ಬೆಂಗಳೂರು ದಕ್ಷಿಣದಿಂದ ಮೋದಿ,  ವೈನಾಡ್‍ನಿಂದ ರಾಹುಲ್ ಗಾಂಧಿ?
ಮೈಸೂರು

ಬೆಂಗಳೂರು ದಕ್ಷಿಣದಿಂದ ಮೋದಿ, ವೈನಾಡ್‍ನಿಂದ ರಾಹುಲ್ ಗಾಂಧಿ?

March 25, 2019

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಉತ್ತರ ಭಾರತದ ಜೊತೆಗೆ ದಕ್ಷಿಣ ಭಾರತದಲ್ಲೂ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ರಾಜ ಕೀಯ ವಲಯದಲ್ಲಿ ಕೇಳಿಬರುತ್ತಿದೆ.

ವಾರಣಾಸಿಯಲ್ಲಿ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಕೇಂದ್ರ ಸಚಿವ ದಿವಂಗತ ಅನಂತ ಕುಮಾರ್ ಅವರು ಪ್ರತಿನಿಧಿಸಿದ್ದ ಬೆಂಗ ಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ. ಮೋದಿ ಅವರು ಈ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಬಿಜೆಪಿ ಕೇಂದ್ರ ನಾಯಕರು ರಾಜ್ಯ ನಾಯಕರಿಗೆ ಸುಳಿವು ನೀಡಿದ್ದು, ಪ್ರಧಾನಿ ಮೋದಿ ಸ್ಪರ್ಧೆ ಗಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತಯಾರಿ ಮಾಡಿಕೊಳ್ಳಿ ಎಂದು ಸೂಚಿಸಿ ದ್ದಾರೆ ಎನ್ನಲಾಗಿದೆ. ಆದರೆ ಮೋದಿ ಅವರು ಸ್ಪರ್ಧಿಸುವ ಬಗ್ಗೆ ಇನ್ನೂ ಖಚಿತ ಪಡಿಸಿಲ್ಲ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 1991ರಿಂದ ಅನಂತಕುಮಾರ್ ಅವರು ಸತತವಾಗಿ ಗೆಲುವು ಸಾಧಿಸುತ್ತಾ ಬಂದಿದ್ದು, ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಯಾಗಿದೆ. ಅವರ ನಿಧನದ ನಂತರ ಈ ಕ್ಷೇತ್ರದಲ್ಲಿ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದರು. ಈ ಸಂಬಂಧ ತೇಜಸ್ವಿನಿ
ಅವರ ಒಪ್ಪಿಗೆಯನ್ನೂ ಕೂಡ ಪಡೆದಿದ್ದರು. ಪಕ್ಷದ ರಾಜ್ಯ ಘಟಕವು ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿನಿ ಅವರ ಹೆಸರನ್ನು ಮಾತ್ರ ಶಿಫಾರಸು ಮಾಡಿದೆ.

