ಕೊಡಗಿನ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಶಾಸಕ ಅಪ್ಪಚ್ಚು ರಂಜನ್ ಆಗ್ರಹ
ಕೊಡಗು

ಕೊಡಗಿನ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಶಾಸಕ ಅಪ್ಪಚ್ಚು ರಂಜನ್ ಆಗ್ರಹ

August 5, 2018

ಸೋಮವಾರಪೇಟೆ: ಕೊಡಗು ಜಿಲ್ಲೆಯಾಗಿಯೇ ಉಳಿಯ ಬೇಕಾದರೆ ರಾಜ್ಯ ಸರಕಾರ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಆಗ್ರಹಿಸಿದರು.

ಇಲ್ಲಿನ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ರಾಜ್ಯದ ಇತರ ಜಿಲ್ಲೆಗಳಿಗೆ ವರದಾನವಾಗಿದೆ. ಆದರೆ ಮಳೆಗಾಳಿಯಿಂದ ಇಲ್ಲಿನ ರೈತರ ಕೃಷಿ ಬೆಳೆಗಳು ನಾಶವಾಗಿದೆ. ರಾಜ್ಯದ ಮುಖ್ಯ ಮಂತ್ರಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಮಳೆ ಹಾನಿ ಪರಿಹಾರಕ್ಕೆ 100 ಕೋಟಿ ಘೋಷಣೆ ಮಾಡಿದ್ದಾರೆ. ಆದರೆ ಇದುವರೆಗೂ ಜಿಲ್ಲಾಡಳಿತದ ಖಾತೆಗೆ ಚಿಕ್ಕಾಸು ಹಣ ಬಿಡುಗಡೆಯಾಗಿಲ್ಲ. ಮುಖ್ಯಮಂತ್ರಿಗಳು ರೈತರ ಕಣ್ಣೊರೆಸುವ ತಂತ್ರವನ್ನು ಮಾಡುತ್ತಿದೆ ಎಂದರು.

ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಲು 48ಸಾವಿರ ಕೋಟಿ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ. ಕೊಡಗು ಜಿಲ್ಲೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭ ಕೇವಲ 4ಕೋಟಿ ಮಾತ್ರ ದೊರೆತಿದೆ. ಈಗಾಗಲೇ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ 127ಕೋಟಿ ಸಾಲವನ್ನು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮೂಲಕ 22ಕೋಟಿ ಸಾಲ ನೀಡಿದೆ. ಆದರೆ ಸರಕಾರದಿಂದ ಕೇವಲ ಮೂರುವರೆ ಕೋಟಿ ಮಾತ್ರ ಬಿಡುಗಡೆಯಾಗಿದೆ. ಈಗಾಗಲೆ ರಾಜ್ಯ ಸರಕಾರ ರೈತರಿಗೆ 14 ಷರತ್ತುಗಳನ್ನು ವಿಧಿಸಿದೆ. ಇದರಿಂದ ರೈತ ರಿಗೆ ಸಾಲ ಮನ್ನಾ ಮರೀಚಿಕೆಯಾಗಿ ಉಳಿಯಲಿದೆ. ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭ ಪ್ರತೀ ವರ್ಷ 5ಕೋಟಿ ಹಣ ಬಿಡುಗಡೆಯಾಗಿತ್ತು ಎಂದರು.

ಈಗ ರಾಜ್ಯದಲ್ಲಿ ಅಧಿಕಾರದಲ್ಲಿರುವ ಮೈತ್ರಿ ಸರಕಾರದಿಂದ ಜನರಿಗೆ ಭ್ರಮ ನಿರಸನ ಉಂಟಾಗಿದೆ. ಸ್ಥಳೀಯ ಸಂಸ್ಥೆ ಳ ಚುನಾವಣೆಯಲ್ಲಿ ಮೈತ್ರಿ ತಂತ್ರವನ್ನು ಅನುಸರಿಸಿರುವ ಜೆಡಿಎಸ್ ಮತ್ತು ಕಾಂಗ್ರೇಸ್ ಪಕ್ಷದ ತೀರ್ಮಾನ ಅವರಿಗೆ ಮುಳುವಾಗಲಿದೆ. ವಿರಾಜಪೇಟೆ, ಕುಶಾಲನಗರ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಈ ಭಾರಿ ಬಿಜೆಪಿ ಅಧಿಕಾರ ಪಡೆಯಲಿದೆ. ಸೋಮವಾರ ಪೇಟೆಯಲ್ಲಿ 1996ರಿಂದ ಪಟ್ಟಣ ಪಂಚ ಯಿತಿ ಆಡಳಿತ ಬಿಜೆಪಿ ವಶದಲ್ಲಿದೆ. ಇದಕ್ಕೆ ಪಟ್ಟಣದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಕ್ರಮಗಳೇ ಸಾಕ್ಷಿಯಾಗಿದೆ.

ಗೋಷ್ಟಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್, ಪ್ರಧಾನ ಕಾರ್ಯದರ್ಶಿ ವಿ.ಕೆ.ಲೋಕೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಜಿಲ್ಲಾ ಪಂಚಾ ಯಿತಿ ಸದಸ್ಯ ಶ್ರೀನಿವಾಸ್ ಉಪಸ್ಥಿತರಿದ್ದರು.

Translate »