ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರು
News

ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರು

October 13, 2022

ಬೆಂಗಳೂರು, ಅ.12- ರಾಹುಲ್ ಗಾಂಧಿ ಅವರನ್ನು ಬಚ್ಚಾ ಎಂದು ಹೇಳುವ ಯಡಿಯೂ ರಪ್ಪ ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ. ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದು ರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು. ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ಅವರನ್ನು ಸರಣಿ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿರುವ ಸಿದ್ದ ರಾಮಯ್ಯ, ಎರಡು ಸವಾಲುಗಳನ್ನು ಹಾಕಿದ್ದಾರೆ.
ಬಿಎಸ್‍ವೈ ಬೆನ್ನಿಗೆ ಇರಿದವರು ಯಾರು ಎಂಬುದು ಜನರಿಗೆ ಗೊತ್ತು…: ಮುಖ್ಯಮಂತ್ರಿ ಸ್ಥಾನವನ್ನು ಕಿತ್ತು ಕೊಂಡಾಗ ಬಹಿರಂಗವಾಗಿಯೇ ಯಡಿಯೂರಪ್ಪ ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿ ದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನು ವುದೂ ಜನರಿಗೆ ಗೊತ್ತು. ಯಡಿಯೂ ರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು ಎಂದು ಹೇಳಿದರು. ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಬೊಮ್ಮಾಯಿ ಅವರೊಬ್ಬ ‘ಎರಡೂವರೆ ಸಾವಿರ ಕೋಟಿ ರೂಪಾಯಿಯ #Pಚಿಥಿಅಒ’ ಆಗಿದ್ದು, ಹೈಕಮಾಂಡ್‍ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ಎಂದು ವಾಗ್ದಾಳಿ ಮಾಡಿದರು. ಪಾಪ, ಬಿಎಸ್‍ವೈಯವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು ಎಂದು ಸಲಹೆ ಮಾಡಿದರು. ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಬಿಜೆಪಿಯ ಡಿ.ಎನ್.ಎಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Translate »