ಮಕ್ಕಳಿಗೆ ರೋಟಾ ವೈರಸ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ರಾಮದಾಸ್ ಚಾಲನೆ
ಮೈಸೂರು

ಮಕ್ಕಳಿಗೆ ರೋಟಾ ವೈರಸ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ರಾಮದಾಸ್ ಚಾಲನೆ

August 30, 2019

ಮೈಸೂರು,ಆ.29(ಆರ್‍ಕೆಬಿ)- ಮಕ್ಕಳನ್ನು ಕಾಡುವ ರೋಟಾ ವೈರಸ್ ಸೋಂಕನ್ನು ನಿಯಂತ್ರಿಸಲು ರೋಟಾ ವೈರಸ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಎಸ್.ಎ. ರಾಮದಾಸ್ ಗುರುವಾರ ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶಿಶುಗಳಿಗೆ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು.

ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್‍ಸಿಹೆಚ್ ವಿಭಾಗ ಆಯೋಜಿ ಸಿದ್ದ ಕಾರ್ಯಕ್ರಮದಲ್ಲಿ ಶಿಶುಗಳಿಗೆ ರೋಟಾ ವೈರಸ್ ಲಸಿಕೆಯನ್ನು ಓಪಿವಿ (2 ಹನಿ ಬಾಯಿಯ ಮೂಲಕ), ಆರ್‍ವಿವಿ (2.5 ಮಿ.ಲೀ. ಬಾಯಿಯ ಮೂಲಕ) ನೀಡಿದರು.

ಬಳಿಕ ಮಾತನಾಡಿದ ಅವರು, ಮಕ್ಕಳಲ್ಲಿ ಅತಿಸಾರ ಭೇದಿಯು ಜಾಗತಿಕವಾಗಿ ಮತ್ತು ಭಾರತದಲ್ಲಿ ಮಕ್ಕಳಲ್ಲಿ ಮರಣ ಸಂಭವಿಸಲು ಪ್ರಮುಖ ಕಾರಣವಾಗಿದೆ. ವಿಶ್ವ ದಲ್ಲಿ 5 ವರ್ಷದೊಳಗಿನ ಮಕ್ಕಳ ಶೇ.9ರಷ್ಟು ಮತ್ತು ಭಾರತದಲ್ಲಿ ಶೇ.10ರಷ್ಟು ಮಕ್ಕಳು ಅತಿಸಾರ ಭೇದಿಯಿಂದ ಸಾವನ್ನಪ್ಪುತ್ತಿದ್ದಾರೆ. ಅಪೌಷ್ಟಿಕತೆ, ನಿಶ್ಯಕ್ತಿ ಮತ್ತು ದೀರ್ಘ ಕಾಲೀನ ಪೌಷ್ಟಿಕಾಂಶದ ಕೊರತೆಗಳಿಗೂ ಈ ರೋಟಾ ವೈರಸ್ ಪ್ರಮುಖ ಕಾರಣವಾಗಿದೆ. ಲಭ್ಯವಿರುವ ಮಾಹಿತಿ ಪ್ರಕಾರ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕ ಳಲ್ಲಿ ಶೇ.40ರಷ್ಟು ಮಕ್ಕಳು ಅತಿಸಾರ ಭೇದಿಯಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. 32.7 ಲಕ್ಷ ಮಕ್ಕಳು ಹೊರ ರೋಗಿಗಳಾಗಿ ಮತ್ತು 8.72 ಲಕ್ಷದಷ್ಟು ಮಕ್ಕಳು ಒಳರೋಗಿಗಳಾಗಿ ದಾಖಲಾಗುತ್ತಿದ್ದಾರೆ, 78,000 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂದು ಹೇಳಿದರು.

ಹೀಗಾಗಿ ಮಕ್ಕಳನ್ನು ರೋಟಾ ವೈರಸ್ ಸೋಂಕಿ ನಿಂದ ನಿಯಂತ್ರಿಸಿ ಮಕ್ಕಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ರಾಜ್ಯದಲ್ಲಿ ರೋಟಾ ವೈರಸ್ ಲಸಿಕೆಯನ್ನು ಪರಿಚಯಿಸಲಾಗುತ್ತಿದೆ. ಮೈಸೂರು ಜಿಲ್ಲೆಯ ಎಲ್ಲಾ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಒಟ್ಟು 36,498 ಮಕ್ಕಳಿಗೆ ರೋಟಾ ವೈರಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಕೆ.ಜ್ಯೋತಿ, ಮೇಯರ್ ಪುಷ್ಪಲತಾ ಜಗನ್ನಾಥ್, ಪಾಲಿಕೆ ಸದಸ್ಯರಾದ ರೂಪಾ, ಛಾಯಾದೇವಿ, ಡಿಹೆಚ್‍ಓ ಕೃಷ್ಣಮೂರ್ತಿ, ಆರೋಗ್ಯ ಇಲಾಖೆಯ ಉಪ ನಿರ್ದೇಶಕ ರಾಮಚಂದ್ರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್, ಮೈಸೂರು ತಾಲೂಕು ಆರೋಗ್ಯಾಧಿಕಾರಿ ಡಾ.ಮಹದೇವ ಪ್ರಸಾದ್ ಇನ್ನಿತರರು ಉಪಸ್ಥಿತರಿದ್ದರು.

ಏನಿದು ರೋಟಾ ವೈರಸ್?
ರೋಟಾ ವೈರಸ್ ಹೆಚ್ಚು ಸಾಂಕ್ರಾಮಿಕವಾಗಿದ್ದು, ರೋಟಾ ವೈರಸ್ ಅತಿಸಾರದಿಂದ ಬಳಲುತ್ತಿರುವ ರೋಗಿಗಳು ದೊಡ್ಡ ಪ್ರಮಾಣದಲ್ಲಿ ವೈರಸ್ಸನ್ನು ಮಲದ ಮೂಲಕ ಹೊರ ಚೆಲ್ಲುತ್ತಾರೆ. ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಕಲುಷಿತ ವಾದ ನೀರು, ಆಹಾರ ಮತ್ತು ಕೊಳೆಯಾದ ಕೈಗಳ ಸಂಪರ್ಕಕ್ಕೆ ಬರುವುದರಿಂದ ಜಿಚಿeಛಿo oಡಿಚಿಟ ಮಾರ್ಗ ದಿಂದ ಹರಡುತ್ತದೆ. ಈ ವೈರಾಣು ತುಂಬಾ ಸಮಯ ದವರೆಗೆ ಮಕ್ಕಳ ಕೈಯ್ಯಲ್ಲಿ ಮತ್ತು ಇತರೆ ಗಟ್ಟಿಯಾದ ಮೇಲ್ಪದರಗಳಲ್ಲಿ ಜೀವಂತವಾಗಿರಬಹುದು.

ಚಿಕಿತ್ಸೆ ಏನು?: ಮೇಲ್ನೋಟಕ್ಕೆ ರೋಟಾ ವೈರಸ್ ಸೋಂಕನ್ನು ಇತರ ಸಾಂಕ್ರಾಮಿಕ ಅತಿಸಾರದಿಂದ ವಿಂಗಡಿಸಲು ಸಾಧ್ಯವಿಲ್ಲ. ಮತ್ತು ರೋಟಾ ವೈರಸ್ ಸೋಂಕಿನ ರೋಗ ನಿರ್ಣಯವನ್ನು ದೃಢೀಕರಿ ಸಲು ಮಲದ ಪ್ರಯೋಗಾಲಯ ಪರೀಕ್ಷೆಗಳು ಅಗತ್ಯ. ಮಲದಲ್ಲಿನ ರೋಟಾ ವೈರಸ್ ಅನ್ನು ಪತ್ತೆ ಹಚ್ಚಲು ವಿವಿಧ ಪರೀಕ್ಷೆಗಳು ಲಭ್ಯವಿದೆ. ಈ ರೋಟಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆಯುವ ಏಕೈಕ ನಿರ್ದಿಷ್ಟ ಸಾಧನವೆಂದರೆ ರೋಟಾ ವೈರಸ್ ಲಸಿಕೆ ಹಾಕಿಸುವುದು.

ರೋಟಾ ವೈರಸ್ ಲಸಿಕೆ: ರೋಟಾ ವೈರಸ್ ಲಸಿಕೆ ಯನ್ನು ಬಾಯಿಯ ಮೂಲಕ ಮಕ್ಕಳಿಗೆ 6, 10 ಮತ್ತು 14 ವಾರಗಳ ವಯಸ್ಸಿನಲ್ಲಿ ನೀಡಲಾಗು ವುದು. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಅಡಿ ಯಲ್ಲಿ ಎಲ್ಲಾ ಲಸಿಕೆಗಳ ಜೊತೆಯಲ್ಲಿ ರೋಟಾ ವೈರಸ್ ಲಸಿಕೆ ನೀಡಲಾಗುವುದು. ಈ ಲಸಿಕೆಯು ತೀವ್ರವಾದ ಮತ್ತು ಮಾರಣಾಂತಿಕ ರೋಟಾ ವೈರಸ್ ಅತಿಸಾರ ಭೇದಿಯಿಂದ ಕಾಪಾಡಲು ಅತಿ ಪ್ರಮುಖವಾಗಿರುತ್ತದೆ.

Translate »