ಗುಂಡ್ಲುಪೇಟೆ: ಕ್ಷೇತ್ರದ ಶಾಸಕ ಸಿ.ಎಸ್.ನಿರಂಜನ ಕುಮಾರ್ ಶುಕ್ರವಾರ ಮುಂಜಾನೆ ತುಮ ಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮಿಗಳಿಂದ ಆಶೀ ರ್ವಾದ ಪಡೆದರು.
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಸಭಾ ಅಧಿವೇಶನದಲ್ಲಿ ಭಾಗವಹಿಸಿದ್ದ ಶಾಸಕ ಸಿ.ಎಸ್.ನಿರಂಜನ್‍ಕುಮಾರ್ ಮುಂಜಾನೆ ಸಿದ್ದಗಂಗಾ ಮಠಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ನಂತರ ಶ್ರೀಗಳನ್ನು ಭೇಟಿ ಮಾಡಿ ಆಶೀ ರ್ವಾದ ಪಡೆದುಕೊಂಡರು.