ಬೆಂಗಳೂರಲ್ಲಿ ಇಂದು ಮೋದಿಹವಾ
News

ಬೆಂಗಳೂರಲ್ಲಿ ಇಂದು ಮೋದಿಹವಾ

November 11, 2022

ಬೆಂಗಳೂರು, ನ.10(ಕೆಎಂಶಿ)- ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ, ಮೈಸೂರು-ಚೆನ್ನೈ ನಡುವೆ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರುವುದು ಸೇರಿದಂತೆ ರಾಜ್ಯ ಹಾಗೂ ಕೇಂದ್ರದ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ನಾಳೆ(ನ.11) ಒಂದು ದಿನದ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ನಾಡಪ್ರಭುಗಳ ಹೆಸರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ 108ಅಡಿ ಎತ್ತರದ ಪ್ರಗತಿ ಪ್ರತಿಮೆಯನ್ನು ಅಭಿವೃದ್ಧಿಗೆ ಪ್ರೇರಣೆಯಾಗುವ ದೃಷ್ಟಿಯಿಂದ ನಿರ್ಮಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ಅವರು ಇಂದು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭಾ ವೇದಿಕೆ ಕಾರ್ಯ ಕ್ರಮದ ಸಿದ್ಧತೆ ಮತ್ತು ವ್ಯವಸ್ಥೆಗಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು. ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ನಿರ್ಮಿಸಿದವರು ರಾಮ್‍ಸುತಾರಾ. ಇಡೀ ಭಾರತದಲ್ಲಿ ಅತ್ಯಂತ ಶ್ರೇಷ್ಠ ಶಿಲ್ಪಿ. ಅಹಮದಾಬಾದ್ ನಲ್ಲಿರುವ ವಲ್ಲಭಭಾಯಿ ಪಟೇಲ್ ಅವರ ಐಕ್ಯತಾ ಮೂರ್ತಿ ಯನ್ನೂ ಹಾಗೂ ಅಂಬೇಡ್ಕರ್ ಅವರ ಅತೀ ಎತ್ತರದ ಮೂರ್ತಿ ಯನ್ನು ನಿರ್ಮಿಸಿದ ಖ್ಯಾತಿ ಅವರದ್ದು. ನಾಳೆ ಪ್ರಧಾನಿಮಂತಿ ್ರಗಳು ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಅವರ ಕೈಚಳಕ ದಿಂದ ಇಷ್ಟು ಬೃಹತ್ ಮೂರ್ತಿ ಮೈದಳೆದಿದೆ. ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು. ಪ್ರಧಾನ ಮಂತ್ರಿಗಳು ಬೆಳಗ್ಗೆ 9 ಗಂಟೆಗೆ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಶಾಸಕರ ಭವನದ ಆವರಣಕ್ಕೆ ಆಗಮಿಸಿ ಕನಕದಾಸರ ಪ್ರತಿಮೆಗೆ ಪುಷ್ಪ ನಮನ ಮಾಡಲಿದ್ದಾರೆ. ಕನಕ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಯವರು ಆಗಮಿಸಿರುವುದು