ಮೈಸೂರು: ಮಹಾರಾಣಿ ವಿಜ್ಞಾನ ಮತ್ತು ಕಲಾ ಕಾಲೇಜಿಗೆ ಶಾಸಕ ಎಲ್.ನಾಗೇಂದ್ರ ಭೇಟಿ ನೀಡಿ, ಪರಿಶೀಲಿಸಿದರು.
ಈ ವೇಳೆ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯದ ಶೌಚಾಲಯಗಳು ಗಬ್ಬುವಾಸನೆ ಬೀರುತ್ತಿದ್ದನ್ನು ಕಂಡು ಕೂಡಲೇ ಸ್ವಚ್ಛ ಮಾಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಕಾಲೇಜಿನ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳುವಂತೆ ಜಂಟಿ ನಿರ್ದೇಶಕರು ಹಾಗೂ ಪ್ರಾಂಶುಪಾಲರಿಗೆ ತಿಳಿಸಿದರು.
ನಂತರ ಅಧ್ಯಾಪಕರು, ನೀರಿನ ವ್ಯವಸ್ಥೆಗಾಗಿ ಬೋರ್‍ವೆಲ್ ಇದ್ದು, ಹೆಚ್ಚು ಸಾಮಥ್ರ್ಯದ ಪಂಪ್ ಅಳವಡಿಸಬೇಕು. 25 ಸಾವಿರ ಲೀಟರ್ ಸಾಮಥ್ರ್ಯದ ಸಂಪ್ ನಿರ್ಮಿಸಬೇಕು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುರಿಂದ ಹೊಸ ಕೊಠಡಿಗಳನ್ನು ನಿರ್ಮಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಸಂಸದರ ನಿಧಿಯಿಂದ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.