ಮೈಸೂರು: ಪ್ರಧಾನಿ ಮೋದಿ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಮನೆ ಮೇಲೆ ಐಟಿ ದಾಳಿ ಮಾಡಿಸಿ ನೈತಿಕ ಶಕ್ತಿ ಕುಗ್ಗಿಸಲು ಪ್ರಯತ್ನಿಸುತ್ತಿದೆ ಎಂದು ಶಾಸಕ ಡಾ.ಯತೀಂದ್ರ ಆರೋಪಿಸಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ವಾಗಿ ಶುಕ್ರವಾರ ಚಾಮುಂಡೇಶ್ವರಿ ಕ್ಷೇತ್ರದ ಕಡಕೊಳ, ಬೀರಿಹುಂಡಿ, ಡಿಎಂಜಿ ಹಳ್ಳಿ, ಹಿನಕಲ್ ಸೇರಿದಂತೆ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದ ಡಾ.ಯತೀಂದ್ರ, ಕಾಂಗ್ರೆಸ್, ಜೆಡಿಎಸ್ ಮುಖಂಡರನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ಐಟಿ ದಾಳಿಗೆ ಹೆದರುವ ಅಗತ್ಯವಿಲ್ಲ ಎಂದರು. ಹಾಸನ ಮತ್ತು ಮಂಡ್ಯದಲ್ಲಿ ಐಟಿ ದಾಳಿ ಯಿಂದಾಗಿ ಜೆಡಿಎಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಇದರ ಫಲವಾಗಿ ಈ ಚುನಾವಣೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಾಗಿ ಮನೆಮನೆಗೆ ತೆರಳಿ ಸರ್ಕಾರದ ಜನಪರ ಕಾರ್ಯ ಕ್ರಮಗಳನ್ನು ತಿಳಿಸಿ ಮತದಾರರ ಮನ ವೊಲಿಸಿ ನಮ್ಮ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ಅವರನ್ನು ಗೆಲ್ಲಿಸ ಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಕೆ.ಮರೀಗೌಡ, ಜಿ.ಪಂ. ಮಾಜಿ ಸದಸ್ಯ ಪಟೇಲ್ ಜವರೇಗೌಡ, ನಾರಾ ಯಣ, ತಾ.ಪಂ. ಸದಸ್ಯರಾದ, ಶ್ರೀಕಂಠ ತೊಂಡೇಗೌಡ, ಮಾರ್ಬಳ್ಳಿ ಕುಮಾರ್, ಗ್ರಾ.ಪಂ. ಅಧ್ಯಕ್ಷ ರಮೇಶ್, ಗುರುಪಾದ ಸ್ವಾಮಿ, ಕಡಕೊಳ ಕುಮಾರಸ್ವಾಮಿ, ಮಹೇಶ, ನಂಜಪ್ಪ ಮಹಾದೇವ್, ಚಂದ್ರು, ಸಿದ್ದರಾಮೇ ಗೌಡ, ಪಟೇಲ್ ರಮೇಶ್, ನಾಗರಾಜು, ಧನಗಳ್ಳಿ ಬಸವರಾಜು ಉಪಸ್ಥಿತರಿದ್ದರು.