ಭೋಪಾಲ್,ಸೆ.12-ಭಾರತದಲ್ಲಿ ದಿನಕಳೆದಂತೆ ಮಾರಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ, ಔಷಧಿ ಸಿಗುವವರೆಗೂ ಕೊರೊನಾ ವೈರಸ್ ಕುರಿತು ನಿರ್ಲಕ್ಷ್ಯತನ ಬೇಡ, ಹುಷಾರಾಗಿರೋಣ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಮಧ್ಯಪ್ರದೇಶದಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿಯ ಮನೆಗಳ ಗೃಹ ಪ್ರವೇಶ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತ ನಾಡಿದ ಪ್ರಧಾನಿ ಮೋದಿ, ಕೊರೊನಾ ವೈರಸ್ ಸೋಂಕಿಗೆ ಪರಿಣಾಮಕಾರಿಯಾಗಿ ಔಷಧಿ ಸಿಗುವವ ರೆಗೂ ಜನರು ತಮ್ಮ ಎಚ್ಚರಿಕೆಯಲ್ಲಿ ತಾವಿರಬೇಕು. ಕೋವಿಡ್ ಸೋಂಕು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ. ಔಷಧಿ ಸಿಗುವವರೆಗೂ ನಿರ್ಲಕ್ಷ್ಯತನ ಬೇಡ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸು ವಿಕೆಯನ್ನು ತಪ್ಪದೇ ಪಾಲಿಸಿ ಎಂದು ಹೇಳಿದ್ದಾರೆ.
ಇಲಿಗಳ ಮೇಲೆ ಲಸಿಕೆ ಪ್ರಯೋಗ ಯಶಸ್ವಿ: ಕೊರೊನಾ ನಿಗ್ರಹಕ್ಕಾಗಿ ದೇಶೀಯವಾಗಿ ಅಭಿವೃದ್ಧಿ ಪಡಿಸುತ್ತಿರುವ ಲಸಿಕೆಗಳ ಪಟ್ಟಿಗೆ ಇದೀಗ ಮತ್ತೊಂದು ಲಸಿಕೆ ಸೇರ್ಪಡೆಯಾಗಿದ್ದು, ಇಲಿಗಳ ಮೇಲಿನ ಈ ಲಸಿಕೆಯ ಪ್ರಯೋಗ ಸಂಪೂರ್ಣ ಯಶಸ್ವಿ ಯಾಗಿದೆ ಎಂದು ತಿಳಿದುಬಂದಿದೆ.
ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಇಮ್ಯು ನೊಲಾಜಿ (ಎನ್‍ಐಐ) ಅಭಿವೃದ್ಧಿಪಡಿಸುತ್ತಿರುವ ಈ ಲಸಿಕೆ ಆರಂಭಿಕ ಪ್ರಯೋಗಗಳು ಯಶಸ್ವಿ ಯಾಗಿದ್ದು, ಇಲಿಗಳ ಮೇಲಿನ ಪ್ರಯೋಗ ಸಂಪೂರ್ಣ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಎನ್‍ಐಐ ನಿರ್ದೇಶಕ ಅಮೂಲ್ಯ ಪಾಂಡಾ ಮಾಹಿತಿ ನೀಡಿದ್ದು, ಆರಂಭಿಕವಾಗಿ ಜುಲೈನಲ್ಲಿ ಇಲಿಗಳ ಮೇಲೆ ಈ ಲಸಿಕೆ ಪ್ರಯೋಗ ನಡೆಸ ಲಾಗಿತ್ತು. ಪ್ರಯೋಗದ ಬಳಿಕ ಉತ್ತಮ ಫಲಿತಾಂಶ ಬಂದಿದ್ದು, ಲಸಿಕೆ ಪಡೆದ ಇಲಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಜೈವಿಕ ತಂತ್ರಜ್ಞಾನ ವಿಭಾಗದ ಅಡಿಯಲ್ಲಿರುವ ಎನ್‍ಐಐ, ಕೊರೊನಾ ವೈರಸ್ ವಿರುದ್ಧ ಪೆÇ್ರಟೀನ್ ಆಧಾರಿತ ಲಸಿಕೆ ಅಭಿವೃದ್ಧಿಪಡಿಸುತ್ತಿದೆ.
ಇದು ಇಲಿಗಳಲ್ಲಿ ವೈರಸ್‍ಗಳನ್ನು ತಟಸ್ಥಗೊಳಿಸಿದೆ ಮತ್ತು ಪ್ರತೀಕಾಯಗಳನ್ನು ಉತ್ಪಾ ದಿಸುವಲ್ಲಿ ಸಮರ್ಥವಾಗಿದೆ ಎಂದು ತಜ್ಞರು ಭರವಸೆ ವ್ಯಕ್ತಪಡಿಸಿದ್ದಾರೆ. ಆರಂಭದಲ್ಲಿ ಕೆಲವು ಇಲಿಗಳ ಮೇಲೆ ಮಾತ್ರ ಈ ಪ್ರಯೋಗ ನಡೆದಿತ್ತು. ಆರಂಭಿಕ ಪ್ರಯೋಗ ಯಶಸ್ವಿ ಯಾದ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಇಲಿಗಳ ಸಮೂಹದ ಮೇಲೆ ಪ್ರಯೋಗ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಪ್ರಯೋಗ ಯಶಸ್ಸು ಕಂಡಲ್ಲಿ ಮಾನವರ ಮೇಲೆ ಪ್ರಯೋಗ ಮಾಡುವ ಕುರಿತು ಸಂಸ್ಥೆ ನಿರ್ಧರಿಸಿದೆ. ಇನ್ನು ಕೊರೊನಾ ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಇದು ಭಾರತದಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ಮೂರನೇ ಲಸಿಕೆಯಾಗಿದೆ. ಇದಕ್ಕೂ ಮೊದಲು ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಮತ್ತು ಝೈಡಸ್ ಕ್ಯಾಡಿಲಾ ಸಂಸ್ಥೆಗಳು ಲಸಿಕೆ ಉತ್ಪಾದನೆಯಲ್ಲಿ ತೊಡಗಿವೆ. ಸದ್ಯ ಈ ಎರಡೂ ಲಸಿಕೆಗಳನ್ನು ಮಾನವರ ಮೇಲೆ ಎರಡನೇ ಹಂತದ ಪ್ರಯೋಗ ನಡೆಸಲಾಗುತ್ತಿದೆ.