ರಾಜ್ಯದಲ್ಲಿ ಆಪರೇಷನ್ ಕಮಲಗೆ ಮೋದಿ, ಅಮಿತ್ ಶಾ ಮಾರ್ಗದರ್ಶನ
ಮೈಸೂರು

ರಾಜ್ಯದಲ್ಲಿ ಆಪರೇಷನ್ ಕಮಲಗೆ ಮೋದಿ, ಅಮಿತ್ ಶಾ ಮಾರ್ಗದರ್ಶನ

July 4, 2019

ಮೈಸೂರು, ಜು.3(ಎಂಟಿವೈ)- ಪ್ರಧಾನಿ ನರೇಂದ್ರ ಮೋದಿ ಅವರ ಕುಮ್ಮಕ್ಕು ಹಾಗೂ ಕೇಂದ್ರ ಸಚಿವ ಅಮಿತ್ ಶಾ ಮಾರ್ಗ ದರ್ಶನಲ್ಲಿಯೇ ರಾಜ್ಯದಲ್ಲಿ ಆಪರೇಷನ್ ಕಮಲ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೇಗಾದರೂ ಮಾಡಿ ಅಧಿಕಾರ ಹಿಡಿಯಲೇಬೇಕೆಂದು ಬಿಜೆಪಿ ನಾಯಕರು ಕಸರತ್ತು ಮಾಡುತ್ತಿದ್ದಾರೆ. ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ನಡೆಯುತ್ತಿದೆ. ಸಂವಿಧಾನಬಾಹಿರ ಕೃತ್ಯ ವಾದ ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸುವ ಪ್ರಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಮಾರ್ಗದರ್ಶನ ನೀಡುತ್ತಿದ್ದಾರೆ. ಇದರಿಂದಲೇ ರಾಜ್ಯದ ಬಿಜೆಪಿ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿ ದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಸಕ ಆನಂದ್‍ಸಿಂಗ್ ಒಬ್ಬರೇ ರಾಜೀನಾಮೆ ಕೊಟ್ಟಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನೇ ನೀಡಿಲ್ಲ. ಮಾಧ್ಯಮದಲ್ಲಿ ಬಂದಿರುವುದು ಸುಳ್ಳೆಂದು ಸ್ಪೀಕರ್ ಅವರೇ ಸ್ಪಷ್ಟಪಡಿಸಿದ್ದಾರೆ. ಶಾಸಕ ಆನಂದ್‍ಸಿಂಗ್ ಸಚಿವ ಸ್ಥಾನದ ವಿಚಾರಕ್ಕೆ ರಾಜೀನಾಮೆ ಕೊಟ್ಟಿಲ್ಲ. ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರವನ್ನು ವಿರೋ ಧಿಸಿ ರಾಜೀನಾಮೆ ನೀಡಿದ್ದಾರೆ. ಅವರು ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರೊಂದಿಗೆ ನಾನು ಮಾತನಾಡುತ್ತೇನೆ ಎಂದರು.

ಜಿಟಿಡಿಗೆ ಮಾಹಿತಿ ಇಲ್ಲವೇನೋ: ರಾಜ್ಯದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಆತನಿಗೆ (ಜಿಟಿಡಿ) ಆ ಬಗ್ಗೆ ಮಾಹಿತಿ ಇಲ್ಲದಿರ ಬಹುದು. ಆದರೆ, ಬಿಜೆಪಿಯವರು ಆಪರೇಷನ್ ಕಮಲ ಮಾಡ್ತಿದ್ದಾರೆ. ಸ್ವತಃ ಅಮಿತ್ ಷಾ, ನರೇಂದ್ರ ಮೋದಿ ಅವರೇ ಆಪರೇಷನ್ ಕಮಲ ಮಾಡ್ತಿದ್ದಾರೆ ಎಂದು ಮತ್ತೊಮ್ಮೆ ಗಂಭೀರವಾದ ಆರೋಪ ಮಾಡುವ ಮೂಲಕ ಜಿಟಿಡಿಗೆ ಟಾಂಗ್ ಕೊಟ್ಟರು.

ವರುಣಾ ಕ್ಷೇತ್ರದ ಮುಖಂಡರೊಂದಿಗೆ ಸಭೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದೂ ಸಹ ವರುಣಾ ಕ್ಷೇತ್ರದ ವಿವಿಧ ಗ್ರಾಮಗಳ ಮುಖಂಡರು ಹಾಗೂ ಕಾರ್ಯ ಕರ್ತರೊಂದಿಗೆ ಗುಪ್ತ ಸಭೆ ನಡೆಸಿದರು. ಲೋಕಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿಜೆಪಿ ಅಭ್ಯರ್ಥಿಗಿಂತ ಕಡಿಮೆ ಮತ ಚಲಾವಣೆಯಾಗಿರುವುದರಿಂದ ಕ್ಷೇತ್ರದ ಮುಖಂಡರ ಕಾರ್ಯ ವೈಖರಿ ಬಗ್ಗೆ ಅಸಮಾಧಾನಗೊಂಡಿದ್ದ ಸಿದ್ದರಾಮಯ್ಯ ಅವರು ಕಳೆದ ತಿಂಗಳು ಎರಡು ದಿನ ಕ್ಷೇತ್ರದ ಮುಖಂಡರು ಹಾಗೂ ಕಾರ್ಯ ಕರ್ತರೊಂದಿಗೆ ಗುಪ್ತ ಸಭೆ ನಡೆಸಿ ಪಕ್ಷ ಸಂಘಟನೆ ಕುರಿತಂತೆ ಚರ್ಚಿಸಿದ್ದರು.

ಬೆಂಗಳೂರಿನಿಂದ ಮೈಸೂರಿಗೆ ಇಂದು ಬೆಳಿಗ್ಗೆ ಆಗಮಿಸಿದ ಅವರು, ನೇರವಾಗಿ ಖಾಸಗಿ ಹೊಟೇಲ್‍ಗೆ ತೆರಳಿ ಗುಪ್ತ ಸಭೆ ನಡೆಸಿದರು. ಸಭೆಯಲ್ಲಿ ಆಯಾ ಗ್ರಾಮ ಹಾಗೂ ಬೂತ್‍ಗಳಲ್ಲಿ ಹಿನ್ನಡೆಯಾಗಲು ಕಾರಣವೇನು? ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಂಸದ ಆರ್.ಧ್ರುವನಾರಾಯಣ್ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಯನ್ನು ಅನುಷ್ಠಾನಗೊಳಿಸಿ ನಂ.1 ಸಂಸದ ಎಂಬ ಹೆಗ್ಗಳಿಕೆ ಪಡೆ ದಿದ್ದರೂ ಮತದಾರರು ಯಾಕೆ ಬೆಂಬಲ ನೀಡಲಿಲ್ಲ ಎಂದು ಸೋಲಿನ ಆತ್ಮಾವ ಲೋಕನ ನಡೆಸಿದರು. ಸಭೆಯಲ್ಲಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಪಾಲಿಕೆ ಮಾಜಿ ಸದಸ್ಯ ಎಂ.ಶಿವಣ್ಣ, ಮುಖಂಡ ಶಿವಮಲ್ಲು ಸೇರಿದಂತೆ ಇನ್ನಿತರರನ್ನು ಕಾಣಬಹುದು.

Translate »