ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಮೈಸೂರು

ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

January 21, 2020

ಮೈಸೂರು, ಜ.20- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ಮೈಸೂರು ಜಿಲ್ಲೆಯಲ್ಲಿ ಜನವರಿ 21ರಂದು ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಸುತ್ತೂರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ದೇಸಿ ಆಟಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8 ಗಂಟೆಗೆ ಸುತ್ತೂರು-ಬೆಂಗಳೂರು ರಸ್ತೆ ಮೂಲಕ ಬೆಂಗಳೂರಿಗೆ ತೆರೆಳುವರು.

Translate »