ಮೈಸೂರು,ಆ.28-ವಸತಿ ಸಚಿವರೂ ಆದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಆಗಸ್ಟ್ 29, 30ರಂದು ಮೈಸೂರು ಪ್ರವಾಸವನ್ನು ಕೈಗೊಂಡಿದ್ದಾರೆ. ಆ.29ರಂದು 11ರಿಂದ 1 ಗಂಟೆವರೆಗೆ ಮುಖ್ಯಮಂತ್ರಿ ಯವರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಮಧ್ಯಾಹ್ನ 2.30 ಗಂಟೆಗೆ ನಗರಪಾಲಿಕೆ ಸಭಾಂಗಣದಲ್ಲಿ ನಗರ ವ್ಯಾಪ್ತಿಯ ಸಂಸದರು, ಶಾಸಕರು ಹಾಗೂ ಪಾಲಿಕೆ ಸದಸ್ಯರೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 3.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಾಸಕರು ಹಾಗೂ ಜಿಪಂ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಡಿಸಿ ಕಚೇರಿ ಸಭಾಂಗಣ ದಲ್ಲಿ ದಸರಾ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ಗಳೊಂದಿಗೆ ಸಭೆ ನಡೆಸುವರು. ಸಂಜೆ 7 ಗಂಟೆಗೆ ಮೈಸೂರು ಮಹಾರಾಣಿ ಪ್ರಮೋದಾ ದೇವಿ ಒಡೆಯರ್ ಸೌಹಾರ್ದ ಭೇಟಿ ನೀಡಲಿದ್ದಾರೆ. ಆ.30ರಂದು ಬೆಳಿಗ್ಗೆ 8.30 ಗಂಟೆಗೆ ನಜûರ್‍ಬಾದ್‍ನಲ್ಲಿರುವ ಸರ್ಕಾರಿ ಅತಿಥಿ ಗೃಹದಲ್ಲಿ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಭೆ ಹಾಗೂ ಉಪಾಹಾರ ಕೂಟದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಮೈಸೂರಿನಿಂದ ರಸ್ತೆಯ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿರುವರು.