ತೆರಕಣಾಂಬಿ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ

ಗುಂಡ್ಲುಪೇಟೆ:  ತಾಲೂಕಿನ ತೆರಕಣಾಂಬಿ ಗ್ರಾಮದ ಪ್ರಾಥ ಮಿಕ ಆರೋಗ್ಯ ಕೇಂದ್ರಕ್ಕೆ ಸೋಮವಾರ ಶಾಸಕ ಸಿ.ಎಸ್.ನಿರಂಜನಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಕೇಂದ್ರದಲ್ಲಿ ಕೇವಲ ಒಬ್ಬರೇ ವೈದ್ಯರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಹಿಳಾ ವೈದ್ಯರು, ತಾಂತ್ರಿಕ ಸಿಬ್ಬಂದಿ ಹಾಗೂ ಶುಶ್ರೂಷಕಿಯರ ಕೊರತೆಯಿಂದ ರೋಗಿಗಳು ಪರದಾಡುವಂತಾಗಿದೆ. ಇದ ರಿಂದ ರೋಗಿಗಳು ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಯ ಮೋರೆ ಹೋಗುವ ಅನಿವಾರ್ಯತೆ ಎದುರಾಗಿದೆ.

ಹೋಬಳಿಯ ಸುತ್ತಲು ಕಾಡಂಚಿನ ಗ್ರಾಮಗಳಿದ್ದು, ವನ್ಯಜೀವಿ ದಾಳಿ ಅಥವಾ ಅಪಘಾತಗಳಿಂದ ಗಾಯಗೊಂಡವರಿಗೆ ಸಕಾಲದಲ್ಲಿ ಚಿಕಿತ್ಸೆ ದೊರಕುತ್ತಿಲ್ಲ. ಹಾಗಾಗಿ, ಕೂಡಲೇ ವೈದ್ಯರು, ಶುಶ್ರೂಷಕಿಯರು, ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಬೇಕು ಎಂದು ಗ್ರಾಮದ ಮುಖಂಡರು ಶಾಸಕರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ನಿರಂಜನ್‍ಕುಮಾರ್, ಈ ಸಂಬಂಧ ಅಧಿಕಾರಿಗಳ ಜತೆ ಚರ್ಚಿಸಿ ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ತಾಲೂಕು ಪಂಚಾಯಿತಿ ಸದಸ್ಯ ಆರ್. ಮಹೇಶ್, ಮಾಜಿ ಸದಸ್ಯ ಸಿ.ಮಹ ದೇವಪ್ರಸಾದ್, ಗ್ರಾಮ ಪಂಚಾಯಿತಿ ಸದಸ್ಯ ಟಿ.ಎಸ್.ಮಹದೇವಸ್ವಾಮಿ, ರೈತ ಸಂಘದ ಜಿಲ್ಲಾ ಸಂಚಾಲಕ ಟಿ.ಎಸ್.ಶಾಂತಮಲ್ಲಪ್ಪ, ಮುಖಂಡ ರಾದ ಟಿ.ಆರ್.ರಮೇಶ್ ನಾಯ್ಕ, ಪ್ರಕಾಶ್, ಪ್ರಶಾಂತ್ ಇದ್ದರು.