ಯೋಗಾಯೋಗ. ಒಬ್ಬ ಹಿಂದುಳಿದ ವರ್ಗಕ್ಕೆ ಸೇರಿದ ಪ್ರಧಾನಮಂತ್ರಿಗಳು ಸಮಸ್ತ ಮಾನವಕುಲಕ್ಕೆ ದಾರಿದೀಪವಾಗಿರುವ ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದು ನಮ್ಮೆಲ್ಲರಿಗೂ ಸಂತೋಷ ತಂದಿದೆ. ಪಕ್ಕದಲ್ಲಿಯೇ ಇರುವ ವಾಲ್ಮೀಕಿ ಪ್ರತಿಮೆಗೂ ಪುಷ್ಪಾರ್ಚನೆ ಮಾಡಲಿದ್ದಾರೆ ಎಂದರು. ನಂತರ ರೈಲ್ವೇ ನಿಲ್ದಾಣದಲ್ಲಿ ವಂದೇ ಭಾರತ್-ಹೈಸ್ಪೀಡ್ ರೈಲಿನ ಉದ್ಘಾಟನೆ ನೆರವೇರಿಸಲಿದ್ದಾರೆ. ಇನ್ನು ಮುಂದೆ ಬೆಂಗಳೂರು-ಮೈಸೂರು ಪ್ರಯಾಣದ ಅವಧಿ ಅತ್ಯಂತ ಕಡಿಮೆ ಆಗಲಿದೆ. ಇದಕ್ಕಾಗಿ ಪ್ರಯಾಣಿಕರ ಬಹಳ ದಿನಗಳ ಬೇಡಿಕೆ ಇತ್ತು. ಅದನ್ನು ಪ್ರಧಾನಿಗಳು ವಂದೇ ಭಾರತ್ ಯೋಜನೆಯಲ್ಲಿ ಸೇರಿಸಿದ್ದು, ಭಾರತದಲ್ಲಿ ಐದನೇ ರೈಲು ಹಾಗೂ ದಕ್ಷಿಣ ಭಾರತದಲ್ಲಿ ಮೊದಲ ಹೈಸ್ಪೀಡ್ ರೈಲನ್ನು ಉದ್ಘಾಟನೆ ಮಾಡುತ್ತಿರುವುದು ಆ ಭಾಗದ ಪ್ರಯಾಣಿಕರಿಗೆ ಹಾಗೂ ಆರ್ಥಿಕ ಬೆಳವಣಿಗೆಗೂ ಕೂಡ ಅನುಕೂಲವಾಗಲಿದೆ ಎಂದರು. ನಂತರ ವಿಮಾನ ನಿಲ್ದಾಣಕ್ಕೆ ಆಗಮಿಸಿ 2ನೇ ಟರ್ಮಿನಲ್ ಉದ್ಘಾಟಿಸಲಿ ದ್ದಾರೆ. ಟರ್ಮಿನಲ್-2 ಅಂತರರಾಷ್ಟ್ರೀಯ ಮತ್ತು ದೇಶೀಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಸುಮಾರು 25 ಲಕ್ಷ ಪ್ರಯಾಣಿಕರ ಸಾಮಥ್ರ್ಯವನ್ನು ಈ ಟರ್ಮಿನಲ್ ಹೊಂದಿದೆ. ಈಗಿರುವುದು 35 ಲಕ್ಷ ಸಾಮಥ್ರ್ಯ ವುಳ್ಳದ್ದು, ಇವೆರಡೂ ಸೇರಿದರೆ ದೇಶದ 2ನೇ ಅತೀ ದೊಡ್ಡ ಮತ್ತು ಅತೀ ಹೆಚ್ಚು ಫುಟ್‍ಪ್ರಿಂಟ್ ವಿಮಾನ ನಿಲ್ದಾಣವಾಗಲಿದೆ. ದೆಹಲಿಯ ನಂತರ ಅತೀ ದೊಡ್ಡ ವಿಮಾನ ನಿಲ್ದಾಣವಾಗಲಿದೆ. ಅದರ ಉದ್ಘಾಟನೆಯ ನಂತರ ಪ್ರಗತಿ ಪ್ರತಿಮೆ ಅನಾವರಣ ಮಾಡಿ ಸಾರ್ವಜನಿಕ ಸಭೆಗೆ ತೆರಳುತ್ತಾರೆ. ಅಲ್ಲಿ ಭಾಷಣ ಮುಗಿಸಿ ಮುಂದಿನ ಪ್ರಯಾಣ ಮಾಡಲಿದ್ದಾರೆ ಎಂದು ವಿವರಿಸಿದರು. ಕಾಂಗ್ರೆಸ್ ಪ್ರಧಾನಿಗಳ ಆಗಮನದ ಹಿನ್ನೆಲೆಯಲ್ಲಿ ಗುಂಡಿಗಳನ್ನು ಮುಚ್ಚುತ್ತಿರುವ ಬಗ್ಗೆ ಟೀಕೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ನಿರಂತರವಾಗಿ ನಡೆಯುತ್ತಿರುವ ಪ್ರಕ್ರಿಯೆ. 3-4 ದಿನಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲಾಗುವುದು ಎಂದರು.

Translate »