ಈ ಕ್ಷೇತ್ರದಲ್ಲಿ ಮೋದಿ ಅವರು ಸ್ಪರ್ಧಿಸಬಹುದು ಎಂಬ ಕಾರಣಕ್ಕಾಗಿ ಬಿಜೆಪಿ ಈವರೆವಿಗೂ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಿಲ್ಲ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಬೆಂಗಳೂರು ದಕ್ಷಿಣದಲ್ಲೇ ಮೋದಿ ಅವರು ಸ್ಪರ್ಧಿಸಿದರೆ ಸಂತೋಷ. ಆದರೆ ಈವರೆವಿಗೂ ಹೈಕಮಾಂಡ್‍ನಿಂದ ನಮಗೆ ಖಚಿತ ಮಾಹಿತಿ ಬಂದಿಲ್ಲ. ಈ ಕ್ಷೇತ್ರದ ಅಭ್ಯರ್ಥಿಯನ್ನು ಈವರೆವಿಗೂ ಘೋಷಿಸಿಲ್ಲ. ಮೋದಿ ಅವರ ಸ್ಪರ್ಧೆ ಕುರಿತು ಖಚಿತ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. ಈ ನಡುವೆ ಬೆಂಗಳೂರು ದಕ್ಷಿಣದಲ್ಲಿ ಮೋದಿ ಅವರು ಸ್ಪರ್ಧಿಸಿದರೆ, ಅವರ ವಿರುದ್ಧ ಸ್ಪರ್ಧಿಸಲು ತಾವು ಸಿದ್ಧವಿರುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಮತ್ತೊಂದೆಡೆ ಅಮೇಠಿಯಲ್ಲಿ ಸ್ಪರ್ಧಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೇರಳದ ವೈನಾಡ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರನ್ನು ಕರ್ನಾಟಕದಿಂದ ಸ್ಪರ್ಧಿಸುವಂತೆ ಕೆಪಿಸಿಸಿ ಆಹ್ವಾನ ನೀಡಿದ್ದ ಬೆನ್ನಲ್ಲೇ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯು ಅಲ್ಲಿನ ವೈನಾಡ್ ಕ್ಷೇತ್ರದಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಯವರಿಗೆ ಮನವಿ ಸಲ್ಲಿಸಿತ್ತು.

ದಕ್ಷಿಣ ಭಾರತದ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲು ಉತ್ಸಾಹ ತೋರುತ್ತಿರುವ ರಾಹುಲ್ ಗಾಂಧಿ ಅವರು ವೈನಾಡ್‍ನಿಂದ ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇರಳದ 20 ಲೋಕಸಭಾ ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ 14 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಘೋಷಿಸಿದ್ದು, ವೈನಾಡು ಮತ್ತು ವಾಡಕಾರ ಕ್ಷೇತ್ರಗಳ ಅಭ್ಯರ್ಥಿಗಳನ್ನು ಇನ್ನೂ ಘೋಷಿಸಿಲ್ಲ. ರಾಹುಲ್ ಗಾಂಧಿ ಅವರಿಗಾಗಿಯೇ ವೈನಾಡು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದೇ ಮೀಸಲಿರಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ವೈನಾಡ್‍ನಲ್ಲಿ ರಾಹುಲ್ ಸ್ಪರ್ಧಿಸುವ ಬಗ್ಗೆ ಎಐಸಿಸಿ ಈವರೆವಿಗೂ ಅಧಿಕೃತವಾಗಿ ಪ್ರಕಟಿಸಿಲ್ಲ.
ಅಂತಿಮ ಹಂತದ ಮತದಾನ ಮುಕ್ತಾಯದ ಬಳಿಕವೇ

ಎಕ್ಸಿಟ್ ಪೆÇೀಲ್ ಪ್ರಸಾರ: ಚುನಾವಣಾ ಆಯೋಗ ಸೂಚನೆ
ನವದೆಹಲಿ: ಅಂತಿಮ ಹಂತದ ಮತದಾನ ಮುಕ್ತಾಯದ ಬಳಿಕವೇ ಚುನಾವಣೋತ್ತರ ಸಮೀಕ್ಷೆಯ ವರದಿ ಗಳನ್ನು ಪ್ರಸಾರ ಮಾಡಬಹುದು ಎಂದು ಚುನಾವಣಾ ಆಯೋಗ ಮಾಧ್ಯಮಗಳಿಗೆ ಸೂಚನೆ ನೀಡಿದೆ. ಮೇ 19ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಅಂದು ಸಂಜೆ ಮತದಾನ ಮುಕ್ತಾಯದ ಬಳಿಕವಷ್ಟೇ ಚುನಾವಣೋತ್ತರ ಸಮೀಕ್ಷೆಯ ವರದಿಗಳನ್ನು ಪ್ರಸಾರ ಮಾಡಬಹುದು ಎಂದು ಆಯೋಗ ಹೇಳಿದೆ. ಒಂದು ವೇಳೆ ಆಯೋಗದ ನಿರ್ದೇಶನದ ಹೊರತಾಗಿಯೂ ಪ್ರಸಾರ ಮಾಡಿದ್ದೇ ಆದರೆ, ಆರ್‍ಪಿ ಆಕ್ಟ್ 1951ರ ಸೆಕ್ಷನ್ 126ಎ ಅಡಿಯಲ್ಲಿ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದೆ.

