ಸರ್ಕಾರಗಳ ಸೌಲಭ್ಯ ಸದ್ಬಳಕೆ ಮೂಲಕ ಸ್ವಂತ ಕೈಗಾರಿಕೆ ಆರಂಭಿಸಲು ಯುವ ಉದ್ಯಮಿಗಳಿಗೆ ಶಾಸಕರ ಕಿವಿಮಾತು

ಮೈಸೂರು: ಸ್ವಂತ ಉದ್ಯಮ ಆರಂಭಿಸಲು ಸರ್ಕಾರಗಳು ನೀಡು ತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿ ಕೊಳ್ಳುವ ಮೂಲಕ ಯುವ ಸಮುದಾಯ ನಿರುದ್ಯೋಗ ಸಮಸ್ಯೆ ನಿವಾರಿಸಲು ಮುಂದಾಗಬೇಕು ಎಂದು ಶಾಸಕ ಎಲ್.ನಾಗೇಂದ್ರ ಸಲಹೆ ನೀಡಿದರು.

ಮೈಸೂರಿನ ಜೆಎಲ್‍ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾ ಟಕ ಸಣ್ಣ ಕೈಗಾರಿಕೆಗಳ ಉದ್ಯಮಿದಾರರ ಸಂಘ (ಕಾಸಿಯಾ), ಮೈಸೂರು ಜಿಲ್ಲಾ ಪರಿ ಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿ ದಾರರ ಸಂಘದ ಸಂಯುಕ್ತಾಶ್ರಯದಲ್ಲಿ 2018-19ರ ನೂತನ ಜವಳಿ ನೀತಿ ಸಂಬಂಧ ನೂತನ ಉದ್ಯಮಿಗಳಿಗೆ ಹಮ್ಮಿಕೊಂಡಿ ರುವ ಎರಡು ದಿನಗಳ ಉದ್ಯಮಶೀಲತಾ ಭಿವೃದ್ಧಿ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವ ಉದ್ಯಮಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅನೇಕ ಸೌಲಭ್ಯ ನೀಡುತ್ತಿದ್ದು, ಆಗಾಗ್ಗೆ ತರಬೇತಿ ಕಾರ್ಯಕ್ರಮಗಳಿಗೆ ವ್ಯವಸ್ಥೆ ಮಾಡಿದೆ. ಇದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಯುವ ಜನತೆ ಸ್ವ-ಉದ್ಯೋಗಕ್ಕೆ ಒತ್ತು ನೀಡಬೇಕು. ಇದರಿಂದ ನಿರುದ್ಯೋಗ ಸಮಸ್ಯೆ ಪರಿ ಹಾರವಾಗಲಿದೆ ಎಂದು ಹೇಳಿದರು.
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪಕ್ಷಾತೀತ ವಾಗಿ ಕಾರ್ಮಿಕ ವರ್ಗದ ಹಿತ ಕಾಯಲು ಆದ್ಯತೆ ನೀಡಬೇಕಿದೆ. ಕಾರ್ಮಿಕರು ಮತ್ತು ಮಾಲೀಕರ ನಡುವೆ ಉತ್ತಮ ಬಾಂಧವ್ಯ ಇರಬೇಕು. ಆ ಮೂಲಕ ಇಬ್ಬರೂ ಪರ ಸ್ಪರ ತಮ್ಮ ಬೇಡಿಕೆಗಳನ್ನು ಈಡೇರಿಸಿ ಕೊಳ್ಳಬೇಕು. ಇಲ್ಲವಾದರೆ, ಕೈಗಾರಿಕೆಗಳು ಸ್ಥಗಿತಗೊಂಡು ಮಾಲೀಕ ನಷ್ಟಕ್ಕೆ ತುತ್ತಾ ದರೆ, ಕಾರ್ಮಿಕರು ಬೀದಿ ಪಾಲಾಗ ಬೇಕಾಗುತ್ತದೆ. ಅಂತಹ ಸನ್ನಿವೇಶ ನಿರ್ಮಾಣ ಆಗದಂತೆ ಎಚ್ಚರ ವಹಿಸ ಬೇಕು ಎಂದು ಅಭಿಪ್ರಾಯಪಟ್ಟರು.

ರೈತರು ದೇಶಕ್ಕೆ ಅನ್ನ ನೀಡುತ್ತಿದ್ದರೆ, ಕಾರ್ಮಿಕರು ಆರ್ಥಿಕಾಭಿವೃದ್ಧಿಗೆ ತಮ್ಮ ಶ್ರಮ ವ್ಯಯಿಸುತ್ತಿದ್ದಾರೆ. ಅಭಿವೃದ್ಧಿ ಹೊಂದಿದ ದೇಶಗಳು ಕೃಷಿ-ಕೈಗಾರಿಕಾ ಕ್ಷೇತ್ರದಲ್ಲಿ ಯಂತ್ರದ ಮೊರೆ ಹೋಗಿದ್ದು, ಅಭಿವೃದ್ಧಿ ಶೀಲ ದೇಶವಾದ ನಮ್ಮ ರಾಷ್ಟ್ರದಲ್ಲಿ ಯಂತ್ರಗಳಿಗಿಂತ ಮಾನವ ಸಂಪನ್ಮೂಲಕ್ಕೆ ಹೆಚ್ಚಿನ ಆದ್ಯತೆ ನೀಡುವ ಕಾರ್ಯವಾಗ ಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ನೂತನ ಉದ್ಯಮಿ ಗಳು ಪಾಲ್ಗೊಳ್ಳಲು ಉಚಿತ ನೋಂದಣಿಗೆ ಅವಕಾಶ ಮಾಡಿದ್ದು, ಮೈಸೂರು ಜಿಲ್ಲೆಯ ವಿವಿಧ ಭಾಗಗಳಿಂದ 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ. ಕಾರ್ಯಕ್ರಮದಲ್ಲಿ 6 ಅಧಿವೇಶನಗಳು ನಡೆಯಲಿದ್ದು, ನಾಳೆ ಕೈಗಾರಿಕೆಗಳಿಗೆ ಭೇಟಿ ನೀಡುವ ಕಾರ್ಯ ಕ್ರಮ ರೂಪಿಸಲಾಗಿದೆ. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಡಿಜಿಎಂ ಬಿ.ಇ. ಗೋಪಾಲ್ ಭೈರಿ, ಮೈಸೂರು ಜಿಲ್ಲಾ ಕೈಗಾ ರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ. ಲಿಂಗರಾಜು, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ವೆಂಕಟಾಚಲಪತಿ, ಮೈಸೂರು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಮತ್ತಿತರರು ಹಾಜರಿದ್ದರು.