ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಶಾಸಕ ನಿರಂಜನಕುಮಾರ್
ಚಾಮರಾಜನಗರ

ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಶಾಸಕ ನಿರಂಜನಕುಮಾರ್

May 8, 2019

ಗುಂಡ್ಲುಪೇಟೆ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುರಸಭೆಗೆ ನಡಿದ್ದ ಅನುದಾನಗಳ ಬಗ್ಗೆ ಕಾರ್ಯಕರ್ತರು ಮನೆ ಮನೆಗೆ ತೆರಳಿ ತಿಳಿಸುವ ಮೂಲಕ ಪುರಸಭೆಯ ಎಲ್ಲಾ 23 ಸ್ಥಾನಗಳಲ್ಲೂ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಮನವಿ ಮಾಡಿದರು.

ಪಟ್ಟಣದ ಸಿಎಂಎಸ್ ಕಲಾಮಂದಿರದಲ್ಲಿ ಆಯೋಜಿ ಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತ ನಾಡಿದ ಅವರು, ಬಿಜೆಪಿ ಬೆಳೆಯಲು ಕಾರಣರಾದ ಸಮರ್ಥ ಹಾಗೂ ಅರ್ಹರಿಗೆ ಪಕ್ಷದ ಟಿಕೆಟ್ ನೀಡಲಾಗುವುದು. ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಪಕ್ಷವು ಟಿಕೆಟ್ ನೀಡಿದ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು. ಎಲ್ಲಾ 23 ಸ್ಥಾನಗಳನ್ನೂ ಬಿಜೆಪಿ ಗೆಲ್ಲುವ ಮೂಲಕ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಈ ವೇಳೆ ಬಿಜೆಪಿ ಮಂಡಲಾಧ್ಯಕ್ಷ ಎನ್.ಮಲ್ಲೇಶ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಹಂಗಳ ಪ್ರಣಯ್, ಪುರಸಭೆ ಮಾಜಿ ಅಧ್ಯಕ್ಷ ಪಿ.ಗಿರೀಶ್, ಮಾಜಿ ಸದಸ್ಯರಾದ ಎನ್.ಗೋವಿಂದರಾಜನ್, ಎನ್.ರಮೇಶ್, ಮುಖಂಡರಾದ ಎಸ್.ಪಿ.ಸುರೇಶ್, ನಾಗೇಶ್, ಹುಚ್ಚೇ ಗೌಡ, ಬಸವರಾಜು ಸೇರಿದಂತೆ ಹಲವರಿದ್ದರು.

Translate »