ವಕೀಲರ ಬಗ್ಗೆ ಅವಹೇಳನ ಎಂಬುದು ಕಾಂಗ್ರೆಸ್ಸಿಗರ ಅಪಪ್ರಚಾರ ವಕೀಲ ಬಂಧುಗಳು ಇದಕ್ಕೆ ಕಿವಿಕೊಡಬಾರದು
ಮೈಸೂರು

ವಕೀಲರ ಬಗ್ಗೆ ಅವಹೇಳನ ಎಂಬುದು ಕಾಂಗ್ರೆಸ್ಸಿಗರ ಅಪಪ್ರಚಾರ ವಕೀಲ ಬಂಧುಗಳು ಇದಕ್ಕೆ ಕಿವಿಕೊಡಬಾರದು

June 8, 2022

ಮೈಸೂರು,ಜೂ.7(ಪಿಎಂ)- ಸಂಸದರು ವಕೀಲರ ಬಗ್ಗೆ ಅವಹೇಳನ ಮಾಡಿ ದ್ದಾರೆ ಎಂಬುದು ಕಾಂಗ್ರೆಸ್ಸಿಗರ ಅಪಪ್ರಚಾರ. ವಕೀಲ ಬಂಧು ಗಳು ಇದಕ್ಕೆ ಕಿವಿಕೊಡಬಾರದು ಎಂದು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ನಾನು ವಕೀಲರ ಬಗ್ಗೆ ಅಪಾರ ಗೌರವ ಹೊಂದಿದ್ದೇನೆ. ಮೈಸೂರು ವಕೀಲರ ಸಂಘದ ಯಾವುದೇ ಪ್ರಸ್ತಾಪ ನನ್ನ ಮುಂದಿಟ್ಟಾಗಲೂ ಸ್ಪಂದಿಸಿದ್ದೇನೆ. `ತಾಲೂಕು ಕೋರ್ಟಿನಲ್ಲಿ ವಕೀಲಗಿರಿ ಮಾಡುತ್ತಿದ್ದ ಸಿದ್ದರಾಮಯ್ಯನವರು 13 ಬಜೆಟ್ ಮಂಡಿ ಸಿದ್ದರೂ ಅರ್ಥ ವ್ಯವಸ್ಥೆಯ ಕನಿಷ್ಠ ಜ್ಞಾನವೂ ಇಲ್ಲದಂತೆ ಮಾತ ನಾಡುತ್ತಿದ್ದಾರೆ’ ಎಂದು ಟೀಕಿಸಿದ್ದೇನೆ. ಇದರ ಹೊರತು ವಕೀಲ ವೃತ್ತಿಯ ಬಗ್ಗೆ ಹಗುರವಾಗಿ ಮಾತನಾಡಿಲ್ಲ. ಆದರೆ ಕಾಂಗ್ರೆಸ್ಸಿನ ಕೆಲವರು, ವಕೀಲರಿಗೆ ಅವಮಾನ ಮಾಡಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಸಲ್ಲದ ಆರೋಪ ಮಾಡುತ್ತಿರುತ್ತಾರೆ. ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯದಿಂದ 19 ಲಕ್ಷ ಕೋಟಿ ಹಣವನ್ನು ತೆರಿಗೆ ರೂಪದಲ್ಲಿ ಲೂಟಿ ಮಾಡಿದೆ ಎಂದು ತಮ್ಮ ಟ್ವಿಟರ್‍ನಲ್ಲಿ ಅವರು ಆರೋಪಿಸಿದ್ದರು. ಕೇಂದ್ರ ಸರ್ಕಾರ ಕೆಜಿಗೆ 32 ರೂ. ಕೊಟ್ಟು ಅಕ್ಕಿ ಖರೀದಿಸಿ, ರಾಜ್ಯ ಸರ್ಕಾರಕ್ಕೆ 3 ರೂ.ಗೆ ನೀಡುತ್ತದೆ. ಅದರಲ್ಲಿ 2 ರೂ. ಕಡಿಮೆ ಮಾಡಿ ನಾನು 1 ರೂ. ಕೆಜಿ ಅಕ್ಕಿ ಕೊಟ್ಟೆ ಎಂದು ಸಿದ್ದರಾಮಯ್ಯ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರು.

ಆದರೆ ಕೇಂದ್ರ ಸರ್ಕಾರ ಭರಿಸುವ 29 ರೂ. ಬಗ್ಗೆ ಎಂದೂ ಮಾತನಾಡಲಿಲ್ಲ. ಜಗತ್ತಿನಾದ್ಯಂತ ಇರುವ ರಾಜತಾಂತ್ರಿಕ ಕಚೇರಿಗಳು, 15 ಲಕ್ಷ ಸೈನಿಕರು, 50 ಲಕ್ಷಕ್ಕಿಂತ ಹೆಚ್ಚು ಕೇಂದ್ರ ಸರ್ಕಾರದ ಉದ್ಯೋಗಿಗಳು ಸೇರಿದಂತೆ ಇವರಿಗೆ ಸಂಬಳ ಎಲ್ಲಿಂದ ಕೊಡಬೇಕು? ಪ್ರತಿವರ್ಷ ಖರೀದಿಸುವ ಶಸ್ತ್ರಾಸ್ತ್ರಗಳು, ಕೋವಿಡ್ ವೇಳೆ ಕೊಟ್ಟ ಉಚಿತ ಲಸಿಕೆಗಳು, ಕಳೆದ 2 ವರ್ಷಗಳಿಂದ ಪ್ರಧಾನಮಂತ್ರಿ ಅನ್ನ ಕಲ್ಯಾಣ ಯೋಜನೆ ಯಡಿ ನೀಡುತ್ತಿರುವ ಉಚಿತ ಪಡಿತರ ಸೇರಿದಂತೆ ಇವುಗಳಿಗೆ ದುಡ್ಡು ಎಲ್ಲಿಂದ ಬರಬೇಕು? ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಒಂದಕ್ಕೇ ವರ್ಷಕ್ಕೆ 50ರಿಂದ 60 ಸಾವಿರ ಕೋಟಿ ರೂ. ಖರ್ಚಾಗುತ್ತದೆ. ಹೈವೆ-ರೈಲ್ವೆ, ಸ್ಮಾರ್ಟ್ ಸಿಟಿ, ಅಮೃತ್ ಯೋಜನೆಯಿಂದ 15ನೇ ಹಣಕಾಸು ಆಯೋಗದವರೆಗೂ 42 ಕೇಂದ್ರ ಪುರಸ್ಕøತ ಯೋಜನೆಗಳ ಮೂಲಕ ಲಕ್ಷಾಂತರ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ವಾಪಸ್ಸು ರಾಜ್ಯಗಳಿಗೆ ನೀಡುತ್ತದೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »