ್ನಾಟಕ ದಶಕ್ಕೆ ಮಾದರಿಯಾಗಿದೆ. ಮೈಸೂರು ಪೊಲೀಸರು ಅಗತ್ಯ ಭದ್ರತೆ ಒದಗಿಸುತ್ತಾರೆ ಎಂದರು.

ಸ್ಥಳದ ಲಭ್ಯತೆಗೆ ಅನುಗುಣವಾಗಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗು ತ್ತಿದೆ. ಕಾರ್ಯಕ್ರಮದಲ್ಲಿ 1,500 ಜನರಿಗೆ ಆಸನದ ಅವಕಾಶ ಮಾಡಲಾಗುತ್ತದೆ. ಪ್ರಾಂಗಣದಲ್ಲಿ 500 ಮಂದಿ ನಿಂತುಕೊಂಡು ಕಾರ್ಯಕ್ರಮ ವೀಕ್ಷಿಸಬಹುದಾಗಿದೆ. ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ಅಂದು ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂ ಧಿಸುವುದಿಲ್ಲ. ದೇವಾಲಯಕ್ಕೆ ಬರುವ ಭಕ್ತರೆಲ್ಲರಿಗೂ ಕಾರ್ಯಕ್ರಮ ವೀಕ್ಷಿಸಲು ಅವಕಾಶವಿದೆ ಎಂದು ಹೇಳಿದರು. ಬಳಿಕ ದೇವಸ್ಥಾನದ ಪಾರ್ಕಿಂಗ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗಡಿ ಮಳಿಗೆಗಳು, ಫುಡ್ ಕೋರ್ಟ್ ಗೆ ಭೇಟಿ ಕೊಟ್ಟರು. ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪೆÇಲೀಸ್ ಕಮಿ ಷನರ್ ಚಂದ್ರಗುಪ್ತ, ಎಡಿಸಿ ಡಾ.ಮಂಜುನಾಥಸ್ವಾಮಿ ಸೇರಿದಂತೆ ಹಲವಾರು ಅಧಿಕಾರಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಮತ್ತು ಮುಖಂಡರು ಉಪಸ್ಥಿತರಿದ್ದರು.

Translate »