ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮೋದಿ ಸೇರಿ ಹಲವು ಗಣ್ಯರ ಸಂತಾಪ
News

ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮೋದಿ ಸೇರಿ ಹಲವು ಗಣ್ಯರ ಸಂತಾಪ

September 14, 2021

ನವದೆಹಲಿ: ಮಂಗಳೂರಿನ ಆಸ್ಪತ್ರೆ ಯಲ್ಲಿ ಸೋಮವಾರ ನಿಧನರಾದ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವ ರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿ ದಂತೆ ಹಲವು ನಾಯಕರು ಅತೀವ ಸಂತಾಪ ಸೂಚಿಸಿದ್ದಾರೆ.

80 ವರ್ಷ ವಯಸ್ಸಿನ ಆಸ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭಾ ಸಂಸದ ಆಸ್ಕರ್ ಫರ್ನಾಂಡಿಸ್ ಅವರ ನಿಧನ ದಿಂದ ದುಃಖವಾಗಿದೆ. ಈ ದುಃಖದ ಸಮಯದಲ್ಲಿ, ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆಸ್ಕರ್ ಫರ್ನಾಂಡಿಸ್ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಇದು ನನಗೆ ವೈಯಕ್ತಿಕ ನಷ್ಟ. ಅವರು ಕಾಂಗ್ರೆಸ್ ಪಕ್ಷದಲ್ಲಿ ನಮ್ಮಂತಹ ಅನೇಕರಿಗೆ ಮಾರ್ಗದರ್ಶಕರಾಗಿದ್ದರು ಎಂದು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಫರ್ನಾಂಡಿಸ್ ಪಕ್ಷದ ಅತ್ಯಂತ ನಿಷ್ಠಾ ವಂತ ಸೈನಿಕರಾಗಿದ್ದರು ಎಂದಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷದ ಅತ್ಯುತ್ತಮ, ನಿಷ್ಠಾವಂತ ಸೈನಿಕರಲ್ಲಿ ಫರ್ನಾಂಡಿಸ್ ಒಬ್ಬರಾಗಿದ್ದರು. ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಮುಕ್ತಾರ್ ಅಬ್ಬಾಸ್ ನಖ್ವಿ ಕೂಡ ಕಾಂಗ್ರೆಸ್ ದಿಗ್ಗಜನ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ನಿಧನ ದಿಂದ ಬೇಸರವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ನಖ್ವಿ ತಮ್ಮ ಟ್ವೀಟ್‍ನಲ್ಲಿ, ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಮತ್ತು ಸರಳತೆಯ ಸಂಕೇತವಾಗಿರುವ ಆಸ್ಕರ್ ಫರ್ನಾಂಡಿಸ್ ಅವರ ನಿಧನದಿಂದ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಕ್ಷೇತ್ರಗಳಿಗೆ ತುಂಬ ಲಾರದ ನಷ್ಟವಾಗಿದೆ ಎಂದಿದ್ದಾರೆ.

ಭಾರತದ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ ವಾದಿ) ಹಿರಿಯ ನಾಯಕ ಸೀತಾರಾಂ ಯೆಚೂರಿ ಕೂಡ ಆಸ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಆಸ್ಕರ್ ಫರ್ನಾಂ ಡಿಸ್ ಅವರ ನಿಧನದ ಸುದ್ದಿ ಕೇಳಿ ಆಘಾತ ವಾಗಿದೆ. ನಾವು ಒಂದು ದಶಕಕ್ಕೂ ಹೆಚ್ಚು ಕಾಲ ರಾಜ್ಯಸಭೆಯಲ್ಲಿ ಸಹೋದ್ಯೋಗಿ ಗಳಾಗಿದ್ದೆವು, ಸಂತಾಪಗಳು” ಎಂದಿದ್ದಾರೆ.

Translate »