ಆಧುನಿಕ ತಂತ್ರಜ್ಞಾನ, ಸಂಶೋಧನೆ ಕೃಷಿ ಸ್ಥಿತಿ ಸುಧಾರಿಸಬೇಕು
News

ಆಧುನಿಕ ತಂತ್ರಜ್ಞಾನ, ಸಂಶೋಧನೆ ಕೃಷಿ ಸ್ಥಿತಿ ಸುಧಾರಿಸಬೇಕು

November 18, 2021

ಬೆಂಗಳೂರು, ನ.17(ಕೆಎಂಶಿ)-ಆಧು ನಿಕ ತಂತ್ರಜ್ಞಾನ, ನಾವೀನ್ಯತೆ, ಸಂಶೋಧನೆ ಮತ್ತು ಜ್ಞಾನದ ಬೆಳವಣಿಗೆಗಳು ದೇಶದ ಕೃಷಿ ಸ್ಥಿತಿಯ ಸುಧಾರಣೆಗೂ ಹೆಚ್ಚು ಒತ್ತು ಕೊಟ್ಟು ಮುನ್ನಡೆಯಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಇಂದಿಲ್ಲಿ ತಿಳಿಸಿದ್ದಾರೆ.
‘ಭವಿಷ್ಯವನ್ನು ಮುನ್ನಡೆಸು’ ಘೋಷ ವಾಕ್ಯದ 24ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗವನ್ನು ಉದ್ಘಾ ಟಿಸಿ ಮಾತನಾಡಿದ ಅವರು, ‘ಐ.ಟಿ. ಮತ್ತು ಬಿ.ಟಿ.’ ಯೊಂದಿಗೆ ಎಲ್ಲರೂ ಕರ್ತವ್ಯಪ್ರಜ್ಞೆಯನ್ನು ಮೈಗೂಡಿಸಿ ಕೊಂಡಾಗ ದೇಶವು ಶಕ್ತಿಶಾಲಿಯಾಗಿ ಹೊರಹೊಮ್ಮು ತ್ತದೆ. ಕೃಷಿಯು ದೇಶದ ಪ್ರಧಾನ ಕಸುಬಾಗಿರುವುದ ರಿಂದ ತಾಂತ್ರಿಕತೆಯು ಇದಕ್ಕೆ ಪೂರಕವಾಗಿರ ಬೇಕು’ ಎಂದರು. ಜಗತ್ತು ಈಗ ಜ್ಞಾನಾಧಾರಿತವಾಗಿ ರೂಪು ಗೊಳ್ಳುತ್ತಿದ್ದು, ಕೋವಿಡ್ ನಂತರ ಡಿಜಿಟಲೀಕರಣ ಗೊಳ್ಳುತ್ತಿದೆ. ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ಸರಕಾರದ ನೀತಿಗಳು ಎಷ್ಟೇ ಚೆನ್ನಾಗಿದ್ದರೂ ಅಂತಿಮವಾಗಿ ತಂತ್ರಜ್ಞಾನದ ಲಾಭಗಳನ್ನು ಸಮಾಜದ ಕಟ್ಟಕಡೆಯ ಮನುಷ್ಯನಿಗೆ ತಲುಪಿಸಬೇಕಾದ್ದು ಮುಖ್ಯ. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ಇದನ್ನು ಸಾಧಿಸಿ ಕೊಂಡು ಬಂದಿದೆ. ತಂತ್ರಜ್ಞಾನದ ಮೂಲಕ ಇಡೀ ವ್ಯವಸ್ಥೆಯನ್ನು ಪರಿವರ್ತಿ ಸಬೇಕೆಂಬುದೇ ಪ್ರಧಾನಿ ಮೋದಿ ಅವರ ಗುರಿಯೂ ಆಗಿದೆ ಎಂದರು. ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಖಾಸಗಿ ವಲಯದ ಪಾತ್ರ ಬಹುಮುಖ್ಯ. ಇದಕ್ಕೆ ಪೂರಕವಾಗಿ ಪ್ರಧಾನಿಯವರು ‘ಸುಧಾರಣೆ-ಸಾಧನೆ-ಪರಿವರ್ತನೆ’ ಎಂಬುದನ್ನೇ ಮಂತ್ರವಾಗಿಸಿಕೊಂಡು ನೀತಿಗಳನ್ನು ರೂಪಿಸುತ್ತಿದ್ದಾರೆ. ಜಗತ್ತಿನ ವಿಖ್ಯಾತ ಉದ್ದಿಮೆ ಗಳಲ್ಲೆಲ್ಲ ಭಾರತೀಯರು ನಾಯಕತ್ವ ವಹಿಸಿ ಕೊಂಡಿರುವುದು ಭಾರತೀಯರಾದ ನಮ್ಮ ಬೌದ್ಧಿಕ ಪ್ರಗತಿಯನ್ನು ದೃಢಪಡಿಸುತ್ತದೆ ಎಂದು ನಾಯ್ಡು ನುಡಿದರು.

ನಿರ್ದಿಷ್ಟವಾಗಿ ಬೆಂಗಳೂರು ಮತ್ತು ಒಟ್ಟಾರೆ ಭಾರತ ದೇಶವು ಅತ್ಯಂತ ಕ್ರಿಯಾ ಶೀಲವಾಗಿವೆ. ಇದಕ್ಕೆ ತಕ್ಕಂತೆ ಭಾರತದ ಪರಂಪರೆ ಮತ್ತು ಸಂಸ್ಕೃತಿಯ ಸಾರವಾದ ‘ಹಂಚಿಕೊಳ್ಳುವಿಕೆ ಮತ್ತು ಇನ್ನೊಬ್ಬರ ಬಗ್ಗೆ ಗಮನ ಹರಿಸುವಿಕೆ (ಕಾಳಜಿ)’ ಎರಡನ್ನೂ ನಾವು ತಂತ್ರಜ್ಞಾನದ ಧಾರೆಗಳ ಮೂಲಕ ಮುಂದುವರಿಸಿಕೊಂಡು ಹೋಗಬೇಕು. ತಾಂತ್ರಿಕತೆ ಹಾಗೂ ನಾವೀ ನ್ಯತೆಯ ಅಂತಿಮ ಗುರಿ ಸಮಾಜದಲ್ಲಿ ಸಂತೋಷವನ್ನುಂಟು ಮಾಡುವ ಉದ್ದೇಶ ಹೊಂದಿರಬೇಕು ಎಂದರು. ಸ್ವಾಗತ ಭಾಷಣ ಮಾಡಿದ ಐಟಿ, ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ‘ಕೋವಿಡ್ ಪಿಡುಗಿನ ನಂತರ ಅಭಿ ವೃದ್ಧಿಯ ಮಾನದಂಡಗಳು ಬದ ಲಾಗಿದ್ದು, ರಾಜ್ಯವು ಈ ಪರಿಸ್ಥಿತಿಯನ್ನು ತಂತ್ರಜ್ಞಾನದ ಬಲದಿಂದ ಸಕಾರಾತ್ಮಕ ವಾಗಿ ಬಳಸಿಕೊಳ್ಳುತ್ತಿದೆ’ ಎಂದರು.

ಉದ್ದಿಮೆಗಳ ಬೆಳವಣಿಗೆಗೆ ಸರಕಾರವು ಹಲವು ಅನುಕೂಲಕರ ನೀತಿಗಳನ್ನು ರೂಪಿ ಸಿದೆ. ಇದರಿಂದಾಗಿ ಐಟಿ, ಬಿಟಿ, ಯೂನಿ ಕಾರ್ನ್ ಉದ್ದಿಮೆಗಳಲ್ಲಿ ರಾಜ್ಯವು ಅಗ್ರಸ್ಥಾನ ದಲ್ಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದಾಗಿ ಮುಂಬರುವ ವರ್ಷಗಳಲ್ಲಿ ರಾಜ್ಯವು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿ ನಿಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನವೋದ್ಯಮಗಳ ಸ್ಥಾಪನೆಯಲ್ಲಿ ರಾಜ್ಯವು ಜಾಗತಿಕ ಮಟ್ಟದಲ್ಲಿ ಅಗ್ರಪಂಕ್ತಿಯಲ್ಲಿದೆ. ನೀತಿ ಆಯೋಗದ ಸಮೀಕ್ಷೆಯಲ್ಲಿ ರಾಜ್ಯವು ಸತತ 2ನೇ ವರ್ಷವೂ ಪ್ರಥಮ ಸ್ಥಾನ ವನ್ನು ತನ್ನದಾಗಿಸಿಕೊಂಡಿದೆ. ಐಟಿ ರಫ್ತಿನಲ್ಲಿ ಕರ್ನಾಟಕವು ದೇಶದ ಶೇ.40ರಷ್ಟು ಕೊಡುಗೆಯ ಸಿಂಹಪಾಲನ್ನು ಹೊಂದಿದೆ ಎಂಬುದರ ಬಗ್ಗೆ ಗಮನಸೆಳೆದರು.

Translate »