ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ: ಪ್ರಜ್ವಲ್ ರೇವಣ್ಣ ಖುದ್ದು ಹಾಜರಿಗೆ ಹೈಕೋರ್ಟ್ ನೋಟಿಸ್
ಮೈಸೂರು

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ: ಪ್ರಜ್ವಲ್ ರೇವಣ್ಣ ಖುದ್ದು ಹಾಜರಿಗೆ ಹೈಕೋರ್ಟ್ ನೋಟಿಸ್

July 27, 2019

ಬೆಂಗಳೂರು, ಜು. 26-ಆದಾಯ ತೆರಿಗೆಗೆ ಸಂಬಂಧಿಸಿದಂತೆ ಚುನಾ ವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಆರೋಪ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ಚುನಾ ವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಹಾಸನ ಸಂಸದ ಅವರ ಆಯ್ಕೆಯನ್ನು ಅಸಿಂಧುಗೊಳಿಸ ಬೇಕು ಎಂದು ಕೋರಿ ಬಿಜೆಪಿ ಅಭ್ಯರ್ಥಿ ಎ.ಮಂಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ಪೀಠ, ಪ್ರಕರಣ ಸಂಬಂಧ ಆ.18ರಂದು ಖುದ್ದು ಹಾಜರಾಗಿ ಇಲ್ಲವೇ ವಕೀ ಲರ ಮೂಲಕ ವಿವರ ನೀಡುವಂತೆ ಪ್ರಜ್ವಲ್ ಅವರಿಗೆ ಸೂಚಿಸಿದೆ. ಜೊತೆಗೆ, ಪ್ರತಿವಾದಿಗಳಾದ ಕೆ.ಎಚ್. ವಿನೋದ್‍ರಾಜ್, ಎಚ್.ಎಂ.ಚಂದ್ರೇಗೌಡ, ಎಂ. ಲೋಕೇಶ್ ಮತ್ತು ಆರ್.ಜಿ.ಸತೀಶ್ ಅವರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇ ಶಿಸಿದೆ. ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತುಮ ಕೂರಿನಿಂದ ಚುನಾವಣಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ವೇಳೆ ಪ್ರಜ್ವಲ್ ರೇವಣ್ಣ ಅವರಿಗೆ 26 ಲಕ್ಷ ರೂ. ಸಾಲ ನೀಡಿರುವುದಾಗಿ ಪ್ರಮಾಣ ಪತ್ರ ಸಲ್ಲಿಸಿದ್ದರು.

Translate »