ವಿರಾಜಪೇಟೆಯಲ್ಲಿ ಬಿಜೆಪಿಯಿಂದ ಶಾಸಕ ಕೆ.ಜಿ.ಬೋಪಯ್ಯ ನಾಮಪತ್ರ ಸಲ್ಲಿಕೆ
ಕೊಡಗು

ವಿರಾಜಪೇಟೆಯಲ್ಲಿ ಬಿಜೆಪಿಯಿಂದ ಶಾಸಕ ಕೆ.ಜಿ.ಬೋಪಯ್ಯ ನಾಮಪತ್ರ ಸಲ್ಲಿಕೆ

April 25, 2018

ವಿರಾಜಪೇಟೆ: ವಿರಾಜಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಕೆ.ಜಿ.ಬೋಪಯ್ಯ, ಕಾಂಗ್ರೆಸ್ ಬಂಡಾಯ ಅಭ್ಯ ರ್ಥಿಗಳಾಗಿ ಅರಣ್ಯ ಅಭಿವೃದ್ಧಿ ನಿಗಮದ ಉಪಾ ಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ, ಪಕ್ಷೇತರರಾಗಿ ವಕೀಲ ಅಚ್ಚಪಂಡ ಗಿರೀಶ್, ಗಿರಿ ಜನ ಮುಖಂಡ ಪಿ.ಎಸ್.ಮುತ್ತ, ಪೈಯಾಜ್ ಸೇರಿ 6 ಮಂದಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪದ್ಮಿನಿ ಪೊನ್ನಪ್ಪ, ನಾನು 2008 ಮತ್ತು 2013ರಲ್ಲೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಕ್ಷೇತ್ರದಲ್ಲಿ ಅನೇಕ ಜನ ಪರ ಕೆಲಸಗಳನ್ನು ಮಾಡಿದ್ದೇನೆ. ಆದರೆ, ಪಕ್ಷದ ವರಿಷ್ಠರು ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನನ್ನನ್ನು ಕಡೆಗಣ ಸಿರುವ ಕಾರಣ ಬಂಡಾಯವಾಗಿ ಸ್ಪರ್ಧಿ ಸುತ್ತಿದ್ದೇನೆ. ಕ್ಷೇತ್ರದ ಮತದಾರರು ನನನ್ನು ಗೆಲ್ಲಿ ಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ವಿರಾಜಪೇಟೆ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿರುವ ಪದ್ಮಿನಿ ಪೊನ್ನಪ್ಪ.

ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಹರೀಶ್ ಬೋಪಣ್ಣ, ನಾನು ವಿರಾಜ ಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರೂ, ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಗಳು ಸೌಜನ್ಯ ಕ್ಕಾದರೂ ನನ್ನ ಜೊತೆ ಮಾತನಾಡಲಿಲ್ಲ. ನಾನು ಪೊನ್ನಂ ಪೇಟೆ ಮತ್ತು ಕುಶಾಲನಗರ ತಾಲೂಕು ರಚನೆ ಬಗ್ಗೆ ಮತ್ತು ಕೊಡಗಿನ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ ನೀಡುವ ಬಗ್ಗೆ ಮನವಿ ಮಾಡಲು ಮುಂದಾಗಿದ್ದೆ. ಟಿಕೆಟ್ ವಿಚಾರದಲ್ಲಿ ಈವರೆವಿಗೂ ನನ್ನನ್ನು ಯಾರೂ ಸಂಪರ್ಕಿಸದ ಕಾರಣ ಬಂಡಾಯ ವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.

ವಿರಾಜಪೇಟೆ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿರುವ ಹರೀಶ್ ಬೋಪಣ್ಣ.

Translate »