ದೇಶದ ಮತ್ತಷ್ಟು ಅಭಿವೃದ್ಧಿಗೆ ಮೋದಿ ಅನಿವಾರ್ಯ
ಮೈಸೂರು

ದೇಶದ ಮತ್ತಷ್ಟು ಅಭಿವೃದ್ಧಿಗೆ ಮೋದಿ ಅನಿವಾರ್ಯ

April 4, 2019

ಮೈಸೂರು: ಸರ್ಕಾ ರದ ವಿವಿಧ ಸೌಲಭ್ಯವನ್ನು ಬಡವರಿಗೆ ನೇರವಾಗಿ ತಲುಪಿಸುವುದರೊಂದಿಗೆ ಹಲವು ಸುಧಾರಣೆ ತಂದಿರುವ ಕೀರ್ತಿ ಪ್ರಧಾನಿ ನರೇಂದ್ರ ಮೋದಿಗೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ಅವರಿಗೆ ದೇಶದಾ ದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕರ್ಣಿಕ್ ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನ ರಾಜೇಂದ್ರ ಕಲಾಮಂದಿರದ ಮಿನಿ ಸಭಾಂಗಣದಲ್ಲಿ ಬುಧವಾರ ಗಾಣಿಗ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಭಾರತ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸುಮಾರು 70 ವರ್ಷ ಬೇರೆ ಬೇರೆ ಪಕ್ಷಗಳು ಆಡಳಿತ ನಡೆಸಿವೆ. ಈ ಅವಧಿಯಲ್ಲಿ ಮಾಡದ ಅಭಿವೃದ್ಧಿ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಾಡಿದೆ. ಸೇನೆಗೆ ವಿವಿಧ ಶಸ್ತ್ರಾಸ್ತ್ರ ಖರೀದಿಸುವುದು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸುಧಾರಣೆ ತಂದಿದೆ. ಸರ್ಕಾರದ ವಿವಿಧ ಸೌಲಭ್ಯ ವನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಮಾಡಿರುವ ಹೆಮ್ಮೆ ಕೇಂದ್ರ ಸರ್ಕಾರದ್ದಾಗಿದೆ ಎಂದರು.

ಈ ಹಿಂದೆ ಇದ್ದ ಸರ್ಕಾರಗಳ ಅವಧಿ ಯಲ್ಲಿ ಗಡಿ ಭಾಗದಲ್ಲಿ ಭಯೋತ್ಪಾದಕರು ಗುಂಡಿನ ಮಳೆಗರೆದರೆ ಪ್ರತ್ಯುತ್ತರ ನೀಡು ವುದಕ್ಕೆ ವಿವಿಧ ಹಂತದ ಅಧಿಕಾರಿಗಳ ಗಮನಕ್ಕೆ ತಂದು ನಂತರ ಸರ್ಕಾರ ಅನು ಮತಿ ಪಡೆಯುವ ಪದ್ಧತಿಯಿತ್ತು. ಆದರೆ ಇದೀಗ ಭಯೋತ್ಪಾದಕರು ಒಂದು ಗುಂಡು ಹೊಡೆದರೆ, ಅದಕ್ಕೆ ಪ್ರತಿಯಾಗಿ 10 ಗುಂಡು ಹಾರಿಸಿ ನಂತರ ನಮಗೆ ವರದಿ ಸಲ್ಲಿಸಿ ಎಂದು ಸೇನೆಗೆ ಸೂಚನೆ ನೀಡಿದ್ದಾರೆ. ಇದು ಸೈನ್ಯದ ಆತ್ಮಬಲವನ್ನು ಹೆಚ್ಚಿಸಿದೆ. `ಏಕ್ ಭಾರತ್, ಶ್ರೇಷ್ಠ ಭಾರತ್’ ಯೋಜನೆಯಡಿ ದೇಶದ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡಬೇಕಾದರೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಇದಕ್ಕಾಗಿ ಎಲ್ಲಾ ಸಮುದಾಯ ಬಿಜೆಪಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಮಾಜಿ ಶಾಸಕ ಇ.ಮಾರುತಿರಾವ್ ಪವಾರ್ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷ ಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಸಾಮರಸ್ಯ ಮೂಡಿಲ್ಲ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ದಲ್ಲಿ ಎರಡೂ ಪಕ್ಷಗಳ ನಡುವಿನ ಬಿಕ್ಕಟ್ಟು ಹೆಚ್ಚಾಗಿರುವುದು ಬಿಜೆಪಿಗೆ ವರ ದಾನವಾಗಿ ಪರಿಣಮಿಸಿದೆ. ಹುಣಸೂರು, ಪಿರಿಯಾಪಟ್ಟಣ ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರು ಬಹಿರಂಗವಾಗಿಯೇ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ ಮೈತ್ರಿ ಸಂಬಂಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷಾ ತೀತವಾಗಿ ಮತದಾರರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿ ಸಲು ನಿರ್ಧರಿಸಿ, ಬಿಜೆಪಿಗೆ ಮತ ಹಾಕಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು.

ನಾವು ಹಲವು ಚುನಾವಣೆಯನ್ನು ಎದುರಿಸಿದ್ದೇವೆ. ಸೋಲು-ಗೆಲುವಿನ ರುಚಿ ಅನುಭವಿಸಿದ್ದೇವೆ. ಆದರೆ 2019ರ ಲೋಕಸಭಾ ಚುನಾವಣೆ ನಮ್ಮ ಪಾಲಿಗೆ ಮಹತ್ವದ ಚುನಾವಣೆಯಾಗಿದೆ. ಈ ಹಿಂದೆ ಬಿಜೆಪಿಯಿಂದ ಅಂತರ ಕಾಯ್ದು ಕೊಂಡಿದ್ದ ವಿವಿಧ ಸಮುದಾಯಗಳು ಈ ಬಾರಿ ನರೇಂದ್ರ ಮೋದಿ ಅವರ ಮುಖ ನೋಡಿ ಬಿಜೆಪಿ ಬೆಂಬಲಿಸುತ್ತಿರು ವುದು ಒಳ್ಳೆ ಬೆಳವಣಿಗೆ ಎಂದರು.

ಸಭೆಯಲ್ಲಿ ಬಿಜೆಪಿ ಹಿರಿಯ ಮುಖಂಡ ವಾಮನಾಚಾರ್ಯ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಂ. ಮಲ್ಲಪ್ಪಗೌಡ, ಗಾಣಿಗ ಸಮುದಾಯದ ಪಾಪಣ್ಣ, ಚೆನ್ನಕೇಶವ, ಎ.ಬಾಲಕೃಷ್ಣ, ಪಾರ್ಥಸಾರಥಿ, ಉಮಾಪತಿ, ಭಾಗ್ಯಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Translate »