ಅಂತೆಯೇ ಆಯೋಗ ಕೆಲ ಮಾರ್ಗದರ್ಶಕ ಸೂತ್ರಗಳನ್ನು ಬಿಡುಗಡೆ ಮಾಡಿದ್ದು, ಪತ್ರಿಕೆಗಳು, ವಿದ್ಯುನ್ಮಾನ ಮಾಧ್ಯಮ, ಅಂತರ್ಜಾಲ, ರೇಡಿಯೋ, ವೆಬ್‍ಸೈಟ್‍ಗಳು ಸೇರಿದಂತೆ ಎಲ್ಲಿಯೂ ಕೂಡ ಅಂತಿಮ ಹಂತದ ಮತದಾನ ಮುಕ್ತಾಯ ಗೊಳ್ಳುವವರೆಗೂ ಚುನಾವಣೋತ್ತರ ಸಮೀಕ್ಷೆಗಳ ವರದಿಯನ್ನು ಪ್ರಸಾರ ಅಥವಾ ಪ್ರಕಟಿಸಬಾರದು ಎಂದು ಹೇಳಿದೆ. ಅಂತೆಯೇ ಸಾಮಾಜಿಕ ಜಾಲತಾಣಗಳಲ್ಲಿನ ಸುದ್ದಿಗಳು, ಬರಹಗಳು, ಅಭಿಪ್ರಾಯ, ಅಜೆಂಡಾಗಳನ್ನು ಬಿಂಬಿಸಬಾರದು. ಅಂತೆಯೇ ಯಾವುದೇ ವ್ಯಕ್ತಿ, ಪಕ್ಷ ಅಥವಾ ಸಂಘಟನೆಯ ಪರ-ವಿರೋಧ ಅಭಿಪ್ರಾಯ ಗಳನ್ನು, ಬರಹಗಳನ್ನು ಪ್ರಸಾರ ಮಾಡಬಾರದು ಎಂದು ಆಯೋಗ ಹೇಳಿದೆ. ಅಂತೆಯೇ ಚುನಾವಣಾ ಆಯೋಗ ವೀಕ್ಷಣಾ ತಂಡ ವನ್ನು ನೇಮಕ ಮಾಡಿದ್ದು, ಅಧಿಕಾರಿಗಳು ವಾಹಿನಿಗಳು, ಸಾಮಾ ಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ಪೈಕಿ ಯಾವುದೇ ರೀತಿಯ ನಿಯಮ ಉಲ್ಲಂಘನೆ ಕಂಡು ಬಂದರೆ ಅಂತಹ ವಾಹಿನಿ, ಪತ್ರಿಕೆ, ವೆಬ್‍ಸೈಟ್ ಸಾಮಾಜಿಕ ಜಾಲತಾಣಗಳ ವಿರುದ್ಧ ಎನ್‍ಬಿಎಸ್‍ಎ (News Broadcasting Standards Authority) ದೂರು ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ. ಇದೇ ಏಪ್ರಿಲ್ 11ರಿಂದ ಮೇ 19ರವರೆಗೂ ಒಟ್ಟು 7 ಹಂತಗಳಲ್ಲಿ ಲೋಕಸಭಾ ಚುನಾವಣೆಯ ಮತದಾನ ನಡೆಯ ಲಿದೆ. ಮೇ 23 ರಂದು ಮತ ಎಣಿಕೆ ನಡೆಯಲಿದೆ.

Translate »