ರೈತರ ಅಲೆದಾಟ: ಅಧಿಕಾರಿಗಳ ವಿರುದ್ಧ ಶಾಸಕ ಆಕ್ರೋಶ
ಮಂಡ್ಯ

ರೈತರ ಅಲೆದಾಟ: ಅಧಿಕಾರಿಗಳ ವಿರುದ್ಧ ಶಾಸಕ ಆಕ್ರೋಶ

June 20, 2018

ಮಂಡ್ಯ:  ರೈತರು ಅತೀ ಹೆಚ್ಚು ತಾಲೂಕು ಕಚೇರಿಗೆ ಅಲೆದಾಡುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬ ದೂರು ಬಂದಿದೆ. ಸಾರ್ವಜನಿಕ ಕೆಲಸ ಮಾಡಿಕೊಡಲು ವಿಳಂಬ ಮಾಡು ತ್ತಿರುವುದೇಕೆ ಎಂದು ಅಧಿಕಾರಿಗಳ ವಿರುದ್ದ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಹರಿ ಹಾಯ್ದ ಪ್ರಸಂಗ ತಾಪಂನಲ್ಲಿ ನಡೆಯಿತು.

ನಗರದ ತಾಪಂ ಸಭಾಂಗಣದಲ್ಲಿಂದು ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರನ್ನು ವಿನಾಕಾರಣ ಅಲೆದಾಡಿಸದೇ ಸಕಾಲದಲ್ಲಿ ಅವರ ಕೆಲಸಗಳನ್ನು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ರೈತರ ಜಮೀನು ಸರ್ವೇ ಮತ್ತಿತರ ಕೆಲಸಗಳು ಬಹಳ ವಿಳಂಬವಾಗುತ್ತಿವೆ ಎಂಬ ದೂರುಗಳು ಕೇಳಿ ಬರುತ್ತಿವೆ. ಅಧಿ ಕಾರಿಗಳು ಈ ಬಗ್ಗೆ ಎಚ್ಚರಿಕೆಯಿಂದ ಕೆಲಸ ಮಾಡಬೇಕೆಂದರು. ಏನೇ ಸಮಸ್ಯೆಯಿ ದ್ದರೂ ನನ್ನ ಬಳಿ ಬನ್ನಿ. ಸಾರ್ವಜನಿಕ ಕೆಲಸಗಳಿಗೆ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಜಿಲ್ಲೆಯ 7 ಶಾಸಕರು ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದು, ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುವುದಾಗಿ ತಿಳಿಸಿದ್ದಾರೆ. ಅಧಿಕಾರಿ ಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸ ಬೇಕು ಎಂದು ತಿಳಿಸಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಧಿಕಾರಿ ಗಳು ಕೈ ಜೋಡಿಸಬೇಕು. ಜನತೆಗೆ ಗೌರವ ನೀಡಬೇಕು. ಎತ್ತಿಕಟ್ಟುವ ಕೆಲಸ ಮಾಡಬಾರದು. ಸೆಸ್ಕ್ ಇಲಾಖೆಯಲ್ಲಿ ಬಹಳಷ್ಟು ದೂರುಗಳಿವೆ. ಸಮರ್ಪಕ ವಿದ್ಯುತ್ ಪೂರೈಕೆ, ಟ್ರಾನ್ಸ್‍ಫಾರ್ಮರ್ ರಿಪೇರಿ ಮತ್ತು ಬದಲಾವಣೆ ಬಗ್ಗೆ ಶೀಘ್ರದಲ್ಲಿ ಕ್ರಮ ವಹಿಸಬೇಕು ಎಂದು ಶಾಸಕರು ಸ್ರಚಿಸಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಆಗಬೇಕಾಗಿ ರುವ ಕೆಲಸ ಕಾರ್ಯಗಳನ್ನು ಪಟ್ಟಿ ಮಾಡಿ ತಿಳಿಸುವಂತೆ ಹೇಳಿದ ರವೀಂದ್ರ ಶ್ರೀಕಂಠಯ್ಯ ಜನತೆಯ ಭಾವನೆಗಳಿಗೆ ಧಕ್ಕೆಯಾಗದಂತೆ ಕೆಲಸ ಮಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ತಿಳಿಸಿದರು.

ತಾಪಂ ಅಧ್ಯಕ್ಷೆ ಶೈಲಜಾ, ಉಪಾಧ್ಯಕ್ಷೆ ಮಂಜುಳಾ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ಬೆಟ್ಟಸ್ವಾಮಿ, ಇಓ ಎನ್.ಜಿ.ನಾಗ ರಾಜು, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Translate »