ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಶ್ರಮಿಸಿ
ಚಾಮರಾಜನಗರ

ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಶ್ರಮಿಸಿ

April 8, 2019

ಕಾರ್ಯಕರ್ತರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀರಾಮುಲು ಮನವಿ
ಗುಂಡ್ಲುಪೇಟೆ: ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀರಾಮುಲು ಮನವಿ ಮಾಡಿದರು.

ತಾಲೂಕಿನ ಬೇಗೂರು ಶಕ್ತಿ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಇದೇ ತಿಂಗಳ 9 ರಂದು ಮೈಸೂರಿಗೆ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಮೋದಿ ಪ್ರಧಾನಿ ಯಾದ ನಂತರ ದೇಶವು ಸಾಲಮುಕ್ತ ವಾಗುತ್ತಿದ್ದು, ವಿಶ್ವದಲ್ಲಿಯೇ ಮುನ್ನಡೆ ಸಾಧಿಸುತ್ತಿರುವುದು ದೇಶದ ಜನತೆಯ ಹೆಮ್ಮೆಗೆ ಕಾರಣವಾಗಿದೆ. ಭಯೋತ್ಪಾದಕರ ವಿರುದ್ಧ ಉಗ್ರ ಕ್ರಮ ಕೈಗೊಳ್ಳುತ್ತಿರುವು ದರಿಂದ ದೇಶದಲ್ಲಿ ಶಾಂತಿ ನೆಲೆಸಲು ಸಹಾಯಕವಾಗಲಿದೆ ಎಂದರು.

ಪರಿವಾರ ಮತ್ತು ತಳವಾರ ವರ್ಗವನ್ನು ಎಸ್‍ಟಿಗೆ ಸೇರ್ಪಡೆಗೊಳಿಸುವಲ್ಲಿ ಮೋದಿ ಶ್ರಮಿಸಿದ್ದಾರೆ. ಎಲ್ಲಾ ವರ್ಗಕ್ಕೂ ಅನುಕೂಲ ಮಾಡಿಕೊಟ್ಟಿರುವ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಇದಕ್ಕೆ ನಿಮ್ಮೆಲ್ಲರ ಬೆಂಬಲಬೇಕು. ಇನ್ನೇನು ಚುನಾ ವಣೆಗೆ ಕೆಲವೇ ದಿನಗಳು ಉಳಿದಿದ್ದು, ಬೂತ್ ಮಟ್ಟದಲ್ಲಿ ಗೆಲುವು ಸಾಧಿಸಿದರೆ ಮಾತ್ರ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಸಾಧ್ಯ. ಇದನ್ನು ಅರ್ಥ ಮಾಡಿಕೊಂಡು ಕಾರ್ಯಕರ್ತರು ಮತ್ತು ಮುಖಂಡರು ಶ್ರಮಿಸುವಂತೆ ಕಿವಿಮಾತು ಹೇಳಿದರು.

ನೋಟು ಅಮಾನ್ಯೀಕರಣ ನಂತರ ಕಾಳ ಧನಿಕರು ಕಂಗಾಲಾಗಿದ್ದು ಅಪ ಪ್ರಚಾರ ನಡೆಸುತ್ತಿದ್ದಾರೆ. ಜಿಎಸ್‍ಟಿ ಜಾರಿ ಯಿಂದ ತೆರಿಗೆ ವಂಚನೆ ಇಳಿಮುಖವಾ ಗಿದ್ದು, ದೇಶದ ಬೊಕ್ಕಸಕ್ಕೆ ಹೆಚ್ಚಿನ ಹಣ ಸಂಗ್ರಹವಾಗುತ್ತಿದೆ. ಇದರಿಂದ ಬಡ ಜನತೆಗೆ ಅನುಕೂಲವಾಗುವ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿ ಕಾಂಗ್ರೆಸ್ ಅವಧಿಯಲ್ಲಿ ಮಾಡಿದ್ದ ಸಾಲ ತೀರಿಸಿ ಸ್ವಾವ ಲಂಬನೆ ಸಾಧಿಸಲು ಸಾಧ್ಯವಾಗಿದೆ. ಆದ್ದರಿಂದ ಕಾರ್ಯಕರ್ತರು ಮತದಾರರ ಮನೆ ಮನೆ ಗಳಿಗೆ ತೆರಳಿ ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಮನವರಿಕೆ ಮಾಡಿ ಹೆಚ್ಚಿನ ಮತಗಳು ದೊರಕುವಂತೆ ಶ್ರಮಿಸಬೇಕು ಎಂದರು.

ಶಾಸಕ ಸಿ.ಎಸ್.ನಿರಂಜನಕುಮಾರ್ ಮಾತ ನಾಡಿ, ಚುನಾವಣೆಗೆ ಕೆಲವೇ ಕೆಲವು ದಿನ ಗಳು ಮಾತ್ರ ಉಳಿದಿದ್ದು, ಕಾರ್ಯಕರ್ತರು ಮತ್ತು ಮುಖಂಡರು ಎಚ್ಚೆತ್ತುಕೊಂಡು ಬೂತ್ ಮಟ್ಟದಲ್ಲಿ ಗೆಲುವು ಸಾಧಿಸಿದರೇ ಮಾತ್ರ ನಮ್ಮ ಗುರಿ ಸಾಧಿಸಲು ಸಾಧ್ಯವಾಗುತ್ತದೆ. ಈ ಬಾರಿ ಅತ್ಯಂತ ಹೆಚ್ಚಿನ ಮತಗಳನ್ನು ಗಳಿಸುವುದರೊಂದಿಗೆ ಬಿಜೆಪಿ ಜಯಭೇರಿ ಬಾರಿಸಬೇಕು ಎಂದರು.

ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್ ಮಾತನಾಡಿ, ನರೇಂದ್ರಮೋದಿ ದೇಶಕ್ಕೆ ಸುಭದ್ರ ಸರ್ಕಾರ ನೀಡಿ ಎಲ್ಲೆಡೆ ಹಾಸುಹೊಕ್ಕಿದ್ದ ಭ್ರಷ್ಟಾಚಾರ ನಿರ್ಮೂ ಲನೆ ಮಾಡಿದ್ದಾರೆ. ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಜನತೆ ಬಯಸಿದ್ದು ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಇದನ್ನು ಸಾಧಿಸಬೇಕು ಎಂದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಪೆÇ್ರ.ಕೆ.ಆರ್. ಮಲ್ಲಿಕಾರ್ಜುನಪ್ಪ, ಮಂಡಲಾಧ್ಯಕ್ಷ ಎನ್.ಮಲ್ಲೇಶ್, ಯುವಮೊರ್ಚಾ ಜಿಲ್ಲಾಧ್ಯಕ್ಷ ಪ್ರಣಯ್, ಮುಖಂಡ ನೂರೊಂದುಶೆಟ್ಟಿ, ಮುಖಂಡ ಲೋಕೇಶ್, ಲೋಕೇಶ್, ಬಿ.ಪಿ.ರಾಜಶೇಖರಪ್ಪ, ಸೋಮಶೇಖರ್, ರವಿ, ದೇವಯ್ಯ ಸೇರಿದಂತೆ ವಿವಿಧ ಘಟಕ ಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು.

Translate »